ಸಿದ್ದರಾಮಯ್ಯ ಮಂಡಿಸಿದ ಬಜೆಟ್​ನಲ್ಲಿ ವಿಶೇಷತೆ ಏನಿಲ್ಲ: ಆದಾಯ ಹೆಚ್ಚಿಸಲು ಅಬಕಾರಿ ಸುಂಕ ಹೆಚ್ಚಳ ಎಂದ ಮಾಜಿ ಸಿಎಂ HD ಕುಮಾರಸ್ವಾಮಿ

ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್​ನಲ್ಲಿ ವಿಶೇಷತೆ ಏನಿಲ್ಲ. ಒಂದೇ ವರ್ಷಕ್ಕೆ ಜನರ ಮೇಲೆ 85,000 ಕೋಟಿ ಸಾಲ ಹೇರುತ್ತಿದ್ದಾರೆ. ಆದಾಯ ಹೆಚ್ಚಿಸಲು ಸರ್ಕಾರ ಅಬಕಾರಿ ಸುಂಕವನ್ನು ಹೆಚ್ಚಿಸಿದೆ. ಅನ್ನಭಾಗ್ಯ ಅಕ್ಕಿಗೆ ನೀಡುವ ಹಣ ಅಬಕಾರಿ ಇಲಾಖೆಗೆ ಹೋಗುತ್ತೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಮಂಡಿಸಿದ ಬಜೆಟ್​ನಲ್ಲಿ ವಿಶೇಷತೆ ಏನಿಲ್ಲ: ಆದಾಯ ಹೆಚ್ಚಿಸಲು ಅಬಕಾರಿ ಸುಂಕ ಹೆಚ್ಚಳ ಎಂದ ಮಾಜಿ ಸಿಎಂ HD ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ
Follow us
Sunil MH
| Updated By: ಗಂಗಾಧರ​ ಬ. ಸಾಬೋಜಿ

Updated on:Jul 07, 2023 | 4:20 PM

ಬೆಂಗಳೂರು: ಆದಾಯ ಹೆಚ್ಚಿಸಲು ಸರ್ಕಾರ ಅಬಕಾರಿ ಸುಂಕವನ್ನು ಹೆಚ್ಚಿಸಿದೆ. ಅನ್ನಭಾಗ್ಯ ಅಕ್ಕಿಗೆ ನೀಡುವ ಹಣ ಅಬಕಾರಿ ಇಲಾಖೆಗೆ ಹೋಗುತ್ತೆ. ಆ ಅನ್ನಭಾಗ್ಯದ ಹಣವನ್ನು ತೆಗೆದುಕೊಂಡು ಮನೆಗೆ ಹೋಗುತ್ತಾನೋ, ಇನ್ನೆಲ್ಲಿಗೆ ಹೋಗುತ್ತಾನೋ ನನಗೆ ಗೊತ್ತಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್​ನಲ್ಲಿ ವಿಶೇಷತೆ ಏನಿಲ್ಲ ಎಂದಿದ್ದಾರೆ.

ಬಜೆಟ್​ಗಳ ಅಧ್ಯಯನ ಮಾಡಿದ್ದೇನೆ ಎಂದ ಹೆಚ್​.ಡಿ ಕುಮಾರಸ್ವಾಮಿ

ಒಂದೇ ವರ್ಷಕ್ಕೆ ಜನರ ಮೇಲೆ 85,000 ಕೋಟಿ ಸಾಲ ಹೇರುತ್ತಿದ್ದಾರೆ. 1995ರಿಂದ ಈವರೆಗೆ ಸಿದ್ದರಾಮಯ್ಯ  ಮಂಡಿಸಿದ 13 ಬಜೆಟ್​ಗಳ ಅಧ್ಯಯನ ಮಾಡಿದ್ದೇನೆ. ದುಡಿಯುವ ಕೈಗಳಿಗೆ ಸ್ವಾವಲಂಬಿಯಾಗಿಸಲು ಯೋಜನೆ ಏನು ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Agriculture, Horticulture Budget 2023: ಸಿದ್ಧರಾಮಯ್ಯ ಬಜೆಟ್​ನಲ್ಲಿ ರೈತರ ಜೀವಾಳ ಕೃಷಿ ಮತ್ತು ತೋಟಗಾರಿಕೆಗೆ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ

ನಿಮ್ಮ ಯಾವ ಗ್ಯಾರಂಟಿಗೂ ನನ್ನ ತಕರಾರಿಲ್ಲ. ಇನ್ನೂ ಎರಡು ಗ್ಯಾರಂಟಿಗಳನ್ನು ಕೊಡಿ ನಮ್ಮದೇನು ತಕರಾರಿಲ್ಲ. ಗ್ಯಾರಂಟಿಗಳಿಗೆ ವರ್ಷಕ್ಕೆ 50-60 ಸಾವಿರ ಕೋಟಿ ವೆಚ್ಚ ಆಗಲಿದೆ. ಬೇರೆ ಯಾವುದಕ್ಕೂ ಬಜೆಟ್​ನಲ್ಲಿ ಸರ್ಕಾರ ಹಣ ಮೀಸಲಿಟ್ಟಿಲ್ಲ. ಕೇಂದ್ರ ಮತ್ತು ಹಿಂದಿನ ಸರ್ಕಾರವನ್ನು ದೂಷಿಸುವ ಬಜೆಟ್ ಅಷ್ಟೇ ಎಂದರು.

ಈ ಬಜೆಟ್​ನಲ್ಲಿ ಏನೂ ಇಲ್ಲ

ನೀರಾವರಿ, ಕೃಷಿಗೆ ಹಾಗೂ ರಾಜ್ಯದ ಜನರು ಬದುಕು ಕಟ್ಟಿಕೊಳ್ಳಲು ಸ್ವಾಭಿಮಾನಿಯನ್ನಾಗಿ ಮಾಡಲು ಬಜೆಟ್ ಎಷ್ಟು ಸಹಕಾರಿಯಾಗುತ್ತೆ. ಕೇಂದ್ರ-ರಾಜ್ಯ ಸರ್ಕಾರ ಉತ್ತಮ ಬಾಂಧವ್ಯ ಇಟ್ಟುಕೊಳ್ಳಬೇಕು. ಪ್ರತಿ ಬಾರಿ ಕೇಂದ್ರದವರನ್ನು ದೂಷಿಸಿದರೆ ಯಾಕೆ ನೆರವು ನೀಡುತ್ತಾರೆ. ಕೇಂದ್ರ ಸರ್ಕಾರವನ್ನು ರಾಜ್ಯ ಸರ್ಕಾರ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಕರ್ನಾಟಕದ ಬಜೆಟ್ ದೇಶಕ್ಕೆ ಸಂದೇಶ ಕೊಡುವ ಬಜೆಟ್ ಅಂತೆ. ಬಹಳ ಆಕರ್ಷಕ ಬಜೆಟ್ ಅಂತೆ, ಈ ಬಜೆಟ್​ನಲ್ಲಿ ಏನೂ ಇಲ್ಲ ಎಂದು ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ವಿಧಾನಸಭೆಯಲ್ಲಿ ಭದ್ರತಾ ಲೋಪ: ಬಜೆಟ್ ಮಂಡನೆ ವೇಳೆ ಸದನದಲ್ಲಿ ಬಂದು ಕುಳಿತ ಅನಾಮಿಕ ವ್ಯಕ್ತಿ

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಲೆಖಾನುದಾನ ಪಡೆದಿದ್ದಾರೆ. ಅದರ ಮುಂದುವರೆದ ಬಜೆಟ್ ಇದು. ನಮ್ಮ ಹಣಕಾಸು ಸಚಿವರ ದಾಖಲೆಯ ಬಜೆಟ್ ಇದು. ರಾಮಕೃಷ್ಣ ಹೆಗಡೆಯವರ ನಂತರ ಅತ್ಯಂತ ಹಿರಿಯ ರಾಜಕಾರಣಿ. ಜನತಾ ದಳದ ಆರ್ಥಿಕ ಸಚಿವರಾಗಿ 5 ಬಜೆಟ್, ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ 2 ಬಜೆಟ್​ ಹಾಗೂ ಅವರೇ ಸಿಎಂ ಆಗಿ 6 ಬಜೆಟ್ ಮಂಡಿಸಿದ್ದಾರೆ.

ರಾಜ್ಯದ ಅನುಭವಿ ಆರ್ಥಿಕ ಸಚಿವರು ರಾಜ್ಯದ ಜನರಿಗೆ ಸರ್ವರಿಗೂ ಸಮಪಾಲು, ಸಮಬಾಳಿನ ಬಜೆಟ್ ಮಂಡಿಸಿದ್ದಾರೆ. ಇದು ರಾಜ್ಯದ ಬಜೆಟ್ ಪುಸ್ತಕ ಅನ್ನುವುದಕ್ಕಿಂತ ಕೇಂದ್ರ ಸರ್ಕಾರ ಮತ್ತು ಹಿಂದಿನ ಸರ್ಕಾರ ಬಿಜೆಪಿಯ ಆಡಳಿತ ಬಂದ ನಂತರ ಆರ್ಥಿಕ ಶಿಸ್ತನ್ನ ಉಲ್ಲಂಘಿಸಿದ್ದಾರೆ. ಕೇಂದ್ರ ಸರ್ಕಾರ ನಮಗೆ ಅನ್ಯಾಯ ಮಾಡಿದೆ ಎಂಬ ಆರೋಪ ಮಾಡಿದ್ದಾರೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:19 pm, Fri, 7 July 23

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್