AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರ ಹಂಚಿಕೆ ಇಲ್ಲ, ಸಿದ್ದರಾಮಯ್ಯ ಪೂರ್ಣವಧಿ ಸಿಎಂ ಆಗಲಿದ್ದಾರೆ; ಎಂಬಿ ಪಾಟೀಲ್

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಅವರೇ ಪೂರ್ಣವಧಿ ಇರಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಸಚಿವ ಎಂಬಿ ಪಾಟೀಲ್ (MB Patil) ಹೇಳಿದ್ದಾರೆ.

ಅಧಿಕಾರ ಹಂಚಿಕೆ ಇಲ್ಲ, ಸಿದ್ದರಾಮಯ್ಯ ಪೂರ್ಣವಧಿ ಸಿಎಂ ಆಗಲಿದ್ದಾರೆ; ಎಂಬಿ ಪಾಟೀಲ್
ಎಂಬಿ ಪಾಟೀಲ್
Ganapathi Sharma
|

Updated on:May 22, 2023 | 9:15 PM

Share

ಮೈಸೂರು: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಅವರೇ ಪೂರ್ಣವಧಿ ಇರಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಸಚಿವ ಎಂಬಿ ಪಾಟೀಲ್ (MB Patil) ಹೇಳಿದ್ದಾರೆ. ಮೈಸೂರಿಮ ಸುತ್ತೂರಿನಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಬಳಿಕ ಯಾವುದೇ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಸಿದ್ದರಾಮಯ್ಯ ಮುಂದಿನ ಐದು ವರ್ಷವೂ ಸಿಎಂ ಆಗಿರಲಿದ್ದಾರೆ ಎಂಬುದನ್ನು ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಅವರೇ ಸ್ಪಷ್ಟಪಡಿಸಿದ್ದಾರೆ ಎಂದರು.

ಬಿಜೆಪಿ ಅಧಿಕಾರವಧಿಲ್ಲಿ ನಡೆದ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಪಿಎಸ್ಐ ಹಗರಣ, ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಹಾಗೂ ಇತರೆ ಇಲಾಖೆಗಳಲ್ಲಿ ನಡೆದ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಎಲ್ಲ ಹಗರಣಗಳನ್ನೂ ತನಿಖೆ ನಡೆಸಿ ತಾರ್ಕಿಕ ಅಂತ್ಯ ಕಾಣಿಸುತ್ತೇವೆ. ತಪ್ಪಿಸ್ತರಿಗೆ ಶಿಕ್ಷೆ ಕೊಡಿಸುತ್ತೇವೆ, ನೊಂದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುತ್ತೇವೆ ಎಂದು ಅವರು ಹೇಳಿದರು.

ಗ್ಯಾರಂಟಿ ಕಾರ್ಡ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಮೊದಲ ಸಚಿವ ಸಂಪುಟ ಸಭೆಯಲ್ಲೇ ಚರ್ಚೆ ಆಗಿದೆ, ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಇದರಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿ ಸರ್ಕಾರದ ಎಲ್ಲ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ತಡೆಹಿಡಿದ ಸಿದ್ದರಾಮಯ್ಯ ಸರ್ಕಾರ

ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮಧ್ಯೆ ಭಾರೀ ಪೈಪೋಟಿ ನಡೆದಿತ್ತು. ಕೊನೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು ಮನವೊಲಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿತ್ತು. ಹೈಕಮಾಂಡ್ ಇಬ್ಬರ ನಡುವೆ ಅಧಿಕಾರ ಹಂಚಿಕೆ ಸೂತ್ರ ರಚಿಸಿರುವ ಸಾಧ್ಯತೆ ಇದೆ ಎಂದು ಕೆಲವು ಮೂಲಗಳು ಅಭಿಪ್ರಾಯಪಟ್ಟಿದ್ದವು. ಆದರೆ, ಈ ವಿಚಾರವಾಗಿ ಎಐಸಿಸಿ ಅಧಿಕೃತ ಹೇಳಿಕೆಯನ್ನೇನೂ ನೀಡಿಲ್ಲ. ಈ ಬಗ್ಗೆ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲವಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆಯೇ ಎಂಬಿ ಪಾಟೀಲ್ ಅಧಿಕಾರ ಹಂಚಿಕೆ ಮಾತುಕತೆಯಾಗಿಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:14 pm, Mon, 22 May 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!