ಬೆಂಗಳೂರು: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ನಗರದೆಲ್ಲೆಡೆ ಆರಂಭಿಸಲಾಗಿದ್ದ, ಅವರ ಕನಸಿನ ಕೂಸಾಗಿದ್ದ ಇಂದಿರಾ ಕ್ಯಾಂಟೀನ್ಗೆ ಮರುಜೀವ ದೊರೆಯುವ ನಿರೀಕ್ಷೆ ಇದೆ. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂಬುದು ಖಚಿತವಾಗುತ್ತಿದ್ದಂತೆಯೇ ಇಂದಿರಾ ಕ್ಯಾಂಟಿನ್ಗಳಿಗೆ ಮರುಜೀವ ನೀಡಬೇಕೆಂಬ ಆಗ್ರಹ ವ್ಯಕ್ತವಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಹುತೇಕ ಕ್ಯಾಂಟೀನ್ಗಳು ಮುಚ್ಚಲ್ಪಟ್ಟಿದ್ದರೆ, ಅನೇಕ ಕ್ಯಾಂಟೀನ್ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ.
ಮಾಜಿ ಸಿಎಂ ಸಿದ್ದರಾಮಯ್ಯ ಕನಸಿನ ಕೂಸಿಗೆ ಮರುಜೀವ ನೀಡಬೇಕು ಎಂದು ಬಿಬಿಎಂಪಿ ಕಾಂಗ್ರೆಸ್ ಸದಸ್ಯರು ಪಟ್ಟು ಹಿಡಿದಿದ್ದಾರೆ. ಬಿಜೆಪಿ ಸರ್ಕಾರದ ಆಡಳಿತದ ಅವಧಿಯಲ್ಲಿ ಕ್ಯಾಂಟಿನ್ಗಳನ್ನು ಮುಚ್ಚಿಸುವ ಹುನ್ನರ ಮಾಡಲಾಗಿತ್ತು. ಆದರೆ, ಅದನ್ನು ತಡೆಯಲಾಗಿದೆ. ಆದಾಗ್ಯೂ ಕ್ಯಾಂಟೀನ್ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ. ಬಡವರಿಗೆ, ಕೂಲಿ ಕಾರ್ಮಿಕರಿಗೆ ಬೆಳಿಗ್ಗೆ ತಿಂಡಿ ಮಧ್ಯಾಹ್ನದ ಊಟ ಸಿಗುತ್ತಿತ್ತು. ಕೇವಲ 10 ರೂಪಾಯಿಗೆ ಬಡ ಜನರಿಗೆ ಊಟ ಸಿಗುತ್ತಿತ್ತು. ಕಾಂಗ್ರೆಸ್ ಅಧಿಕಾರವಧಿಯಲ್ಲಿ ರಾಜ್ಯದ ಎಲ್ಲಾ ಕ್ಯಾಂಟಿನ್ಗಳಿಗೆ ಅನುದಾನ ನೀಡಲಾಗಿತ್ತು. ಅದ್ರೆ ಬಿಜೆಪಿ ಸರ್ಕಾರ ಬಂದ ಕೆಲವೇ ದಿನಗಳಲ್ಲಿ ರಾಜ್ಯದ ಹಲವು ಕಡೆ ಅನುದಾನ ಕೊಡದೆ ಕ್ಯಾಂಟಿನ್ ಬಂದ್ ಮಾಡಲಾಗಿತ್ತು ಎಂದು ಅವರು ದೂರಿದ್ದಾರೆ.
ಈ ಮಧ್ಯೆ, ಮತ್ತೆ ಬಡವರ ಪಾಲಿನ ಇಂದಿರಾ ಕ್ಯಾಂಟಿನ್ ರಾಜ್ಯದೇಲ್ಲೆಡೆ ತೆರೆಯಲು ಸಿದ್ಧತೆ ನಡೆಸಲಾಗಿದೆ. ಇದಕ್ಕೆ ಬಿಬಿಎಂಪಿ ಕಾಂಗ್ರೆಸ್ ಕಾರ್ಪೋರೇಟರ್ಗಳು ಆಗ್ರಹಿಸಿದ್ದಾರೆ. ಸರ್ಕಾರ ರಚನೆಯಾಗುತ್ತಿದ್ದಂತೆಯೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:48 pm, Thu, 18 May 23