AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕರ ಅಸಮಾಧಾನದ ಪತ್ರ ಹರಿದು ಹಾಕಿದ ಸಿದ್ದರಾಮಯ್ಯ, ಕಿಚಾಯಿಸಿದ ಬಿಜೆಪಿ

ತನ್ನನ್ನು ಸಚಿವರ ಆಪ್ತ ಕಾರ್ಯದರ್ಶಿಯಾಗಿ ಅಥವಾ ವಿಶೇಷ ಕರ್ತವ್ಯಾಧಿಕಾರಿಯಾಗಿ ನೇಮಕ ಮಾಡುವಂತೆ ಸಿದ್ದರಾಮಯ್ಯ ಅವರಿಗೆ ಶಾಸಕರೊಬ್ಬರು ಪತ್ರ ಬರೆದು ಅಸಮಾಧಾನ ಹೊರಹಾಕಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಪತ್ರ ನೋಡಿದ ಸಿದ್ದರಾಮಯ್ಯ ಅವರು ಹರಿದುಹಾಕಿದ್ದಾರೆ.

ಶಾಸಕರ ಅಸಮಾಧಾನದ ಪತ್ರ ಹರಿದು ಹಾಕಿದ ಸಿದ್ದರಾಮಯ್ಯ, ಕಿಚಾಯಿಸಿದ ಬಿಜೆಪಿ
ಶಾಸಕರು ನೀಡಿದ ದೂರಿನ ಪತ್ರ ಹರಿದು ಹಾಕಿದ ಸಿದ್ದರಾಮಯ್ಯ, ಬಿಜೆಪಿಯಿಂದ ಟೀಕೆ
Pramod Shastri G
| Updated By: Rakesh Nayak Manchi|

Updated on:Jul 28, 2023 | 5:13 PM

Share

ಬೆಂಗಳೂರು, ಜುಲೈ 28: ಕಾಂಗ್ರೆಸ್ ಸರ್ಕಾರದ ಸಚಿವರ ವಿರುದ್ಧ ಸ್ವಪಕ್ಷದ ಶಾಸಕರೇ ಅಸಮಾಧಾನಗೊಂಡಿದ್ದು, ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಪತ್ರದ ಮೂಲಕ ದೂರುಗಳನ್ನು ನೀಡುತ್ತಿದ್ದಾರೆ. ಅದರಂತೆ, ದಾವಣಗೆರೆ ಜಿಲ್ಲೆಯ ಶಾಸಕರೊಬ್ಬರು ಬರೆದಿದ್ದಾರೆ ಎನ್ನಲಾಗಿರುವ ದೂರಿನ ಪತ್ರವೊಂದನ್ನು ನೋಡಿ ಆಕ್ರೋಶಗೊಂಡ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಹರಿದು ಹಾಕಿದ್ದಾರೆ.

“ಹತ್ತಾರು ವರ್ಷಗಳಿಂದ ಸಾರ್ವಜನಿಕರ ಕಷ್ಟ ಕಾರ್ಪಣ್ಯಗಳಿಗೆ ಹೆಗಲಾಗಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕ್ರಿಯಾಶೀಲನಾಗಿ, ರಾಜ್ಯ ಕಿಸಾನ್ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷನಾಗಿ ಪಕ್ಷದ ಎಲ್ಲಾ ಕಾರ್ಯಕ್ರಮಗಳನ್ನು ಜನರ ಮನಸ್ಸಿಗೆ ತಲುಪಿ ಅವರ ವಿಶ್ವಾಸ ಪ್ರೀತಿಗೆ ಚ್ಯುತಿ ಬಾರದಂತೆ ನಡೆದ ಪರಿಣಾಮ 2023ರ ಚುನಾವಣೆಯಲ್ಲಿ ಪ್ರಥಮಬಾರಿಗೆ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಹೀಗಾಗಿ ಬೆಂಬಲಿತರು, ಮತದಾರರು, ಸಾರ್ವಜನಿಕರು ಹತ್ತಾರು ಹೊಸ ನಿರೀಕ್ಷೆಗಳ ಜವಾಬ್ದಾರಿ ಹೊತ್ತಿದ್ದೇನೆ” ಎಂದು ಶಾಸಕರು ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: Siddaramaiah: ಚುನಾವಣಾ ತಕರಾರು ಅರ್ಜಿ; ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್

“ಆದರೆ ನಿರೀಕ್ಷೆಗಳು ಸಂಪೂರ್ಣ ಹುಸಿಯಾಗುತ್ತಿರುವ ಹಿನ್ನೆಲೆಯಲ್ಲಿ ಜನರ ಆಶೋತ್ತರಗಳಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಸರ್ಕಾರದ ಸಚಿವರ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿ ಅಥವಾ ಒಎಸ್​ಡಿ ಅವರ ಅಣತಿಯಂತೆ ಕಾರ್ಯಾದೇಶಗಳು ಹೊರ ಬರುತ್ತಿವೆ. ನಮ್ಮ ಪತ್ರಗಳಿಗೆ ಕನಿಷ್ಠ ಭರವಸೆಯ ಸ್ಪಂದನೆ ಸಿಗದೇ ಇರುವುದರಿಂದ ನನ್ನ ಕ್ಷೇತ್ರದ ಮತದಾರ ಪ್ರಭುಗಳ ಕಾರ್ಯಗಳಿಗೆ ಅನುಕೂಲವಾಗುವಂತೆ ಸೇವೆ ಸಲ್ಲಿಸಲು ನನ್ನನ್ನು ಸರ್ಕಾರದ ಸಚಿವರ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿ ಅಥವಾ ಒಎಸ್​ಡಿ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಆದೇಶಿಸಲು ಕೋರುತ್ತೇನೆ” ಎಂದು ಪತ್ರದಲ್ಲಿ ಬರೆದು ಅಸಮಾಧಾನ ಹೊರಹಾಕಿದ್ದಾರೆ.

ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರು ಸಚಿವರು ಶಾಸಕರ ನಡುವಿನ ಮುನಿಸು ಶಮನಕ್ಕೆ ಯತ್ನಿಸಿದರು. ಇದೇ ವೇಳೆ ಶಾಸಕರು ಬರೆದಿರುವ ದೂರಿನ ಪತ್ರ ನೋಡಿದ ಸಿದ್ದರಾಮಯ್ಯ ಅವರು ಅದನ್ನು ಹರಿದು ಹಾಕಿದ್ದಾರೆ.

ಹರಿದು ಬಿಸಾಡಿದ ಶಾಸಕರ ಪತ್ರ ಇದೆಯೇ?

ಕಾಂಗ್ರೆಸ್ ಪಕ್ಷದ ಆಂತರಿಕ ಬೇಗುದಿ ಸ್ಫೋಟಗಳ್ಳಲು ಆರಂಭವಾಗಿದ್ದು ವಿಪಕ್ಷ ಬಿಜೆಪಿ ಅಸ್ತ್ರವಾಗಿ ಬಳಕೆ ಮಾಡುತ್ತಿದೆ. ಶಾಸಕರು ದೂರು ನೀಡುತ್ತಿರುವ ಬಗ್ಗೆ ರಾಜಕೀಯ ರಂಗದಲ್ಲಿ ಭಾರೀ ಚರ್ಚೆಯಾಗುತ್ತಿದ್ದು, ಬಿಜೆಪಿ ಟೀಕೆಗಳಿಗೆ ಕಾಂಗ್ರೆಸ್ ನಾಯಕರು ತೇಪೆ ಹಚ್ಚುವ ಕೆಲಸ ಮಾಡಿ ಸ್ವಪಕ್ಷದ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ. ಈ ನಡುವೆ, ಸಿದ್ದರಾಮಯ್ಯ ಅವರು ಹರಿದು ಹಾಕಿದ ಪತ್ರದ ಪ್ರತಿ ಬಿಜೆಪಿ ಕಣ್ಣಿಗೆ ಬಿದ್ದಿದ್ದು, ಟ್ವೀಟ್ ಮಾಡಿ “ಸ್ವಾಮಿ ಸಿದ್ದರಾಮಯ್ಯ ಅವರೇ, ನೀವು ಹರಿದು ಬಿಸಾಡಿದ ಶಾಸಕರ ಪತ್ರ ಇದೆಯೇ?” ಎಂದು ಪ್ರಶ್ನಿಸಿದೆ.

ಶಾಸಕಾಂಗ ಸಭೆಯಲ್ಲಿ ಅಸಮಾಧಾನಿತ ಶಾಸಕರ ವಿರುದ್ಧ ಸಿದ್ದರಾಮಯ್ಯ ಅವರು ಗರಂ ಆಗಿದ್ದರು. ಬಹಿರಂಗ ಪತ್ರ ಬರೆದ ಬಸವರಾಜ ರಾಯರೆಡ್ಡಿ ಅವರನ್ನು ತರಾಟೆಗೆ  ತೆಗೆದುಕೊಂಡಿದ್ದರು. ಈ ವೇಳೆ ಸ್ಪಷ್ಟನೆ ನೀಡಿದ ರಾಯರೆಡ್ಡಿ, ನಿಮ್ಮ ಗಮನ ಸೆಳೆಯಲು ಈ ರೀತಿ ಮಾಡಿದ್ದು ಅಷ್ಟೇ ಸರ್ ಎಂದಿದ್ದರು. ಪ್ರತಿಪಕ್ಷಗಳ ಸುಳ್ಳುಗಳಿಗೆ ದಾಳವಾಗಬೇಡಿ, ಏನೇ ಅಸಮಾಧಾನ ಇದ್ದರೂ ತಮ್ಮ ಬಳಿ ಖುದ್ದು ಚರ್ಚಿಸುವಂತೆ ಸಿದ್ದರಾಮಯ್ಯ ಸೂಚಿಸಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:03 pm, Fri, 28 July 23

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು