ಅರ್ಹತೆ ಇರುವವರು ಸಿಎಂ ಕುರ್ಚಿಗೆ ಟವೆಲ್ ಹಾಕ್ತಾರೆ: ಡಿಕೆಶಿ ಪಕ್ಕದಲ್ಲಿದ್ದಾಗಲೇ ಸಿದ್ದರಾಮಯ್ಯ ಹೀಗೆನ್ನಲು ಕಾರಣವಿದೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟುಗಳ ಹಂಚಿಕೆಯಲ್ಲಿ ಭಾರಿ ಅಕ್ರಮ ನಡೆದಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಈ ಅಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದವರ ಹೆಸರು ಇದೆ ಎಂಬ ಆರೋಪ ಕೇಳಿಬಂದಿದೆ. ಈ ಅಕ್ರಮ ಬಯಲಿಗೆ ತಂದವರು ಸಿಎಂ ಕುರ್ಚಿಗೆ ಟವಲ್​ ಹಾಕಿದವರು ಎಂಬ ಕುಮಾರಸ್ವಾಮಿ ಹೇಳಿಕಗೆ ಸಿಎಂ ಟಾಂಗ್​ ಕೊಟ್ಟಿದ್ದಾರೆ.

ಅರ್ಹತೆ ಇರುವವರು ಸಿಎಂ ಕುರ್ಚಿಗೆ ಟವೆಲ್ ಹಾಕ್ತಾರೆ: ಡಿಕೆಶಿ ಪಕ್ಕದಲ್ಲಿದ್ದಾಗಲೇ ಸಿದ್ದರಾಮಯ್ಯ ಹೀಗೆನ್ನಲು ಕಾರಣವಿದೆ
ಸಿದ್ದರಾಮಯ್ಯ, ಡಿಕೆ ಶಿವಕುಮಾರ್​
Follow us
| Updated By: ವಿವೇಕ ಬಿರಾದಾರ

Updated on:Jul 26, 2024 | 1:54 PM

ಬೆಂಗಳೂರು ಜುಲೈ 26: ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಬಯಲಾಗಿರುವುದು ಮುಖ್ಯಮಂತ್ರಿಗಳ ಕುರ್ಚಿಗೆ ಟವೆಲ್​​ ಹಾಕಿದವರಿಂದ ಎಂಬ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಅಧಿಕಾರದಲ್ಲಿರುವ ಯಾರೂ ಬೇಕಾದರೂ ಟವೆಲ್ ಹಾಕಬಹುದು. ನಮ್ಮಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹತೆ ಇರುವವರು ತುಂಬಾ ಜನರಿದ್ದಾರೆ. ಅರ್ಹತೆ ಇರುವವರು ಮುಖ್ಯಮಂತ್ರಿ ಆಗಲು ಟವೆಲ್ ಹಾಕುತ್ತಾರೆ. ಟವೆಲ್​ ಹಾಕಿದವರು ಯಾರು ಅಂತ ಹೆಚ್​ಡಿ ಕುಮಾರಸ್ವಾಮಿ ಅವರನ್ನೇ ಕೇಳಿ ಎಂದು ಸಿದ್ದರಾಮಯ್ಯ ಟಾಂಗ್​ ಕೊಟ್ಟರು. ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅವರು ಸಿದ್ದರಾಮಯ್ಯ ಅವರ ಪಕ್ಕದಲ್ಲೇ ಕುಳಿತಿದ್ದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ವರದಿ ಕೇಳಿದ್ದಾರೆ, ಕೊಡುತ್ತೇವೆ. ಎಲ್ಲವೂ ಕಾನೂನು ಪ್ರಕಾರ ನಡೆದಿದೆ ಅಂತ ವರದಿ ನೀಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: ಸೋಮವಾರ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಜೆಡಿಎಸ್ ಪಾದಯಾತ್ರೆ ಬಹುತೇಕ ಫಿಕ್ಸ್

ನಮ್ಮ ಜಮೀನನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಕ್ರಮವಾಗಿ ಬಳಸಿಕೊಂಡಿದ್ದೇ ತಪ್ಪು. ವಿಜಯನಗರ ಬಡಾವಣೆಯಲ್ಲಿ 125 ಸೈಟ್​ಗಳನ್ನು ಹಂಚಿದ್ದಾರೆ. ಅದರಲ್ಲಿ ನಮಗೂ ನಿವೇಶನ ಕೊಟ್ಟಿದ್ದಾರೆ ಅಷ್ಟೇ. ನನ್ನದಾಗಲಿ, ನನ್ನ ಪತ್ನಿಯದಾಗಲಿ, ಬಾಮೈದನ ಪಾತ್ರ ಇದೆಯಾ? 2014ರಲ್ಲಿ ನನ್ನ ಬಾಮೈದ ಜಮೀನು ಖರೀದಿ ಮಾಡಿರುವುದು. ಸಂಪೂರ್ಣವಾಗಿ ಕಾನೂನು ಪ್ರಕಾರ ಸೈಟ್​ ಹಂಚಿಕೆ ಮಾಡಿದ್ದಾರೆ ಎಂದು ತಿಳಿಸಿದರು.

ಆದರೆ ಅಪಪ್ರಚಾರ ಮಾಡಿ ತೇಜೋವಧೆ ಮಾಡಲು ಯತ್ನಿಸ್ತಿದ್ದಾರೆ. ನಾನು ಎರಡನೇ ಬಾರಿಗೆ ಸಿಎಂ ಆಗಿದ್ದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ನಿವೃತ್ತ ನ್ಯಾ. ದೇಸಾಯಿ ಅಧ್ಯಕ್ಷತೆಯಲ್ಲಿ ತನಿಖೆ ಮಾಡಿಸುತ್ತಿದ್ದೇವೆ ಎಂದರು.

2023ರ ವಿಧಾಸಭೆ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್​ ವಿಜಯಶಾಲಿಯಾದ ಮೇಲೆ ಮುಖ್ಯಮಂತ್ರಿ ಗುದ್ದುಗೆ ಮೇಲೆ ಕೂರಲು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ನಡುವೆ ಮುಸುಕಿನ ಗುದ್ದಾಟ ಶುರುವಾಗಿತ್ತು. ದೆಹಲಿ ಹೈಕಮಾಂಡ್​ ಅಂಗಳದಲ್ಲಿ ಸಭೆ ಮೇಲೆ ಸಭೆ ನಡೆದು ದೊಡ್ಡ ಹೈಡ್ರಾಮಾ ಸೃಷ್ಟಿಯಾಗಿತ್ತು. ಇಬ್ಬರು ನಾಯಕರು ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿದ್ದರು. ಕೊನೆಗೆ ಮುಖ್ಯಮಂತ್ರಿ ಕುರ್ಚಿ ಸಿದ್ದರಾಮಯ್ಯ ಅವರಿಗೆ ಒಲಿದಿದೆ. ಆದರೆ ಸಿಎಂ ಕುರ್ಚಿ ಮೇಲೆ ಡಿಕೆ ಶಿವಕುಮಾರ್​ ಇನ್ನೂ ಕಣ್ಣಿಟ್ಟಿದ್ದು, ಇದೇ ಅವಧಿಯಲ್ಲಿ ಸಿಎಂ ಆಗುವ ಕನಸು ಕಂಡಿದ್ದಾರೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಿಂದ ಕೇಳಿಬರುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:46 pm, Fri, 26 July 24

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್