ಆಪ್ತನ ಸೋಲನ್ನು ಗಂಭೀರವಾಗಿ ಪರಿಗಣಿಸಿದ ಸಿದ್ದರಾಮಯ್ಯ, ಈ ಇಬ್ಬರು ನಾಯುಕರ ವಿರುದ್ಧ ಶಿಸ್ತು ಕ್ರಮಕ್ಕೆ ಪತ್ರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತನ ಸೋಲನ್ನು ಗಂಭೀರವಾಗಿ ಪರಿಗಣಿಸಿದ್ದು, ಸೋಲಿಗೆ ಕಾರಣರಾದ ಇಬ್ಬರು ಮುಖಂಡರ ವಿರುದ್ಧ ಕ್ರಮಕೈಗೊಳ್ಳುವಂತೆ ಪತ್ರ ಬರೆದಿದ್ದಾರೆ.

ಆಪ್ತನ ಸೋಲನ್ನು ಗಂಭೀರವಾಗಿ ಪರಿಗಣಿಸಿದ ಸಿದ್ದರಾಮಯ್ಯ, ಈ ಇಬ್ಬರು ನಾಯುಕರ ವಿರುದ್ಧ ಶಿಸ್ತು ಕ್ರಮಕ್ಕೆ ಪತ್ರ
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್
Follow us
ರಾಮ್​, ಮೈಸೂರು
| Updated By: ರಮೇಶ್ ಬಿ. ಜವಳಗೇರಾ

Updated on: Jun 29, 2023 | 8:02 AM

ಮೈಸೂರು: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದಿದೆ. ಸಿದ್ದರಾಮಯ್ಯ(siddaramaiah) ಅವರು ಈಗಾಗಲೇ ಮುಖ್ಯಮಂತ್ರಿಯಾಗಿ ಈ ಸರ್ಕಾರದ ಮೊದಲ ಬಜೆಟ್ (ಜುಲೈ 07)​ ಮಂಡನೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಇದರ ನಡುವೆ ಆಪ್ತನ ಸೋಲು ಸಿದ್ದರಾಮಯ್ಯ ಅವರನ್ನು ಚಿಂತೆಗೀಡು ಮಾಡಿದ್ದು, ಈ ಬಗ್ಗೆ ಬೇಸರಗೊಂಡಿದ್ದಾರೆ. ಕಾಂಗ್ರೆಸ್​(Congress) ಅಲೆಯ ನಡುವೆಯೂ ಆಪ್ತನ ಸೋಲನ್ನು ಸಿದ್ದರಾಮಯ್ಯ ಗಂಭೀರವಾಗಿ ಪರಿಗಣಿಸಿದ್ದು, ಸೋಲಿಗೆ ಕಾರಣರಾದವರ ವಿರುದ್ಧ ಶಿಸ್ತು ಕೈಗೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ವಿಪಕ್ಷ ನಾಯಕರ ಜೊತೆ ಒಳ ಒಪ್ಪಂದ: ಶಾಸಕ ಯತ್ನಾಳ್​ ವಿರುದ್ಧ ಮಾಜಿ ಸಚಿವ ಮುರುಗೇಶ್ ನಿರಾಣಿ ಆರೋಪ

ಕಾಂಗ್ರೆಸ್ ಅಲೆಯ ನಡುವೆಯೂ ಸಿದ್ದರಾಮಯ್ಯನವರ ಅತ್ಯಾಪ್ತರಾಗಿರುವ ಎಂ.ಕೆ ಸೋಮಶೇಖರ್ 7 ಸಾವಿರ ಮತಗಳಿಂದ ಸೋತಿದ್ದಾರೆ. ಮೈಸೂರಿನ ಕೃಷ್ಣರಾಜ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಎಂ.ಕೆ ಸೋಮಶೇಖರ್ ಸೋಲಿನ ಬಗ್ಗೆ ಸಿದ್ದರಾಮಯ್ಯ ತಲೆ ಕೆಡಿಸಿಕೊಂಡಿದ್ದು, ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಸ್ಥಳೀಯ ಕಾಂಗ್ರೆಸ್‌ ನಾಯಕರಾದ ಪ್ರದೀಪ್‌ಕುಮಾರ್ ಹಾಗೂ ನವೀನ್‌ಕುಮಾರ್ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಪತ್ರ ಬರೆದಿದ್ದಾರೆ.

ತಮ್ಮ ಸೋಲಿಗೆ ಕಾಂಗ್ರೆಸ್‌ನ ಪ್ರದೀಪ್‌ಕುಮಾರ್ ಹಾಗೂ ನವೀನ್‌ಕುಮಾರ್ ಕಾರಣ ಎಂದು ಎಂ.ಕೆ ಸೋಮಶೇಖರ್ ಅವರು ಸಿದ್ದರಾಮಯ್ಯಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರದೀಪ್‌ಕುಮಾರ್ ಹಾಗೂ ನವೀನ್‌ಕುಮಾರ್ ವಿರುದ್ಧ ಶಿಸ್ತು ಕ್ರಮಕ್ಕೆ ಸಿದ್ದರಾಮಯ್ಯ ಪಕ್ಷದ ಅಧ್ಯಕ್ಷರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಪ್ರದೀಪ್ ಕುಮಾರ್ ಮತ್ತು ಎಂ.ಎನ್.ನವೀನ್ ಕುಮಾರ್ ಅವರು ಕೃಷ್ಣರಾಜ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಆದ್ರೆ, ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸೋಮಶೇಖರ್​ಗೆ ಟಿಕೆಟ್ ಕೊಡಿಸಿದ್ದರು. ಇದರಿಂದ ಅಸಮಾಧಾನಗೊಂಡಿದ್ದ ಪ್ರದೀಪ್ ಕುಮಾರ್ ಮತ್ತು ಎಂ.ಎನ್.ನವೀನ್ ಕುಮಾರ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸೋಮಶೇಖರ್​ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದರು ಎಂದು ಆರೋಪ ಕೇಳಿಬಂದಿವೆ. ಈಗ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಆದ್ರೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ