AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರೀಕ್ಷೆಗೂ ಮೀರಿ ಗೆಲುವು ಸಾಧಿಸಿದ್ದೀರಿ; ಸಿಎಂ ಸಿದ್ದರಾಮಯ್ಯ ಬಗ್ಗೆ ಅಮಿತ್ ಶಾ ಮೆಚ್ಚುಗೆ ಮಾತು

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ಖರೀದಿ ವಿಚಾರವಾಗಿ ರಾಜ್ಯ ಸರ್ಕಾರ ಮತ್ತು ಬಿಜೆಪಿ ನಾಯಕರ ಮಧ್ಯೆ ವಾಕ್ಸಮರ ಮುಂದುವರೆಯುತ್ತಿರುವ ಬೆನ್ನಲ್ಲೇ ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಿಎಂ ಸಿದ್ಧರಾಮಯ್ಯ ಭೇಟಿ ಮಾಡಿದ್ದಾರೆ.

ನಿರೀಕ್ಷೆಗೂ ಮೀರಿ ಗೆಲುವು ಸಾಧಿಸಿದ್ದೀರಿ; ಸಿಎಂ ಸಿದ್ದರಾಮಯ್ಯ ಬಗ್ಗೆ ಅಮಿತ್ ಶಾ ಮೆಚ್ಚುಗೆ ಮಾತು
ಅಮಿತ್ ಶಾ ಭೇಟಿಯಾದ ಸಿಎಂ ಸಿದ್ದರಾಮಯ್ಯ
ಗಂಗಾಧರ​ ಬ. ಸಾಬೋಜಿ
| Edited By: |

Updated on:Jun 21, 2023 | 11:03 PM

Share

ದೆಹಲಿ: ರಾಜ್ಯ ಸರ್ಕಾರ ಕೊಟ್ಟಿರುವ ವಾಗ್ದಾನದಂತೆ ಜುಲೈ 1ರಿಂದ ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ. ಅಕ್ಕಿ ಕೊಡಬೇಕು. ಗಡುವು ಹತ್ತಿರವಾಗುತ್ತಿದ್ದರೂ ಹೇಳಿದ ಸಮಯಕ್ಕೆ ಕೊಡುತ್ತಾರೆ ಎನ್ನುವ ಯಾವುದೇ ಗ್ಯಾರಂಟಿ ಕಾಣುತ್ತಿಲ್ಲ. ಆದರೆ ಇದೇ ಅಕ್ಕಿ ವಿಚಾರಕ್ಕೆ ರಾಜ್ಯ ಮತ್ತು ಕೇಂದ್ರ ನಡುವೆ ವಾಗ್ಯುದ್ಧಕ್ಕೂ ಕಾರಣವಾಗಿದೆ. ಇಂದು ದೆಹಲಿಗೆ ಹೋಗಿರುವ ಸಿಎಂ ಸಿದ್ಧರಾಮಯ್ಯ (Siddaramaiah) ಕೃಷ್ಣಮೆನನ್ ಮಾರ್ಗದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಸಿದ್ದರಾಮಯ್ಯ ಸಿಎಂ ಆದ ನಂತರ ಮೊದಲ ಬಾರಿಗೆ ಅಮಿತ್​ ಶಾ ಅವರನ್ನು ಭೇಟಿ ಆಗಿದ್ದಾರೆ.

ಉಭಯ ನಾಯಕರು ಸಾಕಷ್ಟು ವಿಚಾರಗಳ ಕುರಿತು ಚರ್ಚೆ ಮಾಡಿದ್ದಾರೆ. ಜೊತೆಗೆ ಸಿದ್ದರಾಮಯ್ಯ ಕುರಿತು ಅಮಿತ್ ಶಾ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ. ಚುನಾವಣೆಯಲ್ಲಿ ನಿರೀಕ್ಷೆ ಮೀರಿ ಗೆಲುವು ಸಾಧಿಸಿದ್ದೀರಾ. ಗುಡ್ ಲಕ್​ ಎಂದು ಮೆಚ್ಚಗೆ ಸೂಚಿಸಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ: ಸಿಎಂ ಸಿದ್ಧರಾಮಯ್ಯ

ಅಮಿತ್ ಶಾ ಅವರನ್ನು ಭೇಟಿಗೂ ಮುಂಚೆ ಮಾತನಾಡಿದ ಸಿಎಂ ಸಿದ್ಧರಾಮಯ್ಯ ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ನಿರಾಕರಿಸುತ್ತಿದೆ. ಕೇಂದ್ರದ ಬಿಜೆಪಿ ಸರ್ಕಾರ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ರಾಜ್ಯಕ್ಕೆ ಅಕ್ಕಿ ನೀಡುವ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ಜುಲೈ 1ಕ್ಕೆ ಅಕ್ಕಿ ನೀಡುವ ಪ್ರಕ್ರಿಯೆ ಆರಂಭಿಸಲು ನಿರ್ಧರಿಸಿದ್ದೇವೆ. ಈಗಾಗಲೇ ತೆಲಂಗಾಣ, ಪಂಜಾಬ್ ಸೇರಿ ಎಲ್ಲಾ ಕಡೆ ಕೇಳಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭೇಟಿಗೆ ಅವಕಾಶ ನೀಡುತ್ತಿಲ್ಲ; ಕೇಂದ್ರ ಸಚಿವ ಪಿಯೂಷ್ ಗೋಯಲ್ ವಿರುದ್ಧ ಮುನಿಯಪ್ಪ ಆರೋಪ

ಆಂಧ್ರಪದೇಶದಿಂದ ಅಕ್ಕಿ ಖರೀದಿಸಿದರೆ 1 ಕೆಜಿಗೆ 42 ರೂ. ಆಗುತ್ತೆ. 1 ಲಕ್ಷ ಮೆಟ್ರಿಕ್ ಟನ್ ಅಕ್ಕಿ 1 ತಿಂಗಳು ಕೊಡಲು ಮಾತ್ರ ಸಾಧ್ಯವಿದೆ. ಕೇವಲ 1 ತಿಂಗಳು ನೀಡುವುದಾಗಿ ಛತ್ತೀಸ್​ಗಢ ಸರ್ಕಾರ ಹೇಳಿದೆ. ತೆಲಂಗಾಣ ಕೇವಲ ಗೋಧಿ ಕೊಡಲು ಮಾತ್ರ ಸಾಧ್ಯವೆಂದು ಹೇಳಿದೆ. ರಾಜ್ಯದಲ್ಲಿ ಬಹಳ ಅಕ್ಕಿ ಸಿಗಲ್ಲ, ಓಪನ್ ಮಾರ್ಕೆಟ್​​ಗೆ ಹೋಗಬೇಕು. ಟೆಂಡರ್ ಕರೆಯಬೇಕು, ಹೀಗೆಲ್ಲ ಆದರೆ ಇನ್ನೂ 2 ತಿಂಗಳು ಆಗುತ್ತೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:48 pm, Wed, 21 June 23

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು