AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah: ತ್ರಿವರ್ಣ ಧ್ವಜದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿಗೆ ಸಿದ್ದರಾಮಯ್ಯ 13 ಪ್ರಶ್ನೆ

ಸಾಮಾನ್ಯ ಜನರಿಂದ ಬಲಾತ್ಕಾರವಾಗಿ ದುಡ್ಡು ಕಿತ್ತುಕೊಂಡು ರಾಷ್ಟ್ರಧ್ವಜವನ್ನು ಮಾರಾಟ ಮಾಡುತ್ತಿರುವ ನೀವು, ಈ ಮೂಲಕ ರಾಷ್ಟ್ರಧ್ವಜದ ಮೇಲಿನ ಗೌರವಕ್ಕೆ ಕುಂದುತರುತ್ತಿದ್ದೇವೆ ಎಂದು ನಿಮಗೆ ಅನಿಸುವುದಿಲ್ಲವೇ’ ಎಂದು ಪ್ರಶ್ನಿಸಿದ್ದಾರೆ.

Siddaramaiah: ತ್ರಿವರ್ಣ ಧ್ವಜದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿಗೆ ಸಿದ್ದರಾಮಯ್ಯ 13 ಪ್ರಶ್ನೆ
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on:Aug 12, 2022 | 3:39 PM

Share

ಬೆಂಗಳೂರು: ಕರ್ನಾಟಕ ಸರ್ಕಾರವು ಕನ್ನಡದ ಪ್ರಮುಖ ದಿನಪತ್ರಿಕೆಯೊಂದಲ್ಲಿ ನೀಡಿರುವ ‘ಏಕೆ ತ್ರಿವರ್ಣಧ್ವಜ?’ ಜಾಹೀರಾತನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರಿಗೆ 13 ಪ್ರಶ್ನೆಗಳನ್ನು ಹಾಕಿದ್ದಾರೆ. ‘ರಾಷ್ಟ್ರಧ್ವಜವನ್ನು ಒಪ್ಪಿಕೊಂಡಿದ್ದಕ್ಕಾಗಿ ರಾಜ್ಯದ ಜನರ ಪರವಾಗಿ ನಿಮಗೆ ಧನ್ಯವಾದಗಳು. ಇದರ ಜೊತೆಗೆ ಜನರ ಪರವಾಗಿ ನಾನು ಕೇಳುವ ಹದಿಮೂರು ಪ್ರಶ್ನೆಗಳಿಗೆ ತಾಳ್ಮೆಯಿಂದ ಉತ್ತರಿಸುವಿರೆಂದು ನಂಬಿದ್ದೇನೆ’ ಎಂದು ಪ್ರಶ್ನೆಗಳನ್ನು ಆರಂಭಿಸಿದ್ದಾರೆ.

‘ಸ್ವತಂತ್ರ ಭಾರತದಲ್ಲಿ 52 ವರ್ಷಗಳವರೆಗೆ ದೇಶ ಹೆಮ್ಮೆ ಪಡುವ ರಾಷ್ಟ್ರಧ್ವಜವನ್ನು ಆರ್ಎಸ್ಎಸ್ ಕಚೇರಿ ಮೇಲೆ ಹಾರಿಸದೆ ಇರಲು ಕಾರಣವೇನು? 2001ರಲ್ಲಿ ದೇಶಭಕ್ತ ಯುವಕರು ರಾಷ್ಟ್ರಧ‍್ವಜ ಹಾರಿಸಲು ಬಂದಾಗ ಅವರನ್ನು ಹಿಡಿದು ಪೊಲೀಸರಿಗೆ ಕೊಟ್ಟಿರುವುದು ಏಕೆ? ದೇಶಕ್ಕೆ ತ್ರಿವರ್ಣ ಧ್ವಜ ಅಲ್ಲ ಭಗವಾಧ‍್ವಜವೇ ಇರಬೇಕು ಎಂದು ಪ್ರತಿಪಾದಿಸುತ್ತಿದ್ದ ಆರ್​ಎಸ್ಎಸ್ ಸರಸಂಘಚಾಲಕರಾದ ಕೆ.ಬಿ.ಹೆಡಗೆವಾರ್, ಎಂ.ಎಸ್ ಗೋಲ್ವಾಲ್ಕರ್ ಅವರ ನಿಲುವಿನ ಬಗ್ಗೆ ನಿಮ್ಮ ಮತ್ತು ನಿಮ್ಮ ಪಕ್ಷದ ಈಗಿನ ಅಭಿಪ್ರಾಯವೇನು’ ಎಂದು ಅವರು ಕೇಳಿದ್ದಾರೆ.

‘ತ್ರಿವರ್ಣ ಧ್ವಜ ರಾಷ್ಟ್ರೀಯ ಮುನ್ನೋಟ, ಸತ್ಯ, ಇತಿಹಾಸ ಇಲ್ಲವೇ ಪರಂಪರೆಯಿಂದ ಪ್ರೇರಣೆ ಪಡೆದು ತಯಾರಿಸಿದ್ದಲ್ಲ, ಇದು ಫ್ರೆಂಚ್ ಕ್ರಾಂತಿಯ ಘೋಷಣೆಗಳ ಎರವಲು ಎಂದು ಆರ್​ಎಸ್ಎಸ್ ಸರಸಂಘಚಾಲಕ ಗೋಲ್ವಾಲ್ಕರ್ ಅವರು ‘ಬಂಚ್ ಆಫ್ ಥಾಟ್ಸ್’ನಲ್ಲಿ ಹೇಳಿರುವುದನ್ನು ನೀವು ಧಿಕ್ಕರಿಸುತ್ತೀರಾ’ ಎಂದು ಪ್ರಶ್ನಿಸಿದ್ದಾರೆ.

‘ತ್ರಿವರ್ಣ ಧ್ವಜ ಎನ್ನುವುದು ಫ್ರೆಂಚ್ ಕ್ರಾಂತಿಯ ಘೋಷಣೆಗಳಾದ ಸ್ವಾತಂತ್ರ್ಯ, ಸಮಾನತೆ, ಮತ್ತು ಭಾತೃತ್ವದ ಬಗೆಗಿನ ಇಲ್ಲಿನ ಸ್ವಾತಂತ್ರ್ಯ ಹೋರಾಟಗಾರರ ಗೀಳಿನಿಂದ ಹುಟ್ಟು ಪಡೆದಿರುವುದು ಎಂದು ಗೋಲ್ವಾಲ್ಕರ್ ಹೇಳಿರುವುದನ್ನು ಈಗಲೂ ನೀವು ಒಪ್ಪುವಿರಾ? ರಾಷ್ಟ್ರಧ್ವಜವನ್ನು ಭಾರತೀಯರು ಒಪ್ಪಲಾರರು, ಮೂರು ಎನ್ನುವುದೇ ಅಪಶಕುನ. ತ್ರಿವರ್ಣಧ್ವಜ ಖಂಡಿತ ದೇಶದ ಮೇಲೆ ಮಾನಸಿಕವಾಗಿ ದುಷ್ಪರಿಣಾಮವನ್ನು ಬೀರಲಿರುವುದು ಮಾತ್ರವಲ್ಲ ಹಾನಿಕಾರಿಯಾಗಬಹುದು ಎಂದು 1947ರಲ್ಲಿಯೇ ಆರ್​ಎಸ್​ಎಸ್ ಮುಖವಾಣಿ ಆರ್ಗನೈಸರ್ ಪ್ರಕಟಿಸಿದ್ದ ಲೇಖನವನ್ನು ನೀವು ಒಪ್ಪುವಿರಾ’ ಎಂದು ವಿವರಣೆ ಕೋರಿದ್ದಾರೆ.

‘ರಾಷ್ಟ್ರಧ್ವಜದ ಬಗೆಗಿನ ನಿಲುವನ್ನು ಆರ್​ಎಸ್​ಎಸ್ ಬದಲಾಯಿಸಿಕೊಂಡು ‘ಹರ್ ಘರ್ ಮೇ ತಿರಂಗಾ’ ಕಾರ್ಯಕ್ರಮವನ್ನು ಬೆಂಬಲಿಸುತ್ತದೆ ಎಂದು ನಿಮಗನಿಸುತ್ತಿದೆಯೇ? ಬದಲಾಯಿಸಿಕೊಂಡಿದ್ದರೆ ಅದಕ್ಕೆ ಕಾರಣಗಳೇನು ಎಂದು ತಿಳಿಸುವಿರಾ? ಸ್ವಾತಂತ್ರ್ಯದ ಅಮೃತ ಮಹೋತ್ಸವದ ನೆನಪಿಗಾಗಿ ದೇಶದ ಜನ ತಮ್ಮ ಟ್ವೀಟರ್ ಡಿಪಿಯಲ್ಲಿ ರಾಷ್ಟ್ರಧ್ವಜವನ್ನು ಹಾಕಬೇಕೆಂದು ತಿಳಿಸಿದರೂ ಆರ್​ಎಸ್ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ಅವರು ಮಾತ್ರ ಪ್ರಧಾನಿ ನರೇಂದ್ರ ಮೋದಿ ಅವರ ಕರೆಯನ್ನು ಪಾಲಿಸದೆ ಇರಲು ಕಾರಣವೇನು?’ ಎಂದು ಪ್ರಶ್ನಿಸಿದ್ದಾರೆ.

‘ಕಳೆದ 75 ವರ್ಷಗಳಿಂದ ಚಾಲ್ತಿಯಲ್ಲಿದ್ದ ಧ್ವಜ ಸಂಹಿತೆಗೆ ತಿದ್ದುಪಡಿ ಮಾಡಿ ಹತ್ತಿ ಮತ್ತು ರೇಷ್ಮೆ ಬಟ್ಟೆಯ ಬದಲಿಗೆ ಪಾಲಿಸ್ಟರ್ ಬಟ್ಟೆಯಲ್ಲಿಯೂ ರಾಷ್ಟ್ರಧ್ವಜ ತಯಾರಿಸಲು ಅನುಮತಿ ನೀಡಿರುವುದು ರಾಷ್ಟ್ರಧ್ವಜಕ್ಕೆ ಮಾಡಿದ ಅವಮಾನ ಎಂದು ನಿಮಗೆ ಅನಿಸುವುದಿಲ್ಲವೇ? ಮೇಕ್ ಇನ್ ಇಂಡಿಯಾದ ಪ್ರಚಾರ ಮಾಡುವ ಬಿಜೆಪಿ ಸರ್ಕಾರವು ಧ್ವಜಸಂಹಿತೆಗೆ ತಿದ್ದುಪಡಿ ಮಾಡಿ ಪಾಲಿಸ್ಟರ್ ಬಟ್ಟೆ ಬಳಸಲು ಅವಕಾಶ ನೀಡಿರುವುದರಿಂದ ಚೀನಾದಂತಹ ದೇಶಗಳಿಂದ ಕಡಿಮೆ ಬೆಲೆಯ ರಾಷ್ಟ್ರಧ್ವಜಗಳು ಬಂದು ರಾಶಿಬೀಳುತ್ತಿರುವುದನ್ನು ಹೇಗೆ ಸಮರ್ಥಿಸಿಕೊಳ್ಳುತ್ತೀರಿ’ ಎಂದು ಕೇಳಿದ್ದಾರೆ.

‘ಪಾಲಿಸ್ಟರ್ ಬಟ್ಟೆ ಬಳಸಲು ಅವಕಾಶ ನೀಡಿರುವುದು ರಾಷ್ಟ್ರಧ್ವಜವನ್ನು ಜನಪ್ರಿಯಗೊಳಿಸಲಿಕ್ಕಾಗಿಯೇ? ಇಲ್ಲವೇ ನಿಮ್ಮ ಪಕ್ಷದ ಪೋಷಕರಾದ ಉದ್ಯಮಿಗಳಿಗೆ ಪ್ರೋತ್ಸಾಹ ನೀಡಲಿಕ್ಕಾಗಿಯೇ? ಪಾಲಿಸ್ಟರ್ ಬಟ್ಟೆಯಿಂದ ರಾಷ್ಟ್ರಧ್ವಜ ತಯಾರಿಕೆಗೆ ಅವಕಾಶ ನೀಡುವಾಗ ಇಡೀ ದೇಶಕ್ಕೆ ರಾಷ್ಟ್ರಧ್ವಜ ತಯಾರಿಸಿಕೊಡುತ್ತಿದ್ದ ಹುಬ್ಬಳ್ಳಿಯ ಬೆಂಗೇರಿ ಮತ್ತು ಧಾರವಾಡದ ಗರಗ ಖಾದಿ ಕೇಂದ್ರಗಳಿಗೆ ಆಗುವ ಅನ್ಯಾಯವನ್ನು ನೀವು ಪ್ರಧಾನ ಮಂತ್ರಿಗಳ ಗಮನಕ್ಕೆ ತರಲಿಲ್ಲವೇ? ಧ್ವಜ ಸಂಹಿತೆಗೆ ತಿದ್ದುಪಡಿ ತಂದು ಪಾಲಿಸ್ಟರ್ ಬಟ್ಟೆ ಬಳಕೆಗೂ ಅವಕಾಶ ನೀಡಿರುವುದರಿಂದ ಗರಗ ಖಾದಿ ಗ್ರಾಮದ್ಯೋಗ ಕೇಂದ್ರದ ನೂರಾರು ಕಾರ್ಮಿಕರು ಮುಷ್ಕರದಲ್ಲಿ ತೊಡಗಿರುವುದು ನಿಮ್ಮ ಗಮನಕ್ಕೆ ಬಂದಿದೆಯೇ’ ಎಂದು ಕೇಳಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಕರೆಯನ್ನು ಪಾಲಿಸುವ ಏಕೈಕ ಕಾರಣಕ್ಕಾಗಿ ಸಾಮಾನ್ಯ ಜನರಿಂದ ಬಲಾತ್ಕಾರವಾಗಿ ದುಡ್ಡು ಕಿತ್ತುಕೊಂಡು ರಾಷ್ಟ್ರಧ್ವಜವನ್ನು ಮಾರಾಟ ಮಾಡುತ್ತಿರುವ ನೀವು, ಈ ಮೂಲಕ ರಾಷ್ಟ್ರಧ್ವಜದ ಮೇಲಿನ ಗೌರವಕ್ಕೆ ಕುಂದುತರುತ್ತಿದ್ದೇವೆ ಎಂದು ನಿಮಗೆ ಅನಿಸುವುದಿಲ್ಲವೇ’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಭಾರತೀಯ ಗ್ರಾಹಕರಿಗೆ 5ಜಿ ವಲಯದಲ್ಲಿ ಕ್ರಾಂತಿಕಾರಕ ಸೇವೆ ಒದಗಿಸುವ ನಿಟ್ಟಿನಲ್ಲಿ 19,867.8 ಮೆಗಾಹರ್ಟ್ಸ್‌ ಸ್ಪೆಕ್ಟ್ರಮ್‌ ಖರೀದಿಸಿದ ಏರ್‌ಟೆಲ್‌

Published On - 3:36 pm, Fri, 12 August 22

Follow Us
TV9 Web
TV9 Web

TV9 Kannada

Read More
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್