
ಬೆಂಗಳೂರು, ನವೆಂಬರ್ 07: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಹೊತ್ತಿರುವ ಕಿಚ್ಚು ಇನ್ನೂ ತಣ್ಣಗಾಗಿಲ್ವಾ? ಏಕೆಂದರೆ ದೆಹಲಿಯಲ್ಲಿ ದೀಪಾವಳಿ ಸ್ನೇಹ ಸಮ್ಮಿಲನಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಹ್ವಾನಿಸಿದ್ರೂ, ಮಾಜಿ ಸಿಎಂ ಸಿದ್ದರಾಮಯ್ಯ ಮಾತ್ರ ಹೋಗಿಲ್ಲ. ಮತ್ತೊಂದೆಡೆ ಅಹಿಂದ ನಾಯಕರ ನಡುವಿನ ಮುಸುಕಿನ ಗುದ್ದಾಟ ಬೀದಿಗೆ ಬಂದಿದೆ.
ಹೌದು, ಸ್ಟಿಂಗ್ ಆಪರೇಷನ್ ವಿಚಾರವಾಗಿ ಸಿದ್ದರಾಮಯ್ಯ ಸರ್ಕಾರದ ತನಿಖಾ ವೈಖರಿಗೆ, ಸರ್ಕಾರ ನಡೆದುಕೊಂಡ ರೀತಿಗೆ ಸಿಟ್ಟಾಗಿದ್ದಾರೆ. ಈ ವಿಚಾರವನ್ನ ಖುದ್ದು ರಾಹುಲ್ ಗಾಂಧಿ ಮುಂದೆಯೂ ಹೇಳಿದ್ದಾರೆ. ಆದರೆ ಶುಕ್ರವಾರ ದೆಹಲಿಯಲ್ಲಿ ರಾಹುಲ್ ಗಾಂಧಿ ಆಯೋಜಿಸಿದ್ದ ದೀಪಾವಳಿ ಸ್ನೇಹ ಸಮ್ಮಿಲನದಿಂದ ಸಿದ್ದರಾಮಯ್ಯ ದೂರ ಉಳಿದಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಪರೋಕ್ಷವಾಗಿ ಹೈಕಮಾಂಡ್ ವಿರುದ್ಧ ಮುನಿಸಿಕೊಂಡಿದ್ದಾರಾ? ಅನ್ನೋ ಪ್ರಶ್ನೆ ಎದ್ದಿದೆ.
ಈ ಮಧ್ಯೆ ಸಿದ್ದರಾಮಯ್ಯ ಪುತ್ರ ಯತಿಂದ್ರ ಇದೇ ವಿಚಾರವಾಗಿ ಮಾತನಾಡಿದ್ದು, ‘ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ದೆಹಲಿ ನಿವಾಸದಲ್ಲೇ ಸ್ಟಿಂಗ್ ವಿಡಿಯೋ ನೆಟ್ ವರ್ಕ್ ಪತ್ತೆಯಾಗಿದೆ. ಅದನ್ನೇ ಕಮಿಷನರ್ ಹೇಳಿದ್ದಾರೆ. ಸ್ಟಿಂಗ್ ವಿಡಿಯೋ ಮಾಡಿದವರು, ಅಪ್ಲೋಡ್ ಮಾಡಿದವರು ಸೇರಿದಂತೆ ಎಲ್ಲರೂ ಪ್ರಕರಣದಲ್ಲಿ ಸಿಕ್ಕಿಬೀಳ್ತಾರೆ, ಎಲ್ಲರ ಮೇಲೂ ಕ್ರಮ ಆಗುತ್ತದೆ ಎಂಬ ವಿಶ್ವಾಸ ನನಗೆ ಇದೆ’ ಎಂದಿದ್ದಾರೆ.
ಇನ್ನೊಂದೆಡೆ ಮಾಜಿ ಸಚಿವ ರಾಜಣ್ಣ ಪುತ್ರ ಪರಿಷತ್ ಸದಸ್ಯ ರಾಜೇಂದ್ರ ಮಾತನಾಡಿ, ‘ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದರಿಂದ ಹಿಡಿದು, ಈಗ ನಡೆಸಿಕೊಳ್ಳುತ್ತಿರುವ ರೀತಿಯಿಂದಾಗೇ, ಅಹಿಂದ ಮತಗಳು ಕಾಂಗ್ರೆಸ್‌ನಿಂದ ದೂರ ಹೋಗುತ್ತಿವೆ. ಆದಷ್ಟು ಬೇಗ ಪಕ್ಷ ಯಾವ ರೀತಿ ನಿರ್ಧಾರ ತೆಗೆದುಕೊಳ್ಳುತ್ತೆ ನೋಡಬೇಕು. ಸಿದ್ದರಾಮಯ್ಯ ಅವರು ರಾಹುಲ್‌ಗಾಂಧಿ ಅವರನ್ನು ಭೇಟಿ ಮಾಡಿ ಬಂದಿದ್ದಾರೆ, ಮುಖ್ಯಮಂತ್ರಿಗಳು ಭೇಟಿ ಮಾಡಿದ್ದಾರೆ. ಪ್ರಸ್ತುತವಾಗಿ ಇನ್ನೂ ಏನೆಲ್ಲಾ ಬೆಳವಣಿಗೆ ಆಗುತ್ತೆ ಕಾದು ನೋಡೋಣ’ ಎಂದಿದ್ದಾರೆ.
ಇದನ್ನೂ ಓದಿ: ಛಲವಾದಿ ನಿವಾಸಕ್ಕೆ ಚಾಕು ಪಾರ್ಸೆಲ್: NSUI ಕಾರ್ಯಕರ್ತರ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ; ಕಮಿಷನರ್ಗೆ ದೂರು
ಇದೆಲ್ಲವನ್ನೂ ನೋಡಿದರೆ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಅನ್ನೋದು ಸ್ಪಷ್ಟವಾಗ್ತಿದೆ. ಹೆಚ್.ಸಿ ಮಹದೇವಪ್ಪ ಹಾಗೂ ಸಿದ್ದರಾಮಯ್ಯ ನಡುವಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳೂ ಪಕ್ಷದೊಳಗೆ ಚರ್ಚೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಕೈ ಪಾಳಯದಲ್ಲಿ ಇನ್ನೆಷ್ಟು ರಾಜಕೀಯ ಭೂಕಂಪನಗಳಾಗಲಿವೆ ಕಾದು ನೋಡಬೇಕಿದೆ.
ವರದಿ: ಬ್ಯುರೋ ರಿಪೋರ್ಟ್ ಟಿವಿ9
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.