ಪ್ರವಾಹ, ಕೊರೊನಾ ಬಂದಾಗ ಬಾರದ ಪ್ರಧಾನಿ ಮೋದಿ ಈಗ ಬರುತ್ತಾರೆ; ಸಿದ್ದರಾಮಯ್ಯ ವ್ಯಂಗ್ಯ

ಪ್ರವಾಹ ಬಂದು ರೈತರ ಬೆಳೆ ಹಾಳಾಗಿತ್ತು. ಕೊರನಾ ಸಾಂಕ್ರಾಮಿಕದಿಂದ ಜನ ಸಂಕಷ್ಟಕ್ಕೀಡಾಗಿದ್ದರು. ಆಗ ರಾಜ್ಯಕ್ಕೆ ಬಾರದ ಪ್ರಧಾನಿ ನರೇಂದ್ರ ಮೋದಿ ಈಗ ಚುನಾವಣೆಯಲ್ಲಿ ಗೆಲ್ಲಬೇಕೆಂದು ಪದೇ ಪದೇ ಬರುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಪ್ರವಾಹ, ಕೊರೊನಾ ಬಂದಾಗ ಬಾರದ ಪ್ರಧಾನಿ ಮೋದಿ ಈಗ ಬರುತ್ತಾರೆ; ಸಿದ್ದರಾಮಯ್ಯ ವ್ಯಂಗ್ಯ
ಸಿದ್ದರಾಮಯ್ಯ
Follow us
Ganapathi Sharma
|

Updated on: Feb 27, 2023 | 11:08 PM

ಮುಧೋಳ: ಪ್ರವಾಹ ಬಂದು ರೈತರ ಬೆಳೆ ಹಾಳಾಗಿತ್ತು. ಕೊರನಾ ಸಾಂಕ್ರಾಮಿಕದಿಂದ ಜನ ಸಂಕಷ್ಟಕ್ಕೀಡಾಗಿದ್ದರು. ಆಗ ರಾಜ್ಯಕ್ಕೆ ಬಾರದ ಪ್ರಧಾನಿ ನರೇಂದ್ರ ಮೋದಿ (Narendra Modi) ಈಗ ಚುನಾವಣೆಯಲ್ಲಿ ಗೆಲ್ಲಬೇಕೆಂದು ಪದೇ ಪದೇ ಬರುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ (Siddaramaiah) ವ್ಯಂಗ್ಯವಾಡಿದರು. ಬಾಗಲಕೋಟೆ ಜಿಲ್ಲೆ ಮುಧೋಳ ನಗರದಲ್ಲಿ ಕಾಂಗ್ರೆಸ್‌ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿಯವರು ಚುನಾವಣೆಯಲ್ಲಿ ಗೆಲ್ಲಬೇಕೆಂದು ಮೋದಿ, ಶಾರನ್ನು ಕರೆತರುತ್ತಿದ್ದಾರೆ. ವಾರಕ್ಕೆ ಒಬ್ಬ, ಈ ವಾರ ಒಬ್ಬ, ಮುಂದಿನವಾರ ಮತ್ತೊಬ್ಬ ಎಂದು ಮೋದಿ, ಅಮಿತ್ ಶಾ, ನಡ್ಡಾ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ ಎಂದು ಅವರು ಲೇವಡಿ ಮಾಡಿದರು.

ಕಾಂಗ್ರೆಸ್ ನವರಿಗೆ ಧಮ್ ಇದ್ದರೆ, ತಾಕತ್ ಇದ್ದರೆ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳುತ್ತಾರೆ. ಮಿಸ್ಟರ್ ಬೊಮ್ಮಾಯಿ ಅವರೇ, ನಿಮಗೆ ಧಮ್ ಇದ್ರೆ ತಾಕತ್ ಇದ್ರೆ ಬನ್ನಿ ಅಭಿವೃದ್ಧಿ ಕೆಲಸದ ಬಗ್ಗೆ ಚರ್ಚೆ ಮಾಡೋಣ. ಹೀಗೆಂದರೆ ಅವರು ಬರುವುದಿಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ನೀರಾವರಿಗಾಗಿ ಮಿಸ್ಟರ್ ಜಾರಕಿಹೊಳಿ, ಮಿಸ್ಟರ್ ಕಾರಜೋಳ 1.50 ಲಕ್ಷ ಕೋಟಿ ರೂ. ಖರ್ಚು ಮಾಡುತ್ತೇವೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಾರೆ. ಕೇವಲ 45 ಸಾವಿರ ಕೋಟಿ ರೂ. ಖರ್ಚು ಮಾಡಿದ್ದಾರೆ. ಕಾರಜೋಳ ಅವರೇ, ನಿಮಗೆ ಸ್ವಲ್ಪ ನಾಚಿಕೆ ಇದ್ರೆ, ಮರ್ಯಾದೆ ಇದ್ರೆ ರಾಜೀನಾಮೆ ಕೊಟ್ಟು‌ಮನೆಗೆ ಹೋಗಿ ಎಂದು ಸಿದ್ದರಾಮಯ್ಯ ಗುಡುಗಿದರು.

ಇದನ್ನೂ ಓದಿ: ಪ್ರವಾಹ ಬಂದಾಗ ಕರ್ನಾಟಕದತ್ತ ತಿರುಗಿಯೂ ನೋಡದ ಮೋದಿ ಈಗ ರಾಜ್ಯದ ಪ್ರವಾಸಿ; ಕಾಂಗ್ರೆಸ್ ವ್ಯಂಗ್ಯ

ಇದಕ್ಕೂ ಮುನ್ನ, ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಆಗಾಗ ರಾಜ್ಯಕ್ಕೆ ಬರುತ್ತಾರೆ ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಟೀಕಿಸಿತ್ತು. ‘ಕರ್ನಾಟಕವು ಪ್ರತಿ ವರ್ಷ ನಿರಂತರ ಪ್ರವಾಹ ಎದುರಿಸಿದಾಗ, ಜನರ ಬದುಕು ಮುಳುಗಿದಾಗ, ಅಪಾರ ಆಸ್ತಿಪಾಸ್ತಿ ಹಾನಿಯಾದಾಗ ಕರ್ನಾಟಕದತ್ತ ತಿರುಗಿಯೂ ನೋಡದ, ಕರ್ನಾಟಕಕ್ಕೆ ನಯಾಪೈಸೆ ನೆರವು ನೀಡದ ಪ್ರಧಾನಿ ನರೇಂದ್ರ ಮೋದಿಯವರು ಈಗ ಚುನಾವಣೆ ಸಂದರ್ಭದಲ್ಲಿ ಕರ್ನಾಟಕ ಟೂರಿಸ್ಟ್ ಆಗಿದ್ದಾರೆ. ಈ ದ್ರೋಹಕ್ಕೆ ಧನ್ಯವಾದಗಳು! ಥ್ಯಾಂಕ್ಯೂ ಮೋದಿ ಎಂಬ ಹ್ಯಾಷ್​​ಟ್ಯಾಗ್ ಅಡಿ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿತ್ತು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್