ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲದಿದ್ದರೆ ಅಲುಗಾಡುತ್ತಾ ಸಿಎಂ ಕುರ್ಚಿ? ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ ಶಿಷ್ಯ

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ, ಇದರ ಮಧ್ಯೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಕಡಿಮೆ ಸ್ಥಾನಗಳು ಬಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾಗುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದರ ಮಧ್ಯೆ ಇದೀಗ ಸಿದ್ದರಾಮಯ್ಯನವರ ಶಿಷ್ಯನ ಬಾಯಲ್ಲೇ ಇಂತಹದೊಂದು ಮಾತು ಬಂದಿದ್ದು ಅಚ್ಚರಿಗೆ ಕಾರಣವಾಗಿದೆ.

ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲದಿದ್ದರೆ ಅಲುಗಾಡುತ್ತಾ ಸಿಎಂ ಕುರ್ಚಿ? ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ ಶಿಷ್ಯ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Apr 18, 2024 | 4:06 PM

ಕೋಲಾರ, (ಏಪ್ರಿಲ್ 18): ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಣ ರಂಗೇರಿದೆ. ರಾಜ್ಯದ 28 ಕ್ಷೇತ್ರಗಳಲ್ಲೂ ಪ್ರಚಾರ ಭರ್ಜರಿಯಾಗಿ ನಡೀತಿದ್ರೆ, ಸಿಎಂ ತವರು ಕ್ಷೇತ್ರದಲ್ಲಿ ಮಾತ್ರ ಪ್ರಚಾರ ಮತ್ತೊಂದು ಹಂತಕ್ಕೆ ತಲುಪಿದೆ. ಮೈಸೂರು-ಚಾಮರಾಜನಗರದಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯ (Siddaramaiah) 9 ದಿನ ಪ್ರಚಾರ ಮಾಡಿದ್ದಾರೆ. ಇದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈ ಬಾರಿ ಈ ಎರಡೂ ಕ್ಷೇತ್ರಗಳನ್ನು ಗೆಲ್ಲಲೇಬೇಕು. ಇಲ್ಲವಾದಲ್ಲಿ ಸಿಎಂ ಕುರ್ಚಿ ಕಂಟಕ ಇದೆ ಎನ್ನುವ ಮಾತುಗಳು ಹರಿದಾಡುತ್ತಿವೆ. ಇದರ ಮಧ್ಯೆ ಇದೀಗ ಸಿದ್ದರಾಮಯ್ಯನವರ ಶಿಷ್ಯ, ಸಚಿವ ಬೈರತಿ ಸುರೇಶ್​ (Byrathi suresh) ಸಹ  ಕಾಂಗ್ರೆಸ್​ ಅಭ್ಯರ್ಥಿಗಳು ಸೋತರೆ ಸಿಎಂ ಸ್ಥಾನಕ್ಕೆ ಕಂಟಕವಾಗಲಿದೆ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ಇದು ರಾಜ್ಯ ಕಾಂಗ್ರೆಸ್​ನಲ್ಲಿ ಬಾರೀ ಸಂಚಲನಕ್ಕೆ ಕಾರಣವಾಗಿದೆ.

ಇಂದು (ಏಪ್ರಿಲ್ 18) ಕೋಲಾರ ನಗರದ ಹಾಲಿಸ್ಟರ್ ಭವನದಲ್ಲಿ ನಡೆದ ಕುರುಬ ಸಮುದಾಯದ ಮುಖಂಡ ಸಭೆಯಲ್ಲಿ ಮಾತನಾಡಿದ ಸಚಿವ ಬೈರತಿ ಸುರೇಶ್, ಕಾಂಗ್ರೆಸ್​ ಅಭ್ಯರ್ಥಿಗಳು ಸೋತರೆ ಸಿದ್ದರಾಮಯ್ಯ ಸ್ಥಾನಕ್ಕೆ ಕಂಟಕವಾಗಲಿದೆ. ಹೀಗಾಗಿ ಕುರುಬ ಸಮುದಾಯ ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು. ನಿಮ್ಮ ಬೆಂಬಲ ಕಾಂಗ್ರೆಸ್​​ ಪಕ್ಷದ ಮೇಲಿರಲಿ, ಸಿದ್ದರಾಮಯ್ಯನವರ ಮೇಲಿರಲಿ, ಹಾಗೇ ಅಭ್ಯರ್ಥಿ ಗೌತಮ್​ ಮೇಲಿರಲಿ. ಒಂದು ವೇಳೆ ನೀವು ಬೇರೆ ಮನಸ್ಸು ಮಾಡಿ ಬೇರೆ ಅಭ್ಯರ್ಥಿ ಏನಾದರೂ ಗೆದ್ದರೆ ಸಿದ್ದರಾಮಯ್ಯನವರ ಸೀಟಿಗೆ ಕಂಟಕವಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ: ಡಾ ಕೆ ಸುಧಾಕರ್ ಜೈಲಿಗೆ ಹೋಗುವ ಸ್ಥಿತಿ ಬರಲಿದೆ: ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇದೇ ಅರ್ಥದಲ್ಲಿ ಹೇಳಿದ್ದ ಮತ್ತೋರ್ವ ಕೈ ಶಾಸಕ

ಮೊನ್ನೇ ಅಷ್ಟೇ ಕಾಂಗ್ರೆಸ್ ಶಾಸಕ ಎಸ್‌ಆರ್‌ ಶ್ರೀನಿವಾಸ್‌ ಅವರು ಸಹ ಇದೇ ಅರ್ಥದಲ್ಲಿ ಹೇಳಿಕೆ ನೀಡಿದ್ದರು. ಕರ್ನಾಟಕದಲ್ಲಿ ಕಾಂಗ್ರೆಸ್‌ ಹೆಚ್ಚಿನ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲದಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಸಂಗ ಬರುತ್ತದೆ ಎಂದು ಹೇಳಿದ್ದರು. ಈ ಮೂಲಕ ಲೋಕಸಭಾ ಚುನಾವಣೆಯ ಬಳಿಕ ಮುಖ್ಯಮಂತ್ರಿ ಬದಲಾಗುವ ಸುಳಿವನ್ನು ಗುಬ್ಬಿ ಶಾಸಕ ನೀಡಿದ್ದರು. ಈ ಹೇಳಿಕೆ ಕಾಂಗ್ರೆಸ್​ನಲ್ಲಿ ಮಾತ್ರವಲ್ಲದೇ ರಾಜ್ಯ ರಾಜಕಾರನದಲ್ಲೂ ಸಂಚಲನ ಸೃಷ್ಟಿಸಿತ್ತು.

ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ ಸಿದ್ದರಾಮಯ್ಯ ಈಗಾಗಲೇ ಶಾಸಕರು, ಸಚಿವರು, ನಗಮ ಮಂಡಳಿ ಅಧ್ಯಕ್ಷರಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಬೇಕೆಂದು ಕಾಂಗ್ರೆಸ್ ಹೈಕಮಾಂಡ್ ಟಾಸ್ಕ್ ನೀಡಿದೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಈ ಬಾರಿ ತಮ್ಮ ತವರು ಜಿಲ್ಲೆಯ ಮೈಸೂರು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಿಸಿಕೊಂಡು ಬರಬೇಕೆಂದು ಹೈಕಮಾಂಡ್​ ಸೂಚಿಸಿದೆ ಎಂದು ತಿಳಿದುಬಂದಿದೆ. ಹೀಗಾಗಿ ​ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಚುನಾವಣೆ ದಿನಾಂಕ ಘೋಷಣೆಯಾದ ಆರಂಭದಲ್ಲೇ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಎರಡ್ಮೂರು ದಿನಗಳ ಕಾಲ ಠಿಕಾಣಿ ಹೂಡಿ ನಾನಾ ತಂತ್ರಗಳನ್ನು ರೂಪಿಸಿದ್ದಾರೆ.

2 ಕ್ಷೇತ್ರದಲ್ಲಿ 9 ದಿನ ಪ್ರಚಾರ

ಈ ಬಾರಿ ಸಿಎಂ ಸಿದ್ದರಾಮಯ್ಯ ಲೋಕಸಭಾ ಚುನಾವಣೆ ಪ್ರಚಾರ ಶುರು ಮಾಡಿದ್ದೇ ತವರು ಜಿಲ್ಲೆಯಿಂದ. ಮಾರ್ಚ್ 24 ರಿಂದ 4 ದಿನಗಳ ಕಾಲ ಎರಡು ಕ್ಷೇತ್ರದಲ್ಲಿ ಸಿಎಂ ಪ್ರಚಾರ ಮಾಡಿದ್ರೆ, ಏಪ್ರಿಲ್ 01ರಿಂದ ಮತ್ತೆ 3 ದಿನಗಳ ಕಾಲ ಸಿದ್ದರಾಮಯ್ಯ ತಮ್ಮ ಸಮಯವನ್ನ ಎರಡು ದಿನಗಳ ಮೈಸೂರು ಹಾಗೂ ಚಾಮರಾಜನಗರಕ್ಕೆ ಮೀಸಲಿಟ್ಟಿದ್ರು. ಹೀಗೆ ಸಿದ್ದರಾಮಯ್ಯ ಮೈಸೂರು ಮತ್ತು ಚಾಮರಾಜನಗರಕ್ಕೆ ಸಿಎಂ ಒಟ್ಟು 9 ದಿನ ಪ್ರಚಾರ ಮಾಡಿದ್ದಾರೆ.

ನಿಜಕ್ಕೂ ಚುನಾವಣೆ ಬಳಿಕ ಬದಲಾಗ್ತಾರಾ ಸಿಎಂ?

ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ವಿಧಾನಸಭಾ ಚುನಾವಣೆ ಮುಗಿದಾಗಿನಿಂದಲೂ ಸಿಎಂ ಸ್ಥಾನದ ವಿಚಾರವಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ನಡುವೆ ಹಗ್ಗಜಗ್ಗಾಟ ನಡೆಯುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಉತ್ತಮ ಸಾಧನೆ ಮಾಡದಿದ್ದರೆ ಸಿದ್ದರಾಮಯ್ಯ ಅವರ ಸಿಎಂ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಡಿಕೆ ಶಿವಕುಮಾರ್‌ ಸಿಎಂ ಆಗಿಲ್ಲ ಎಂದರೂ ಬೇರೆಯವರನ್ನು ಮುಖ್ಯಮಂತ್ರಿ ಮಾಡುವ ಸಾಧ್ಯತೆ ಇದೆ. ಅದಕ್ಕಾಗಿಯೇ ದಲಿತ ಸಿಎಂ ಕೂಗು ಕೂಡ ನಿರಂತರವಾಗಿ ಕೇಳಿಬರುತ್ತಲೇ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:57 pm, Thu, 18 April 24

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ