ವಿವಿಧ ಭಾಗ್ಯಗಳನ್ನು ಕೊಟ್ಟ ಸಿದ್ದರಾಮಯ್ಯಗೆ ಕ್ಷೇತ್ರ ಭಾಗ್ಯವೇ ಇಲ್ಲ; ಪ್ರತಾಪ್​​ ಸಿಂಹ

ವಿವಿಧ ಭಾಗ್ಯಗಳನ್ನು ಕೊಟ್ಟ ಸಿದ್ದರಾಮಯ್ಯಗೆ ಕ್ಷೇತ್ರ ಭಾಗ್ಯವೇ ಇಲ್ಲ. ಕ್ಷೇತ್ರ ಹುಡುಕಿಕೊಳ್ಳಬೇಕಾದ ದಯನೀಯ ಸ್ಥಿತಿ ಬಂದಿದೆ ಅಂದರೆ ಸಿದ್ದರಾಮಯ್ಯರ ಭಾಗ್ಯಗಳಿಗೆ ಜನ ಬೆಲೆ ಕೊಟ್ಟಿಲ್ಲ ಎಂದಾಯಿತು ಎನ್ನುವ ಮೂಲಕ ಪ್ರತಾಪ್​ ಸಿಂಹ ವ್ಯಂಗ್ಯ ಮಾಡಿದ್ದಾರೆ.

Follow us
ಕಿರಣ್ ಹನುಮಂತ್​ ಮಾದಾರ್
|

Updated on:Mar 23, 2023 | 12:13 PM

ಮಡಿಕೇರಿ: ವಿಧಾನಸಭೆ ಚುನಾವಣೆ(Karnataka Assembly Election) ಹತ್ತಿರವಾಗುತ್ತಿದ್ದಂತೆ ಚುನಾವಣಾ ಕಾವು ಜೋರಾಗಿದೆ. ಆಡಳಿತ ಗದ್ದುಗೆ ಹಿಡಿಯಲು ಉಭಯ ಪಕ್ಷಗಳು ಹರಸಾಹಸ ನಡೆಸಿವೆ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರ ಕ್ಷೇತ್ರ ಗೊಂದಲ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಸುದ್ದಿಯಾಗಿದೆ. ಈ ಕುರಿತು ಬಿಜೆಪಿ ಸಂಸದ ಪ್ರತಾಪ್ ಸಿಂಹ(Pratap Simha) ‘ವಿವಿಧ ಭಾಗ್ಯಗಳನ್ನು ಕೊಟ್ಟ ಸಿದ್ದರಾಮಯ್ಯಗೆ ಕ್ಷೇತ್ರ  ಭಾಗ್ಯವೇ ಇಲ್ಲ. ಕ್ಷೇತ್ರ ಹುಡುಕಿಕೊಳ್ಳಬೇಕಾದ ದಯನೀಯ ಸ್ಥಿತಿ ಬಂದಿದೆ ಅಂದರೆ ಸಿದ್ದರಾಮಯ್ಯರ ಭಾಗ್ಯಗಳಿಗೆ ಜನ ಬೆಲೆ ಕೊಟ್ಟಿಲ್ಲ ಎಂದಾಯಿತು. ಅವರ ಮೇಲೆ ಜನರಿಗೆ ವಿಶ್ವಾಸ ಇಲ್ಲ ಎಂಬುದು ಬಹಳ ಸ್ಪಷ್ಟವಾಗಿದೆ. ಅಂತಿಮವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವರುಣಾ ಕ್ಷೇತ್ರಕ್ಕೆ ಬರುತ್ತಾರೆ ಎನ್ನುವ ಮೂಲಕ ಮಡಿಕೇರಿಯಲ್ಲಿ ವ್ಯಂಗ್ಯ ಮಾಡಿದ್ದಾರೆ.

ಮಡಿಕೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ದಕ್ಷಿಣ‌ ಕರ್ನಾಟಕದ ಜನ ಕಾಂಗ್ರೆಸ್​, ಜೆಡಿಎಸ್​​ನಿಂದ‌ ಮಂಗಗಳಾಗಬೇಡಿ. ಯುಗಾದಿಗೆ ಕಾಂಗ್ರೆಸ್ ಟಿಕೆಟ್ ಅನೌನ್ಸ್​ ಆಗಬೇಕಿತ್ತು, ಆದರೆ ಆಗಿಲ್ಲ. ಸಿದ್ದರಾಮಯ್ಯಗೆ ಕ್ಷೇತ್ರದ ಚಿಂತೆ, ಅವರ ಪತ್ನಿಗೆ ಮಗನ ಭವಿಷ್ಯದ ಚಿಂತೆಯಾಗಿದೆ. ಹೆಚ್​​.ಡಿ.ರೇವಣ್ಣಗೆ ಭವಾನಿ ಚಿಂತೆ, ಕುಮಾರಣ್ಣಂಗೆ ನಿಖಿಲ್​​ ಚಿಂತೆ. ಕುಟುಂಬದ ಬಗ್ಗೆ ಚಿಂತೆ ಮಾಡುವವರಿಂದ ರಾಜ್ಯಕ್ಕೆ ಹಿತ ಸಿಗುವುದಿಲ್ಲ. ಆದ್ದರಿಂದ ಜನರು ಮಂಗ ಆಗಲು ಹೋಗಬೇಡಿ. ಉಚಿತವಾಗಿ ಕೊಡುತ್ತೀವಿ ಅಂದರೆ ಬಿಜೆಪಿಯನ್ನೂ ನಂಬಬೇಡಿ ಎನ್ನುವ ಮೂಲಕ ಕಾಂಗ್ರೆಸ್​, JDS ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:08 pm, Thu, 23 March 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್