AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಸಿದ್ದರಾಮಯ್ಯ ಆಕ್ಷೇಪ; ಸಿಎಂ ಹೇಳಿದ್ದೇನು?

‘ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ’’ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಕರೆ ಅತ್ಯಂತ ಪ್ರಚೋದನಕಾರಿಯಾದುದು ಮಾತ್ರವಲ್ಲ ಸಂವಿಧಾನ ವಿರೋಧಿಯಾದುದು. ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕೆಂದು ನಾನು ಆಗ್ರಹಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಸಿದ್ದರಾಮಯ್ಯ ಆಕ್ಷೇಪ; ಸಿಎಂ ಹೇಳಿದ್ದೇನು?
ಮುಖ್ಯಮಂತ್ರಿ ಸಿದ್ದರಾಮಯ್ಯ
ಗಣಪತಿ ಶರ್ಮಾ
|

Updated on: Sep 07, 2023 | 7:23 PM

Share

ಬೆಂಗಳೂರು, ಸೆಪ್ಟೆಂಬರ್ 7: ತಮಿಳುನಾಡು ಸಚಿವ, ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ (Udhayanidhi Stalin) ಅವರ ವಿವಾದಾತ್ಮಕ ‘ಸನಾತನ ಧರ್ಮ’ (Sanatana Dharma) ಹೇಳಿಕೆಗೆ ತಕ್ಕ ಉತ್ತರ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿರುವುದಕ್ಕೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ‘ಎಕ್ಸ್​​’ನಲ್ಲಿ (Twitter) ಸರಣಿ ಪೋಸ್ಟ್ ಮಾಡಿರುವ ಅವರು, ಮೋದಿ ಅವರ ಹೇಳಿಕೆ ಪ್ರಚೋದನಕಾರಿಯಾದುದು ಎಂದು ಉಲ್ಲೇಖಿಸಿದ್ದಾರೆ.

‘ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ’’ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಕರೆ ಅತ್ಯಂತ ಪ್ರಚೋದನಕಾರಿಯಾದುದು ಮಾತ್ರವಲ್ಲ ಸಂವಿಧಾನ ವಿರೋಧಿಯಾದುದು. ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕೆಂದು ನಾನು ಆಗ್ರಹಿಸುತ್ತೇನೆ. ವಿಷಯ – ವಿದ್ಯಮಾನಗಳೇನೇ ಇರಲಿ, ಯಾರಾದರೂ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಅಂತಹವರ ವಿರುದ್ಧ ಕ್ರಮಕೈಗೊಳ್ಳಬೇಕಾಗುತ್ತದೆ. ಇದರ ಬದಲಿಗೆ ತಕ್ಕ ಪ್ರತ್ಯುತ್ತರ ನೀಡಿ ಎಂದು ಜನರನ್ನು ಪ್ರಚೋದಿಸುವುದು, ಕಾನೂನನ್ನು ಕೈಗೆತ್ತಿಕೊಳ್ಳಲು ನೀಡುವ ಕರೆಯಾಗುತ್ತದೆ. ಇದನ್ನು ಪ್ರಧಾನಿ ಮಾಡಿದರೂ ಅಪರಾಧವೇ ಆಗುತ್ತದೆ ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.

ಮೋದೊ ಅವರು ಕೇವಲ ಬಿಜೆಪಿಯ ನಾಯಕರಲ್ಲ, ಅವರು ಸಾಂವಿಧಾನಿಕ ಹುದ್ದೆಯಾದ ಪ್ರಧಾನಮಂತ್ರಿಯ ಕುರ್ಚಿಯಲ್ಲಿ ಕುಳಿತಿರುವವರು. ಹೀಗಿರುವಾಗ ಅವರ ನಡೆ-ನುಡಿ ಮತ್ತು ಕ್ರಿಯೆ-ಪ್ರತಿಕ್ರಿಯೆ ಆ ಸ್ಥಾನದ ಘನತೆ-ಗೌರವ ಮತ್ತು ಜವಾಬ್ದಾರಿಗಳಿಗೆ ತಕ್ಕಂತೆ ಇರಬೇಕಾಗಿರುವುದು ರಾಜಧರ್ಮವಾಗಿದೆ. ನರೇಂದ್ರ ಮೋದಿ ಅವರು ಇನ್ನೂ ಆರ್​​ಎಸ್ಎಸ್​ನ ತನ್ನ ಪೂರ್ವಾಶ್ರಮದ ಗುಂಗಿನಲ್ಲಿದ್ದಂತೆ ಕಾಣುತ್ತಿದೆ. ತಾನು ಈ ದೇಶದ 140 ಕೋಟಿ ಜನರಿಗೂ ಪ್ರಧಾನಿ ಎನ್ನುವುದನ್ನು ಮರೆತಂತಿದೆ. ಪ್ರಧಾನಿಯವರ ಇಂತಹ ಹೇಳಿಕೆಗಳಿಂದ ಪ್ರಚೋದಿತರಾಗಿ ಅವರದ್ದೇ ಪಕ್ಷ ಮತ್ತು ಸಂಘಟನೆಯ ಅನೇಕ ನಾಯಕರು ಹಿಂಸಾಚಾರಕ್ಕೆ ಕರೆನೀಡುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ ಎಂದು ಸಿದ್ದರಾಮಯ್ಯ ಎಕ್ಸ್​ ಪೋಸ್ಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಸನಾತನ ಧರ್ಮದ ಬಗ್ಗೆ ಉದಯನಿಧಿ ಹೇಳಿಕೆ ವಿವಾದ: ತಕ್ಕ ಉತ್ತರ ನೀಡಬೇಕು ಎಂದ ನರೇಂದ್ರ ಮೋದಿ

ಪ್ರಧಾನಿ ಮೋದಿ ಅವರ ಹಿಂದಿನ ನಡವಳಿಕೆಗಳನ್ನು ಗಮನಿಸಿದರೆ ಅವರ ಈಗಿನ ಹೇಳಿಕೆಗಳು ಅಚ್ಚರಿ ಹುಟ್ಟಿಸುವುದಿಲ್ಲ. ಗುಜರಾತ್ ಗಲಭೆಯ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿಯವರು ನಡೆದುಕೊಂಡ ರೀತಿಯ ಬಗ್ಗೆ ಆಗಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರೇ ಅಸಮಾಧಾನ ವ್ಯಕ್ತಪಡಿಸಿ, ರಾಜಧರ್ಮ ಪಾಲಿಸಲು ಕರೆ ಕೊಟ್ಟಿದ್ದರು. ದಿವಂಗತ ವಾಜಪೇಯಿ ಅವರ ಆ ಬುದ್ಧಿಮಾತನ್ನೇ ಈ ಸಂದರ್ಭದಲ್ಲಿ ಮೋದಿಯವರಿಗೆ ನೆನಪು ಮಾಡಿಕೊಡಲು ಬಯಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!