AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಮೇಶ್ವರ್​ ಸೋಲಿಸಿಲ್ಲ ಎಂದು ಸಿದ್ದರಾಮಯ್ಯ ಆಣೆ ಮಾಡಲಿ: ಕೆ ಎಸ್​​ ಈಶ್ವರಪ್ಪ ಸವಾಲು

ಇವರೇ ಮುಖ್ಯಮಂತ್ರಿ ಘೋಷಣೆ ಮಾಡಿಕೊಂಡ್ರೆ ಚುನಾವಣೆ ಏಕೆ ಎಂದು ಪ್ರಶ್ನಿಸಿದರು. ನಾಳೆ ಚುನಾವಣೆಯಲ್ಲಿ ಕಾಂಗ್ರೆಸ್​​ನ್ನದು‌ ಇದೆ ಪರಿಸ್ಥಿತಿ. ಇವರು ಅವನನ್ನ ಸೋಲಿಸ್ತಾರೆ. ಇವನು ಇವರನ್ನ ಸೋಲಿಸ್ತಾನೆ ಎಂದು ಕ್ರಾಂಗ್ರೆಸ್​ ನಾಯಕರ ವಿರುದ್ದ ಕೆ.ಎಸ್​.ಈಶ್ವರಪ್ಪ ಕಿಡಿಕಾರಿದರು.

ಪರಮೇಶ್ವರ್​ ಸೋಲಿಸಿಲ್ಲ ಎಂದು ಸಿದ್ದರಾಮಯ್ಯ ಆಣೆ ಮಾಡಲಿ: ಕೆ ಎಸ್​​ ಈಶ್ವರಪ್ಪ ಸವಾಲು
ಪರಮೇಶ್ವರ್, ಕೆ.ಎಸ್. ಈಶ್ವರಪ್ಪ, ಸಿದ್ದರಾಮಯ್ಯ
ಗಂಗಾಧರ​ ಬ. ಸಾಬೋಜಿ
|

Updated on: Mar 02, 2023 | 6:35 PM

Share

ಚಾಮರಾಜನಗರ: ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಚಾಮುಂಡೇಶ್ವರಿಯಲ್ಲಿ ಆಣೆ‌ ಮಾಡಿ ಹೇಳಲಿ ನಾನು‌‌ ಪರಮೇಶ್ವರ್ ಸೋಲಿಸಿಲ್ಲ ಅಂತ. ಅದೇ ರೀತಿಯಾಗಿ ಪರಮೇಶ್ವರ ಪ್ರಮಾಣ ಮಾಡಿ ಹೇಳಲಿ ನನ್ನ ಸಿದ್ಧರಾಮಯ್ಯ ಸೋಲಿಸಿಲ್ಲ ಎಂದು ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ (KS Eshwarappa) ಕಾಂಗ್ರೆಸ್​ ನಾಯಕರ ವಿರುದ್ಧ ಹರಿಹಾಯ್ದದರು. ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ವಿಜಯಸಂಕಲ್ಪ ಯಾತ್ರೆಯಲ್ಲಿ ಮಾತನಾಡಿ, ಇವರೇ ಮುಖ್ಯಮಂತ್ರಿ ಘೋಷಣೆ ಮಾಡಿಕೊಂಡ್ರೆ ಚುನಾವಣೆ ಏಕೆ ಎಂದು ಪ್ರಶ್ನಿಸಿದರು. ನಾಳೆ ಚುನಾವಣೆಯಲ್ಲಿ ಕಾಂಗ್ರೆಸ್​​ನ್ನದು‌ ಇದೆ ಪರಿಸ್ಥಿತಿ. ಇವರು ಅವನನ್ನ ಸೋಲಿಸ್ತಾರೆ. ಇವನು ಇವರನ್ನ ಸೋಲಿಸ್ತಾನೆ. ಇದು‌ ಕಾಂಗ್ರೆಸ್​ನ ಇಂದಿನ ಪರಿಸ್ಥಿತಿ. ಬಾದಾಮಿ ಕ್ಷೇತ್ರ ದೂರ ಅಂತಾ ಮಾಜಿ ಸಿಎಂ ಸಿದ್ದರಾಮಯ್ಯ ಹೇಳ್ತಾರೆ. ಹಾಗಾದ್ರೆ ಸಿದ್ದರಾಮಯ್ಯ ಸಿಎಂ‌ ಆದ್ರೆ ರಾಜ್ಯ ಸುತ್ತಲ್ವಾ ಎಂದು ಪ್ರಶ್ನಿಸಿದರು. ಬಾ ಮಗನೇ ಸೋಲಿಸ್ತೀವಿ ಅಂತಾ ಕೋಲಾರದ ದಲಿತರು ಹಾಗೂ ಇತರೆ ಸಮುದಾಯದವರು ಕಾಯುತ್ತಿದ್ದಾರೆ ಎಂದು ಕಿಡಿಕಾರಿದರು.

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಬಂದು ಪಾಪ ತೊಳೆದುಕೊಳ್ಳಿ  

ದೇಶಕ್ಕಾಗಿ ಪ್ರಾಣ ಕೊಡಲು ನಾವು ತೀರ್ಮಾನ ಮಾಡಿದ್ದೇವೆ. ಸಿದ್ದರಾಮಯ್ಯ, ಜಮೀರ್ ಅಹ್ಮದ್​, ಜಿನ್ನಾರದ್ದು ಒಂದೇ ಸಂತತಿ. ಡಿ.ಕೆ. ಶಿವಕುಮಾರ, ಸಿದ್ದರಾಮಯ್ಯ ಅವರೇ ನಿಮ್ಮ ಬಳಿ ಪ್ರಾರ್ಥನೆ ಮಾಡುತ್ತೇನೆ. ಅಯೋಧ್ಯೆಯಲ್ಲಿ ಕಟ್ಟಿರುವ ರಾಮಮಂದಿರ ಉದ್ಘಾಟನೆಗೆ ನೀವು ಬನ್ನಿ. ನಿಮ್ಮ ಪಾಪ ತೊಳೆದುಕೊಳ್ಳಿ. ಕಾಶಿ, ಮಥುರಾದಲ್ಲಿ ಮಂದಿರ ಕೆಡವಿ ಮಸೀದಿಯನ್ನು ಕಟ್ಟಿದ್ದಾರೆ. ಮಸೀದಿ ಧ್ವಂಸ ಮಾಡಿ ದೇವಾಲಯ ಕಟ್ಟೇ ಕಟ್ಟುತ್ತೇವೆ ಎಂದು ಕೆ.ಎಸ್.ಈಶ್ವರಪ್ಪ ಹೇಳಿದರು.

ಇದನ್ನೂ ಓದಿ: ಕೋಲಾರದಲ್ಲಿ ಸಿದ್ದರಾಮಯ್ಯರನ್ನ ಬಿಜೆಪಿಗಿಂತ ಕಾಂಗ್ರೆಸ್​ನವರೇ ಸೋಲಿಸ್ತಾರೆ: ಈಶ್ವರಪ್ಪ ಬಾಂಬ್

ಸೋಮಣ್ಣಗೆ ಆರೋಗ್ಯ ಸರಿ ಇಲ್ಲ

ಇನ್ನು ಇದೇ ವೇಳೆ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಗೈರು ಆಗಿರುವುದಕ್ಕೆ ಪ್ರಕ್ರಿಯಿಸಿದ ಈಶ್ವರಪ್ಪ, ಸೋಮಣ್ಣಗೆ ಆರೋಗ್ಯ ಸರಿ ಇಲ್ಲ. ಹಾಗಾಗಿ ಕಾರ್ಯಕ್ರಮಕ್ಕೆ ಬಂದಿಲ್ಲ. ಯಡಿಯೂರಪ್ಪ ಸೋಮಣ್ಣ ನಡುವೆ ಯಾವುದೇ ಮುಸುಕಿನ ಗುದ್ದಾಟ ಇಲ್ಲ. ನಾನು ಕೂಡ ಯಡಿಯೂರಪ್ಪರನವರ ಕೆಲ ಕಾರ್ಯಕ್ರಮಕ್ಕೆ ಹೋಗಿಲ್ಲ. ಇದನ್ನು ಮುಸುಕಿನ ಗುದ್ದಾಟ ಎಂದು ಹೇಳೋಕೆ ಆಗುತ್ತಾ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಕಾಂಗ್ರೆಸ್ ಸೇರುವುದು ನಿಜ, ಆದರೆ ಮಾ. 5ಕ್ಕಲ್ಲ; ಶಿವಲಿಂಗೇಗೌಡ ಸ್ಪಷ್ಟನೆ

ಪ್ರಧಾನಿ ಮೋದಿಯನ್ನು ಹೊಗಳಿದ ಶೋಭಾ ಕರಂದ್ಲಾಜೆ 

ಶೋಭಾ ಕರಂದ್ಲಾಜೆ ಮಾತನಾಡಿ, ಬಿಜೆಪಿ ದೇಶದ ಜನತೆ ತಲೆತಗ್ಗಿಸುವ ಕೆಲಸ ಯಾವತ್ತೂ ಮಾಡಿಲ್ಲ. ಕೇಂದ್ರದಲ್ಲಿ ಮೋದಿ, ರಾಜ್ಯದಲ್ಲಿ ಯಡಿಯೂರಪ್ಪ ಕೊಟ್ಟ‌ಮಾತು ತಪ್ಪಿಲ್ಲ. ಮನಮೋಹನ್ ಸಿಂಗ್ ವಿದೇಶಕ್ಕೆ ಹೋದರೆ ನಮಸ್ಕಾರ ಮಾಡ್ತಿರಲಿಲ್ಲ. ಮೋದಿ ಎಲ್ಲಿಗೇ ಹೋದರೂ ಕೆಂಪು ಹಾಸಿನ ಸ್ವಾಗತ ದೊರೆಯುತ್ತಿದೆ. ಕೊಟ್ಟ ಮಾತಿನಂತೆ ಇವತ್ತು ಮೋದಿ ದೇಶದ ಚಿತ್ರಣ ಬದಲಿಸಿದ್ದಾರೆ ಎಂದು ಪ್ರಧಾನಿ ಮೋದಿಯನ್ನು ಹಾಡಿ ಹೋಗಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ