Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಬಗ್ಗೆ ಗೌರವದಿಂದ ಮಾತನಾಡಬೇಕು: ಎಲ್ಲ ನಾಯಕರಿಗೆ ಸಿದ್ದರಾಮಯ್ಯ ಖಡಕ್ ವಾರ್ನಿಂಗ್

ರೈತರ ಬಗ್ಗೆ ಸಚಿವ ಶಿವಾನಂದ ಪಾಟೀಲ್​ ಹೇಳಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೌನಮುರಿದಿದ್ದಾರೆ. ಅನ್ನದಾತರಾದ ರೈತರ ಬಗ್ಗೆ ನಾವು ಎಚ್ಚರಿಕೆಯಿಂದ ಮಾತ್ರವಲ್ಲ ಗೌರವದಿಂದ ಮಾತನಾಡಬೇಕು. ಹಗುರ ಮಾತುಗಳ ಮೂಲಕ ರೈತರಿಗೆ ಅವಮಾನವಾಗುವಂತೆ ಮಾಡಬಾರದು ಎಂದು ಸಚಿವ ಶಿವಾನಂದ್ ಪಾಟೀಲ್​ರ ಹೇಳಿಕೆಯನ್ನ ಸಮರ್ಥನೆ ದಾಟಿಯಲ್ಲಿ ಖಂಡಿಸಿದ್ದಾರೆ.

ರೈತರ ಬಗ್ಗೆ ಗೌರವದಿಂದ ಮಾತನಾಡಬೇಕು: ಎಲ್ಲ ನಾಯಕರಿಗೆ ಸಿದ್ದರಾಮಯ್ಯ ಖಡಕ್ ವಾರ್ನಿಂಗ್
ಸಚಿವ ಶಿವಾನಂದ್ ಪಾಟೀಲ್, ಸಿಎಂ ಸಿದ್ದರಾಮಯ್ಯ
Follow us
ಗಂಗಾಧರ​ ಬ. ಸಾಬೋಜಿ
|

Updated on:Dec 26, 2023 | 6:13 PM

ಬೆಂಗಳೂರು, ಡಿಸೆಂಬರ್​26: ಅನ್ನದಾತರಾದ ರೈತರ ಬಗ್ಗೆ ಎಚ್ಚರಿಕೆಯಿಂದ ಮಾತ್ರವಲ್ಲ, ಗೌರವದಿಂದ ಮಾತನಾಡಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಸಾಲಮನ್ನಾ ಆಸೆಗಾಗಿ ರೈತರು ಬರಗಾಲ ಬಯಸುತ್ತಾರೆ ಎಂಬ ಸಚಿವ ಶಿವಾನಂದ ಪಾಟೀಲ್​ ಹೇಳಿಕೆಯನ್ನು ಖಂಡಿಸಿದ್ದಾರೆ. ಆ ಮೂಲಕ ಸಂಪುಟ ಸಚಿವರ ಹೇಳಿಕೆ ಕುರಿತು ಸಿಎಂ ಸಿದ್ದರಾಮಯ್ಯ ಮೌನಮುರಿದಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಅನ್ನದಾತರಾದ ರೈತರ ಬಗ್ಗೆ ನಾವು ಎಚ್ಚರಿಕೆಯಿಂದ ಮಾತ್ರವಲ್ಲ ಗೌರವದಿಂದ ಮಾತನಾಡಬೇಕು. ಹಗುರ ಮಾತುಗಳ ಮೂಲಕ ರೈತರಿಗೆ ಅವಮಾನವಾಗುವಂತೆ ಮಾಡಬಾರದು. ಇದು ಪ್ರತಿಯೊಬ್ಬರು ಕಡ್ಡಾಯವಾಗಿ ಅನುಸರಿಸಿಕೊಂಡು ಬರಬೇಕಾದ ನೀತಿ ಸಂಹಿತೆ.

ರೈತ ಕುಟುಂಬದಿಂದ ಬಂದಿರುವ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರಿಗೆ ರೈತರನ್ನು ಅವಮಾನಿಸಬೇಕೆಂಬ ದುರುದ್ದೇಶ ಖಂಡಿತ ಇರಲಾರದು. ತನ್ನ ಜೊತೆಗಿದ್ದ ರೈತರೊಂದಿಗಿನ ಸಲಿಗೆಯಿಂದ ಕೆಲವು ಮಾತುಗಳನ್ನು ಆಡಿದ್ದಾರೆ. ಆದರೆ ಇದು ಸಮಸ್ತ ರೈತ ಸಮುದಾಯಕ್ಕೆ ಅನ್ವಯ ಮಾಡುವಾಗ ವಿಪರೀತ ಅರ್ಥಕ್ಕೆ ಕಾರಣವಾಗುತ್ತದೆ. ಇದು ಸಲ್ಲದು ಎಂದಿದ್ದಾರೆ.

ಇದನ್ನೂ ಓದಿ: ಬಿಜೆಪಿಯನ್ನು ಬಿಎಸ್​ವೈ ಕುಟುಂಬಕ್ಕೆ ರಿಜಿಸ್ಟರ್ ಮಾಡಿದ್ದಾರೆ: ಪರೋಕ್ಷವಾಗಿ ಹೈಕಮಾಂಡ್ ವಿರುದ್ಧ ಗುಡುಗಿದ ಯತ್ನಾಳ್​

ರೈತರ ಕಲ್ಯಾಣಕ್ಕಾಗಿ ಕಿಂಚಿತ್ತೂ ಕೆಲಸ ಮಾಡದೆ ಇರುವ, ಮೂಲತ: ರೈತ ವಿರೋಧಿಯಾಗಿರುವ ಬಿಜೆಪಿಯ ನಾಯಕರು ಇಂತಹದ್ದೇ ಅವಕಾಶಕ್ಕಾಗಿ ಕಾದು ಕೂತವರಂತೆ ಶಿವಾನಂದ ಪಾಟೀಲರ ಮಾತುಗಳನ್ನು ವಿವಾದವನ್ನಾಗಿ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬೀಜ-ಗೊಬ್ಬರ ಕೊಡಿ ಎಂದು ಕೇಳಿದ ರೈತರನ್ನು ಗುಂಡಿಕ್ಕಿ ಸಾಯಿಸಿದ ಮತ್ತು ರೈತರ ಸಾಲ ಮನ್ನಾ ಮಾಡಿ ಎಂದು ಕೇಳಿದರೆ ನೋಟ್ ಪ್ರಿಂಟಿಂಗ್ ಮೆಷಿನ್ ಇದೆಯೇ ಎಂದು ಕೇಳಿದ ಬಿಜೆಪಿ ಪಕ್ಷದ ನಾಯಕರಿಗೆ ಕಾಂಗ್ರೆಸ್ ಪಕ್ಷದ ವಿರುದ್ಧ ಮಾತನಾಡುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ್ದಾರೆ.

ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಬಿಜೆಪಿ ನಾಯಕರು ರೈತರ ಕಲ್ಯಾಣಕ್ಕಾಗಿ ಏನು ಮಾಡಿದ್ದಾರೆ? ನಾವು ನಿಜವಾದ ರೈತ ಮಿತ್ರರು, ಬಿಜೆಪಿಯವರಂತೆ ನಕಲಿ ಮಿತ್ರರಲ್ಲ. ರೈತರ ಬಗೆಗಿನ ನಮ್ಮ ಪ್ರೀತಿ-ಅಭಿಮಾನಕ್ಕೆ ನಮ್ಮ ಸರ್ಕಾರದ ಕಳೆದ ಆರು ತಿಂಗಳುಗಳ ಅವಧಿಯಲ್ಲಿ ಜಾರಿಗೆ ತಂದಿರುವ ರೈತ ಪರ ಕಾರ್ಯಕ್ರಮಗಳೇ ಸಾಕ್ಷಿ ಎಂದಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಮುಗ್ದ ಅಲ್ಲ, ಧೂರ್ತ : ಸಿಎಂ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತೀವ್ರ ವಾಗ್ದಾಳಿ

ರಾಜ್ಯದಲ್ಲಿ ಬರಗಾಲದಿಂದ ನೊಂದಿರುವ ರೈತರಿಗೆ ಕೇಂದ್ರ ಸರ್ಕಾರ ಚಿಕ್ಕಾಸಿನ ಪರಿಹಾರ ನೀಡದೆ ಇದ್ದರೂ ನಾವು ಪ್ರತಿ ರೈತ ಕುಟುಂಬಗಳಿಗೆ ಎರಡು ಸಾವಿರ ರೂಪಾಯಿಗಳನ್ನು ನೀಡಿದ್ದೇವೆ. ಸಹಕಾರಿ ಬ್ಯಾಂಕುಗಳಿಂದ ಪಡೆದಿರುವ ಮಧ್ಯಮಾವಾಧಿ ಮತ್ತು ದೀರ್ಘಾವಧಿ ಸಾಲಗಳ ಬಡ್ಡಿ ಮನ್ನಾ ಮಾಡಲು ನಿರ್ಧರಿಸಿದ್ದೇವೆ. ರಾಜ್ಯದ 24 ಜಿಲ್ಲೆಗಳ 106 ತಾಲ್ಲೂಕುಗಳಲ್ಲಿ 100 ಕೋಟಿ ರೂ.ವೆಚ್ಚದಲ್ಲಿ ಕೃಷಿ ಭಾಗ್ಯ ಯೋಜನೆಗೆ ಚಾಲನೆ ನೀಡಿದ್ದೇವೆ.

ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆಗಳ ಕಾಲ ಮೂರು ಫೇಸ್ ವಿದ್ಯುತ್, ಹದಿನೈದು ವರ್ಷ ಸಾಗುವಳಿ ಮಾಡಿದ ಬಗರ್ ಹುಕುಂ ಭೂಮಿಗಳ ಸಕ್ರಮ ಗೊಳಿಸಲು ತೀರ್ಮಾನಿಸಿದ್ದೇವೆ. ಅಕ್ರಮ ವಿದ್ಯುತ್ ಸಂಪರ್ಕ ಹೊಂದಿರುವ 4 ಲಕ್ಷ ಕೃಷಿ ಪಂಪ್ ಸೆಟ್ ಗಳ ಸಕ್ರಮ ಮಾಡುವ ದಿಟ್ಟ ನಿರ್ಧಾರ ಕೈಗೊಂಡಿದ್ದೇವೆ. ಕೃಷಿಯಂತ್ರಧಾರೆ ಕೇಂದ್ರಗಳನ್ನು ಬಲಪಡಿಸಲು 100 ಕೋಟಿ ರೂ.ವೆಚ್ಚದಲ್ಲಿ ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲ ಮನ್ನಾ ಮಾಡುವಂತೆ ದೇಶಾದ್ಯಂತ ರೈತರು ಒತ್ತಾಯಿಸುತ್ತಿದ್ದರೆ, ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರ ರೈತರ ಕತ್ತು ಹಿಸುಕಿ ಸಾಯಿಸುವ ಕರಾಳ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲು ಏನೆಲ್ಲ ಕಸರತ್ತು ನಡೆಸಿತ್ತು ಎನ್ನುವುದನ್ನು ಇಡೀ ದೇಶ ಕಂಡಿದೆ. ಕೃಷಿ ಕ್ಷೇತ್ರವನ್ನು ಕಾರ್ಪೋರೇಟ್ ಧಣಿಗಳಿಗೆ ಒತ್ತೆ ಇಡುವ ಬಿಜೆಪಿಯ ಹುನ್ನಾರವನ್ನು ದೇಶದ ರೈತರು ಅರ್ಥಮಾಡಿಕೊಂಡಿದ್ದಾರೆ. ತಮ್ಮ ರೈತ ವಿರೋಧಿ ಕೃತ್ಯಗಳನ್ನು ಮುಚ್ಚಿಹಾಕಲು ಬಿಜೆಪಿ ನಾಯಕರು ಆಗಾಗ ತಿರುಚಿದ ಹೇಳಿಕೆಗಳನ್ನು ಹಿಡ್ಕೊಂಡು ಎದೆ ಬಡಿದುಕೊಳ್ಳುತ್ತಾ ಇರುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:12 pm, Tue, 26 December 23

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ