ಎದ್ದೆದ್ದು ನಿಂತು ಮಾತಾಡಿದ್ರೆ ನಿಮ್ಮನ್ನ ವಿಪಕ್ಷ ನಾಯಕ ಮಾಡುತ್ತಾರೆ ಅಂದುಕೊಂಡಿದ್ದೀರಾ? ಯತ್ನಾಳ್​ ಕಾಲೆಳೆದ ಸಿಎಂ

ಸದನದಲ್ಲಿ ಎದ್ದೆದ್ದು ಮಾತನಾಡುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ಗೆ ಸಿದ್ದರಾಮಯ್ಯ ಒಂದು ಡೈಲಾಗ್​ ಹೊಡೆದಿದ್ದಾರೆ. ಇದರಿಂದ ಯತ್ನಾಳ್ ಗಪ್​ಚುಪ್ ಆದರು.

Follow us
ಕಿರಣ್​ ಹನಿಯಡ್ಕ
| Updated By: ರಮೇಶ್ ಬಿ. ಜವಳಗೇರಾ

Updated on: Jul 05, 2023 | 2:00 PM

ಬೆಂಗಳೂರು: ವಿರೋಧ ಪಕ್ಷದ ನಾಯಕನಿಲ್ಲದೇ ವಿಧಾಸಭೆ ಅಧಿವೇಶನ ನಡೆಯುತ್ತಿದ್ದು, ಇದಕ್ಕೆ ಮಾತಿನಲ್ಲೇ ಆಡಳಿತರೂಢ ಕಾಂಗ್ರೆಸ್ ನಾಯಕರು, ಬಿಜೆಪಿ ಬಗ್ಗೆ ವ್ಯಂಗ್ಯವಾಡುತ್ತಿದ್ದಾರೆ. ಅದರಂತೆ ಇಂದು (ಜುಲೈ 05) ಸದನದಲ್ಲಿ ಎದ್ದೆದ್ದು ಮಾತನಾಡುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ಗೆ ನಿಮ್ಮನ್ನು ವಿಪಕ್ಷ ನಾಯಕನಾಗಿ ಮಾಡುತ್ತಾರೆ ಅಂದುಕೊಂಡಿದ್ದೀರಾ ಎಂದು ಕಾಲೆಳೆದರು. ನಿಲುವಳಿ ಪ್ರಸ್ತಾವ ಮಂಡನೆ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್, ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ವೇಳೆ ಮಧ್ಯೆ ಪ್ರವೇಶದ ಸಿಎಂ ಸಿದ್ದರಾಮಯ್ಯ, ನಿಮ್ಮನ್ನು ವಿಪಕ್ಷ‌ ನಾಯಕರಾಗಿ ಮಾಡ್ತಾರೋ ಇಲ್ವೋ ಗೊತ್ತಿಲ್ಲ. ಇಲ್ಲಿ ಎದ್ದೆದ್ದು ನಿಂತು ಮಾತಾಡಿದ್ರೆ ನಿಮ್ಮನ್ನು ವಿಪಕ್ಷ ನಾಯಕ ಮಾಡುತ್ತಾರೆ ಅಂತಾ ಅಂದುಕೊಂಡಿದ್ದೀರಾ? ಎಂದು ಟಾಂಗ್ ಕೊಟ್ಟರು.

ಇದನ್ನೂ ಓದಿ: 30 ವರ್ಷದ ಇತಿಹಾಸದಲ್ಲೇ ವಿಪಕ್ಷ ನಾಯಕನಿಲ್ಲದೆ ಕಲಾಪ: ಹೈಕಮಾಂಡ್ ಕೈ ಸೇರಿದ ವರದಿ, ಇಂದೇ ಘೋಷಣೆ ಸಾಧ್ಯತೆ

ಸದನ ಶುರುವಾಗಿ 3 ದಿನ ಆದರೂ ವಿಪಕ್ಷ ನಾಯಕ ಆಯ್ಕೆಯಾಗಿಲ್ಲ. ಇಲ್ಲಿ ಬಂದು ಬುರುಡೆ ಹೊಡೆಯುತ್ತಿದ್ದೀರಿ. ಅಶೋಕ್ ಮಾತಾಡುವುದು ನೋಡಿದರೆ ಮಹಿಳೆಯರಿಗೆ ಫ್ರೀ ಕೊಟ್ಟಿರುವುದನ್ನೇ ವಿರೋಧಿಸುತ್ತಿರುವಂತೆ ಕಾಣುತ್ತಿದೆ ಎಂದು ಶಾಸಕ ಯತ್ನಾಳ್​, ಅಶೋಕ್​ಗೆ ಕಿಚಾಯಿಸಿದರು.

ಐದೂ ಗ್ಯಾರಂಟಿ ಪ್ರಸಕ್ತ ಆರ್ಥಿಕ ವರ್ಷದೊಳಗೆ ಜಾರಿ ಮಾಡುತ್ತೇವೆ. ಬಿಜೆಪಿಯವರು ಪ್ರಸ್ತಾಪಿಸಿರುವ ವಿಷಯಗಳು ಗವರ್ನರ್​ ಭಾಷಣದಲ್ಲಿದೆ. ಗವರ್ನರ್​ ಭಾಷಣದ ಮೇಲೆ ಚರ್ಚೆ ವೇಳೆ ಬಿಜೆಪಿಯವರು ಪ್ರಸ್ತಾಪಿಸಲಿ. ಹಾಗಾಗಿ ಬಿಜೆಪಿಯವರ ನಿಲುವಳಿ ಸೂಚನೆ ಮೇಲೆ ಚರ್ಚೆ ಅಗತ್ಯವಿಲ್ಲ ವಿಪಕ್ಷದವರಿಂದ ಈಗ ಚರ್ಚೆ ಬೇಡ. ಪ್ರಾಥಮಿಕ ಪ್ರಸ್ತಾವಕ್ಕಷ್ಟೇ ಅವರನ್ನು ಸೀಮಿತ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರು ಸ್ಪೀಕರ್​ ಯು.ಟಿ.ಖಾದರ್​ಗೆ ಆಗ್ರಹಿಸಿದರು.