ಬಿಜೆಪಿ, ಜೆಡಿಎಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ, ಹೆಸರು ಬಹಿರಂಗಪಡಿಸಲ್ಲ; ವಿಪಕ್ಷ ನಾಯಕ ಸಿದ್ದರಾಮಯ್ಯ

| Updated By: sandhya thejappa

Updated on: Jan 25, 2022 | 2:31 PM

ಜಿಲ್ಲಾ ಉಸ್ತುವಾರಿ ಸಚಿವರಿಂದ ಜನರ ಸಮಸ್ಯೆ ಬಗೆಹರಿಯಲ್ಲ. ಉಸ್ತುವಾರಿ ಸಚಿವರಾಗಿದ್ದವರು ಅವರ ಕ್ಷೇತ್ರಕ್ಕೆ ಸೀಮಿತರಾಗಿದ್ದಾರೆ. ಜಿಲ್ಲಾ ಉಸ್ತುವಾರಿಗಳ ಮಾತನ್ನು ಯಾರೂ ಕೇಳುವುದಿಲ್ಲ.

ಬಿಜೆಪಿ, ಜೆಡಿಎಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ, ಹೆಸರು ಬಹಿರಂಗಪಡಿಸಲ್ಲ; ವಿಪಕ್ಷ ನಾಯಕ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
Follow us on

ಬಾಗಲಕೋಟೆ: ಬಿಜೆಪಿ (BJP), ಜೆಡಿಎಸ್ (JDS) ಶಾಸಕರು ಕಾಂಗ್ರೆಸ್ಗೆ ಬರುತ್ತಾರೆ. ಬಿಜೆಪಿ, ಜೆಡಿಎಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಆದರೆ ನನ್ನ ಸಂಪರ್ಕದಲ್ಲಿರುವವರ ಬಗ್ಗೆ ಬಹಿರಂಗಪಡಿಸಲ್ಲ ಅಂತ ಬಾದಾಮಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿಕೆ ನೀಡಿದ್ದಾರೆ. ವಲಸಿಗರು ಕಾಂಗ್ರೆಸ್ಗೆ ವಾಪಸಾಗ್ತಾರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ನಮ್ಮ ಪಕ್ಷದ ಸಿದ್ಧಾಂತದ ಮೇಲೆ ನಂಬಿಕೆ ಇರಬೇಕು. ಕಂಡಿಷನ್ ಹಾಕದೆ ಯಾರೇ ಬಂದರೂ ಸ್ವಾಗತವಿದೆ. ಪಕ್ಷದ ಸಿದ್ಧಾಂತ, ನಾಯಕತ್ವವನ್ನು ಒಪ್ಪಿಕೊಳ್ಳಬೇಕು ಎಂದು ಹೇಳಿದರು.

ಸಚಿವರಿಂದ ಜನರ ಸಮಸ್ಯೆ ಬಗೆಹರಿಯಲ್ಲ:
ಜಿಲ್ಲಾ ಉಸ್ತುವಾರಿ ಸಚಿವರಿಂದ ಜನರ ಸಮಸ್ಯೆ ಬಗೆಹರಿಯಲ್ಲ. ಉಸ್ತುವಾರಿ ಸಚಿವರಾಗಿದ್ದವರು ಅವರ ಕ್ಷೇತ್ರಕ್ಕೆ ಸೀಮಿತರಾಗಿದ್ದಾರೆ. ಜಿಲ್ಲಾ ಉಸ್ತುವಾರಿಗಳ ಮಾತನ್ನು ಯಾರೂ ಕೇಳುವುದಿಲ್ಲ. ಯಾಕಂದ್ರೆ ಇವರು ಕಮಿಷನ್ ಮೇಲೆ ನಿಂತುಬಿಟ್ಟಿದ್ದಾರೆ. ಹೀಗಾಗಿ ಉಸ್ತುವಾರಿಗಳ ಮಾತನ್ನು ಯಾರೂ ಕೇಳೋದಿಲ್ಲ ಅಂತ ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್ ಪಕ್ಷ ಯಾವಾಗಲೂ ಚುನಾವಣೆ ಎದುರಿಸಲು ಸಿದ್ಧ. ಜಿಲ್ಲಾ, ತಾಲೂಕು ಪಂಚಾಯಿತಿ, ವಿಧಾನಸಭೆ ಚುನಾವಣೆಗೂ ರೆಡಿ ಇದೀವಿ. ಪಕ್ಷ, ಕಾರ್ಯಕರ್ತರು ಚುನಾವಣೆ ಎದುರಿಸಲು ತಯಾರಾಗಿದ್ದಾರೆ ಎಂದು ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗಿಲ್ಲ. ಕಡಿಮೆ ಆಗಿದೆ ಎಂದು ಹೇಳಿದವರು ಯಾರು? ಆ ರೀತಿ ಹೇಳಿದ ಸಚಿವರಿಗೆ ಪಾಪ ಮಾಹಿತಿ ಇಲ್ಲ ಎಂದರು.

ಬಾದಾಮಿಯಿಂದ ಸ್ಪರ್ಧಿಸಲು ಬೆಂಬಲಿಗರು ಒತ್ತಾಯಿಸುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಚುನಾವಣೆಗೆ ಇನ್ನೂ ಒಂದು ಕಾಲು ವರ್ಷ ಇದೆ, ನೋಡೋಣ. ನಾನು ಈಗಲೇ ಏನೂ ಹೇಳಲಾಗಲ್ಲ. 5-6 ಕಡೆ ಚುನಾವಣೆಗೆ ನಿಲ್ಲುವಂತೆ ನನ್ನನ್ನ ಕರೆಯುತ್ತಿದ್ದಾರೆ. ಅವರನ್ನೆಲ್ಲ ಕೇಳಿ ಚುನಾವಣೆ ಹತ್ತಿರ ಬಂದಾಗ ಹೇಳುತ್ತೇನೆ ಎಂದು ತಿಳಿಸಿದರು.

ಸಿಎಂ ಬೊಮ್ಮಾಯಿ ತಿರುಗೇಟು:
ಬಿಜೆಪಿಯಿಂದ ಹಲವರು ಕಾಂಗ್ರೆಸ್‌ಗೆ ಬರುತ್ತಾರೆಂಬ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್‌ಗೆ ಎಷ್ಟು ಅಭದ್ರತೆ ಕಾಡುತ್ತಿದೆ ಎಂದು ಗೊತ್ತಾಗುತ್ತಿದೆ. ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗುತ್ತಾರೆಂಬ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಪಕ್ಷ ಬೇಡ ಅಂತ ಹೇಳಿ ಈ ಕಡೆ ಬಂದಿದ್ದಾರೆ. ಅದರ ಪರಿಣಾಮವನ್ನು ನೀವೇ ಮುಂದೆ ನೋಡುತ್ತೀರಿ. ಕೆಲವೇ ದಿನಗಳಲ್ಲಿ ಬಿಜೆಪಿ ಬಲವರ್ಧನೆ ಬಗ್ಗೆ ತಿಳಿಯುತ್ತೆ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ

ಸಾಧನೆಗೆ ವಯಸ್ಸಿನ ಹಂಗಿಲ್ಲ ಎಂದು ಸಾಧಿಸಿದ ವೃದ್ಧ; 60ರ ಇಳಿ ವಯಸ್ಸಿನಲ್ಲೂ ಅರಬ್ಬಿ ಸಮುದ್ರದಲ್ಲಿ ಈಜಿ ಗಿನ್ನಿಸ್ ಬುಕ್ ಆಫ್ ರೆಕಾರ್ಡ್​​ಗೆ ಸೇರ್ಪಡೆ

Chris Devlis: ಕೇವಲ 72 ಬಾಲ್​ಗಳಲ್ಲಿ 237 ರನ್ ಚಚ್ಚಿದ ಬ್ಯಾಟರ್: ಕ್ರಿಕೆಟ್ ಜಗತ್ತಿನಲ್ಲಿ ಊಹಿಸಲಾಗದ ಘಟನೆ

Published On - 2:27 pm, Tue, 25 January 22