ಮೋದಿ-ದೇವೇಗೌಡ ಭಾಯಿಭಾಯಿ: ಜೆಡಿಎಸ್ ನಾಯಕ ಎಚ್​ಡಿ ದೇವೇಗೌಡ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಜೆಡಿಎಸ್​ನವರು ಅನುಕೂಲಸಿಂಧು ಮತ್ತು ಅವಕಾಶವಾದಿ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ಯಾವುದೇ ಸಿದ್ದಾಂತ ಅಥವಾ ಕಾರ್ಯಕ್ರಮ ಇಲ್ಲ ಎಂದು ಹೇಳಿದರು.

ಮೋದಿ-ದೇವೇಗೌಡ ಭಾಯಿಭಾಯಿ: ಜೆಡಿಎಸ್ ನಾಯಕ ಎಚ್​ಡಿ ದೇವೇಗೌಡ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ಎಚ್​.ಡಿ.ದೇವೇಗೌಡ ಮತ್ತು ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)

ಬೆಂಗಳೂರು: ಗೋ ಹತ್ಯೆ ನಿಷೇಧ ಕಾಯ್ದೆ ಬಂದಾಗ ಜೆಡಿಎಸ್ ನಾಯಕ ಎಚ್​.ಡಿ.ದೇವೇಗೌಡರು ಮಾತನಾಡಲಿಲ್ಲ. ಈಗ ನರೇಂದ್ರ ಮೋದಿ ಜೊತೆ ಭಾಯಿಭಾಯಿ ಅಂತಾರೆ. ಇವರು ಮೋದಿ ಜೊತೆ ಸೇರಿ ಸರ್ಕಾರ ಮಾಡಿದವರು. ಜೆಡಿಎಸ್‌ನವರದ್ದು ಅವಕಾಶವಾದಿ ರಾಜಕಾರಣ. ಅವರಿಗೆ ಯಾವುದೇ ಸಿದ್ಧಾಂತ, ಕಾರ್ಯಕ್ರಮ ಇಲ್ಲ. ಅದಕ್ಕೆ ಜೆಡಿಎಸ್ ಪಕ್ಷವನ್ನು ಬಿಜೆಪಿಯ ಬಿ ಟೀಂ ಎಂದು ಹೇಳುವುದು. ನಾನು ಬಿ ಟೀಂ ಎಂದು ಹೇಳಿದರೆ ಅವರಿಗೆ ಸಿಟ್ಟು ಬರುತ್ತೆ. ಆದರೆ ನನ್ನ ಮಾತಿನಲ್ಲಿ ಯಾವುದೇ ಅನುಮಾನ ಬೇಡ. ಜೆಡಿಎಸ್​ನವರು ಅನುಕೂಲಸಿಂಧು ಮತ್ತು ಅವಕಾಶವಾದಿ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ಯಾವುದೇ ಸಿದ್ದಾಂತ ಇಲ್ಲ, ಕಾರ್ಯಕ್ರಮಗಳೂ ಇಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕದಲ್ಲಿ ನಡೆಯುತ್ತಿರುವ ಕಮಿಷನ್ ದಂಧೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗುತ್ತಿಗೆದಾರರು ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಶೇ 40ರಷ್ಟು ಕಮಿಷನ್ ದಂಧೆ ನಡೆಯುತ್ತಿದೆ. ಈ ಬಗ್ಗೆ ತಕ್ಷಣ ತನಿಖೆ ಮಾಡಿಸಬೇಕಲ್ಲವೇ ಎಂದು ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಬಿಜೆಪಿ ಅಂದರೆ ಭ್ರಷ್ಟ ಜನತಾ ಪಾರ್ಟಿ ಎಂದು ಹೊಸ ವಿವರಣೆ ನೀಡಿದರು. ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಸ್ವತಃ ಗೃಹಸಚಿವರಾಗಿದ್ದವರು. ಬಿಜೆಪಿಯಲ್ಲಿರುವವರ ಭ್ರಷ್ಟಾಚಾರದ ಬಗ್ಗೆ ಬೊಮ್ಮಾಯಿಗೆ ಗೊತ್ತಿರಲಿಲ್ಲವೇ ಎಂದು ಪ್ರಶ್ನಿಸಿದರು.

ನಮ್ಮ ಸರ್ಕಾರದಲ್ಲಿ ಹಲವು ಯೋಜನೆಗಳು ಜಾರಿಯಾಗಿವೆ. ಆದರೆ ಈಗ ಎಲ್ಲಾ ಯೋಜನೆಗಳನ್ನು ನಿಲ್ಲಿಸಿದ್ದಾರೆ. ಇವರು ನಮಗೆ ದೇಶ ಭಕ್ತಿ ಪಾಠವನ್ನು ಮಾಡುತ್ತಾರೆ ಎಂದು ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ನಾವು ಹಲವು ಯೋಜನೆಗಳನ್ನ ತಂದಿದ್ದೆವು. ಆದರೆ ಇವರು ಎಲ್ಲಾ ಯೋಜನೆ ನಿಲ್ಲಿಸಿದ್ದಾರೆ. ಅದಾನಿ ವಿಶ್ವದಲ್ಲೇ ನಂಬರ್ ವನ್ ಶ್ರೀಮಂತ. ಅಂವಾನಿಗಿಂತ ದೊಡ್ಡ ಶ್ರೀಮಂತನಾಗಿದ್ದಾನೆ. ಇದಕ್ಕೆ ಪ್ರಧಾನಿ ಮೋದಿಯವರ ಕುಮ್ಮಕ್ಕಿದೆ. ಅದಾನಿ ಬಿಕಾಂ ಓದಲು ಅವನಿಗಾಗಲಿಲ್ಲ. ಅಂತವನು ಇಂದು ಏಷ್ಯಾದಲ್ಲೇ ದೊಡ್ಡ ಶ್ರೀಮಂತ. ಇವರು ನಮಗೆ ದೇಶ ಭಕ್ತಿ ಪಾಠ ಮಾಡ್ತಾರೆ. ಸ್ವಾತಂತ್ರ್ಯಕ್ಕಾಗಿ ಒಬ್ಬರಾದರು ಪ್ರಾಣ ತ್ಯಾಗ‌ ಮಾಡಿದ್ರಾ. ಮೋದಿನೇ ಸ್ವಾತಂತ್ರ್ಯ ಬಂದ ಮೇಲೆ ಹುಟ್ಟಿದ ಗಿರಾಕಿ. ಬಿಜೆಪಿ ಅವರಿಗೆ ಮಾನ ಮರ್ಯಾದೆ ಇಲ್ಲ. ಬಿಜೆಪಿಯವರು ಭಂಡರು ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಇದೇ ವೇಳೆ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರ ಹೋರಾಟದಲ್ಲಿ 700 ರೈತರು ಮೃತಪಟ್ಟಿದ್ದಾರೆ. ಲಖೀಂಪುರ್ ಕೇರಿಯಲ್ಲಿ ರೈತರ ಮೇಲೆ ಕಾರು ಹತ್ತಿಸಿದ್ರು. ಕೇಂದ್ರ ಸಚಿವರ ಮಗನೇ ಕಾರು ಹತ್ತಿಸಿ ಕೊಂದಿದ್ದಾನೆ. ಇವರು ಇನ್ನೆಂಥಾ ಕ್ರೂರಿಗಳಿರಬೇಕೆಂದು ಆಕ್ರೋಶ ಹೊರ ಹಾಕಿದರು.

ಇದನ್ನೂ ಓದಿ: ಸಂಸತ್​ನಲ್ಲಿ ದೇವೇಗೌಡರ ಕೈ ಹಿಡಿದು ಕೂರಿಸಿ, ಆತಿಥ್ಯ ನೀಡಿದ ಪ್ರಧಾನಿ ನರೇಂದ್ರ ಮೋದಿ ಇದನ್ನೂ ಓದಿ: ದೇವೇಗೌಡರು ದೆಹಲಿಯಿಂದ ಬಂದ ನಂತರ ಮೇಲ್ಮನೆ ಚುನಾವಣೆ ಮೈತ್ರಿ ಬಗ್ಗೆ ನಿರ್ಧಾರ: ಎಚ್.ಡಿ.ಕುಮಾರಸ್ವಾಮಿ

Published On - 3:11 pm, Thu, 2 December 21

Click on your DTH Provider to Add TV9 Kannada