ಬೆಂಗಳೂರು: ದೇಶದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು (ಜೂನ್ 20) ರಾಜ್ಯಕ್ಕೆ ಆಗಮಿಸುತ್ತಾರೆ. ಬೆಳಿಗ್ಗೆ 11.55ಕ್ಕೆ ಸರಿಯಾಗಿ ವಿಶೇಷ ವಿಮಾನ ಮೂಲಕ ಬೆಂಗಳೂರಿಗೆ ಬಂದು ಇಳಿಯುತ್ತಾರೆ. ಪ್ರಧಾನಿ ಬರುವ ಮುನ್ನ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಟ್ವೀಟ್ ಮಾಡಿ ತನ್ನ ಪ್ರಶ್ನೆಗಳಿಗೆ ಉತ್ತಿರಸುವಂತೆ ಹೇಳಿದ್ದಾರೆ. ಮೋದಿಗೆ 4 ಪ್ರಶ್ನೆಗಳನ್ನ ಕೇಳಿರುವ ಸಿದ್ದರಾಮಯ್ಯ, ‘Answermadimodi’ ಹ್ಯಾಷ್ ಟ್ಯಾಗ್ ಬಳಸಿ ಉತ್ತರಿಸುವಂತೆ ಟ್ವೀಟ್ ಮಾಡಿದ್ದಾರೆ.
ದೇಶದ ರೈತರ ಪ್ರತಿರೋಧಕ್ಕೆ ಮಣಿದು ಕರಾಳ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯಲಾಗಿದೆ. ಆದರೆ ರಾಜ್ಯ ಸರ್ಕಾರ ಮಾತ್ರ ಇಲ್ಲಿಯವರೆಗೂ ಕಾಯ್ದೆ ರದ್ದು ಮಾಡಿಲ್ಲ. ಇದು ನಿಮ್ಮ ಸೂಚನೆಯಂತೆ ನಡೆದಿದೆಯಾ? ಅಥವಾ ರಾಜ್ಯ ಸರ್ಕಾರದ ರೈತವಿ ರೋಧಿ ನೀತಿಯೋ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಇದರ ಜೊತೆಗೆ ಮೇಕೆದಾಟು ಯೋಜನೆಗೆ ಅನುಮತಿ ನೀಡಲು ವಿಳಂಬ ಮಾಡುತ್ತಿರುವುದು ಯಾಕೆ? ಇದಕ್ಕೆ ಕಾರಣ ತಮಿಳುನಾಡು ಸರ್ಕಾರದ ಒತ್ತಡವೇ? ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ ಪೂರ್ವಾಗ್ರಹವೇ? ಎಂದು ಮೋದಿಗೆ ಪ್ರಶ್ನೆ ಮಾಡಿದ್ದಾರೆ.
#AnswerMadiModi pic.twitter.com/6z5IxU3PkJ
— Siddaramaiah (@siddaramaiah) June 20, 2022
ಗೃಹ ಸಚಿವ ಅಮಿತ್ ಶಾ ಹಿಂದಿ ಹೇರಲು ಹೊರಟಿದ್ದಾರೆ. ರಾಜ್ಯಗಳ ಮೇಲೆ ಒತ್ತಾಯಪೂರ್ವಕವಾಗಿ ಹೇರಲು ಯತ್ನಿಸುತ್ತಿದ್ದಾರೆ. ಮೋದಿ ಅವರೇ, ಕನ್ನಡದ ಅಸ್ಮಿತೆ ಬಗ್ಗೆ ನಿಮ್ಮ ನಿಲುವೇನು? ನಿಮ್ಮ ಮೌನ ಅಮಿತ್ ಶಾ ಅವರ ಹೇಳಿಕೆಗೆ ಸಹಮತವೋ? ಎಂದು ಟ್ವೀಟ್ ಮಾಡಿರುವ ವಿಪಕ್ಷ ನಾಯಕ, ಬೆಂಗಳೂರು ಜನತೆಯ ಬಹುಕಾಲದ ಬೇಡಿಕೆಯಾದ ಬೆಂಗಳೂರು ಉಪನಗರ ರೈಲು ಯೋಜನೆ ನೆನೆಗುದಿಗೆ ಬೀಳಲು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಕಾರಣವಲ್ಲವೆ? ಈ ಯೋಜನೆಯ ಚಾಲನೆ ಇಷ್ಟೊಂದು ವಿಳಂಬವಾಗಲು ಕೇಂದ್ರ ಸರ್ಕಾರವೇ ಹೊಣೆಯಲ್ಲವೆ? ಎಂದು ಕೇಳಿದ್ದಾರೆ.
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:58 am, Mon, 20 June 22