ತೆಲಂಗಾಣದಲ್ಲಿ ಕರ್ನಾಟಕ ಸರ್ಕಾರದ ಜಾಹೀರಾತಿಗೆ ಚುನಾವಣೆ ಆಯೋಗ ತಡೆ: ಸಿದ್ದರಾಮಯ್ಯ ಹೇಳಿದ್ದಿಷ್ಟು

ಸಿದ್ದರಾಮಯ್ಯ ಅವರು ಮುಖ್ಯವಾಗಿ ಮೂರು ವಿಚಾರಗಳ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ತೆಲಂಗಾಣದಲ್ಲಿ ಕರ್ನಾಟಕ ಸರ್ಕಾರದ ಜಾಹಿರಾತಿಗೆ ತಡೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಇನ್ನು ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ವಾಪಸ್ ವಿರುದ್ಧ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿರು ಬಗ್ಗೆ ಮಾತನಾಡಿದ್ದಾರೆ, ಹಾಗೇ ನಿಗಮ ಮಂಡಳಿ ನೇಮಕಾತಿ ಬಗ್ಗೆಯೂ ಪ್ರತಿಕ್ರಿಯಿಸಿದ್ದಾರೆ.

ತೆಲಂಗಾಣದಲ್ಲಿ ಕರ್ನಾಟಕ ಸರ್ಕಾರದ ಜಾಹೀರಾತಿಗೆ ಚುನಾವಣೆ ಆಯೋಗ ತಡೆ: ಸಿದ್ದರಾಮಯ್ಯ ಹೇಳಿದ್ದಿಷ್ಟು
ಮುಖ್ಯಮಂತ್ರಿ ಸಿದ್ದರಾಮಯ್ಯ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Nov 28, 2023 | 2:24 PM

ಬೆಂಗಳೂರು, (ನವೆಂಬರ್ 28): ತೆಲಂಗಾಣದಲ್ಲಿ(Telangana) ಕರ್ನಾಟಕ ಸರ್ಕಾರದ ಜಾಹೀರಾತಿಗೆ ಕೇಂದ್ರ ಚುನಾವಣೆ ಆಯೋಗ ತಡೆ ನೀಡಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು, ಕರ್ನಾಟಕದಲ್ಲಿ ಮಾಡಿರುವ ಸಾಧನೆಯನ್ನು ನಾವು ಅಲ್ಲಿ (ತೆಲಂಗಾಣ) ಹಾಕಿದ್ದೇವೆ. ತೆಲಂಗಾಣ ಮತದಾರರ ಮೇಲೆ ಪ್ರಭಾವ ಬೀರಲು ನಾವು ಮಾಡಿಲ್ಲ. ಚುನಾವಣಾ ಆಯೋಗ ಸೂಚನೆ ಬಳಿಕ ಜಾಹೀರಾತು ತೆರವುಗೊಳಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಇನ್ನು ಇದೇ ವೇಳೆ ನಿಗಮ ಮಂಡಳಿ ನೇಮಕ ವಿಚಾರಕ್ಕೆ ನನ್ನನ್ನು ಪರಿಗಣಿಸಿಲ್ಲ ಎಂಬ ಪರಮೇಶ್ವರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಪರಮೇಶ್ವರ್ ಅಷ್ಟೇ ಅಲ್ಲ, ಯಾರ ಅಭಿಪ್ರಾಯವನ್ನೂ ನಾವು ಪಡೆದಿಲ್ಲ. ನಿಗಮ ಮಂಡಳಿ ನೇಮಕ ಪಟ್ಟಿ ಇನ್ನೂ ಪ್ರಾಥಮಿಕ ಹಂತದಲ್ಲಿದ್ದು, ಫೈನಲ್ ಆಗಿಲ್ಲ, ಯಾರ ಅಭಿಪ್ರಾಯವನ್ನು ನಾವು ಪಡೆದಿಲ್ಲ. ಈಗ ನಾನು ಅದರ ಬಗ್ಗೆ ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಎಂದು ಹೇಳಿದರು.

ಇದನ್ನೂ ಓದಿ: ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ವಾಪಸ್: ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್

ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ವಾಪಸ್ ಪಡೆಯುವ ರಾಜ್ಯ ಸರ್ಕಾರದ ನಡೆ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಕೋರ್ಟ್​ಗೆ ಹೋಗಿರುವ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಪಾಪ ಅವರು ಕೊರ್ಟ್ ಗೆ ಹೋಗಲು ನಾವು ಯಾಕೆ ಬೇಡ ಅಂತೀವಿ. ಕೋರ್ಟ್ ಗೆ ಹೋಗೋದು ಚಾಲೆಂಜ್ ಮಾಡುವುದು. ಲಾಯರ್ ಇಟ್ಟುಕೊಂಡು ವಾದ ಮಾಡುವುದು ಅವರಿಗೆ ಬಿಟ್ಟಿದ್ದು. ಅದು ಅವರ ಇಷ್ಟ. ಅದಕ್ಕೆ ನಾವು ಬೇಡ ಎನ್ನುವುದಕ್ಕೆ ಆಗುತ್ತಾ? ಅಂತಿಮ ತೀರ್ಮಾನ ಮಾಡುವುದು ಕೋರ್ಟ್​ ಎಂದು ತಿಳಿಸಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ