‘ಸಿದ್ದರಾಮೋತ್ಸವ’ ಟ್ವೀಟ್ ವಾರ್: ಸಿದ್ದರಾಮಯ್ಯ ಪ್ರತಿ ಟೀಕೆಗೂ ಠಕ್ಕರ್ ಕೊಟ್ಟ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಮುಂದುವರೆದ ಸಿದ್ದರಾಮೋತ್ಸವ ಟ್ವೀಟ್ ವಾರ್. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪ್ರತಿ ಟೀಕೆಗಳಿಗೂ ಠಕ್ಕರ್ ಕೊಟ್ಟ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ.

'ಸಿದ್ದರಾಮೋತ್ಸವ' ಟ್ವೀಟ್ ವಾರ್: ಸಿದ್ದರಾಮಯ್ಯ ಪ್ರತಿ ಟೀಕೆಗೂ ಠಕ್ಕರ್ ಕೊಟ್ಟ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ ಮತ್ತು ಸಿದ್ದರಾಮಯ್ಯ
Follow us
TV9 Web
| Updated By: Rakesh Nayak Manchi

Updated on:Jul 12, 2022 | 9:46 AM

ಬೆಂಗಳೂರು: ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಲಾಗಿರುವ ಸಿದ್ದರಾಮೋತ್ಸವ (Siddaramaotsava) ಏಕವ್ಯಕ್ತಿ ಪ್ರದರ್ಶನಕ್ಕೆ ಕಾರಣವಾಗುತ್ತಿದೆ ಎಂಬ ಬೇಗುದಿ ಕಾಂಗ್ರೆಸ್ ಪಕ್ಷದಲ್ಲೇ ಭುಗಿಲೆದ್ದ ಬೆನ್ನಲ್ಲೆ ಇದರ ವಿರುದ್ಧ ಬಿಜೆಪಿ ಟೀಕಾಪ್ರಹಾರ ನಡೆಸಲು ಪ್ರಾರಂಭಿಸಿತ್ತು. ಇದೇ ಕಾರಣಕ್ಕೆ ಸಿದ್ದರಾಮಯ್ಯ (Siddaramaiah) ಅವರು ಬಿಜೆಪಿ ವಿರುದ್ಧ ತಿರುಗಿಬಿದ್ದು ಟೀಕೆಗಳನ್ನು ಮಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಬಿಜೆಪಿ (BJP) ಕೂಡ ಟ್ವೀಟ್ ಮಾಡುತ್ತಿದೆ. ಈ ಟ್ವೀಟ್‌ ವಾರ್‌ ಈಗಲೂ ಮುಂದುವರಿದಿದ್ದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಟೀಕೆಗಳಿಗೆ ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ಖಾತೆ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಅವರು ಟ್ವೀಟ್‌ ಮೂಲಕವೇ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: Tamil Nadu Politics: ಎಐಎಡಿಎಂಕೆ ವಿಭಜನೆಯಿಂದ ಡಿಎಂಕೆಗೆ ಲಾಭ, ಬಿಜೆಪಿ ಹೊಸ ಅವಕಾಶ

ಸಿದ್ದರಾಮಯ್ಯ ಅವರ ಟೀಕೆಗಳನ್ನು ಖಂಡಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸಿದ್ದರಾಮಯ್ಯರ ಪ್ರತಿ ಮಾತಿಗೂ ಠಕ್ಕರ್‌ ನೀಡಿದ್ದಾರೆ. ಆ ಮೂಲಕ ಸಿದ್ದರಾಮೋತ್ಸವ ಇನ್ನೊಂದು ಸುತ್ತಿನ ರಾಜಕೀಯ ವಾಗ್ಯುದ್ಧಕ್ಕೆ ಕಾರಣವಾಗಿದೆ. ಸಿಎಂ ಆಗಿದ್ದ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಿ ಜೈಲಿಗೆ ಕಳುಹಿಸಿ, ಮುಖ್ಯಮಂತ್ರಿ ಸ್ಥಾನದಿಂದ ಇಳಿಸುವಲ್ಲಿ ಶಾಮೀಲಾಗಿದ್ದೀರಿ ಎಂಬ ಸಿದ್ದರಾಮಯ್ಯ ಅವರ ಟೀಕೆಗೆ ತಿರಗೇಟು ನೀಡಿದ ಪ್ರಲ್ಹಾದ್‌ ಜೋಶಿಯವರು ಖಡಕ್ ಉತ್ತರ ಕೊಟ್ಟಿದ್ದಾರೆ.

”ಒಳ ಸಂಚು ಮತ್ತು ಷಡ್ಯಂತ್ರವನ್ನೇ ವೃತ್ತಿ ಮತ್ತು ಪ್ರವೃತ್ತಿಯನ್ನಾಗಿಸಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಸಿದ್ದರಾಮಯ್ಯನವರಿಗೆ ತಾವು ಮಾಡಿದ ಕುತಂತ್ರಗಳೇ ಬೇರೆ ಪಕ್ಷಗಳಲ್ಲೂ ಇರಬಹುದು ಎಂದು ಭಾಸವಾಗುತ್ತಿದೆ. ಯಾಕೆಂದರೆ ಕಾಮಾಲೆ ಕಣ್ಣಿಗೆ ಕಾಣುವುದೆಲ್ಲಾ ಹಳದಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Maharashtra Cabinet: ರಾಷ್ಟ್ರಪತಿ ಚುನಾವಣೆ ಬಳಿಕ ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ

ಅಲ್ಲದೆ, ”ಮುಖ್ಯಮಂತ್ರಿ ಆಗಿದ್ದ ಯಡಿಯೂರಪ್ಪನವರನ್ನು ಜೈಲಿಗೆ ಕಳುಹಿಸಲು ಕಾಂಗ್ರೆಸ್‌ ಪರಮೋಚ್ಛ ನಾಯಕಿ ಸೋನಿಯಾ ಗಾಂಧಿ ಯಾವ ರೀತಿ ಕಾರಣರಾದರು ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಇಡಿ ಮತ್ತು ಸಿಬಿಐ ಬಳಸಿ ಪಕ್ಷವನ್ನು ಒಡೆದು ನೀವು ಯಾವ ರೀತಿಯಾಗಿ ಮುಖ್ಯಮಂತ್ರಿಯಾಗಿದ್ದೀರಿ ಎನ್ನುವುದೂ ಮರೆತಿದ್ದೀರಾ” ಎಂದು ಸಿದ್ದರಾಮಯ್ಯ ಅವರನ್ನೇ ಕೇಂದ್ರ ಸಚಿವರು ಪ್ರಶ್ನಿಸಿದ್ದಾರೆ.

“ನಿಮ್ಮ ಅಧಿಕಾರದ ದುರಾಸೆಗೆ ಕಾಂಗ್ರೆಸ್ಸಿನವರೇ ಆದ ಡಿ.ಕೆ.ಶಿವಕುಮಾರ್‌ ಅವರನ್ನು ಜೈಲಿಗೆ ಕಳುಹಿಸಿದ ಕೀರ್ತಿ ನಿಮಗೇ ಸಲ್ಲುತ್ತದೆ. ಇದನ್ನು ಡಿ.ಕೆ.ಶಿವಕುಮಾರ್‌ ಅವರ ತಾಯಿಯೇ ಹೇಳಿದ್ದಾರೆ. ಅದನ್ನು ಮರೆತ ಸಿದ್ದರಾಮಯ್ಯನವರು, ಬಿಜೆಪಿಯಲ್ಲಿ ಬಿ.ಎಸ್‌.ಯಡಿಯೂರಪ್ಪನವರನ್ನು ಬೇರೆಯವರು ಮುಗಿಸಿದರು ಎಂದು ಸುಳ್ಳು ಹೇಳುತ್ತಿದ್ದಾರೆ. ಅವರಲ್ಲಿ ನೈತಿಕತೆ ಎನ್ನುವುದು ಏನಾದರೂ ಉಳಿದಿದೆಯಾ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ ಕುರಿತ ಸಭೆಯಲ್ಲಿ ಶಿವಸೇನಾದ 13 ಸಂಸದರು ಭಾಗಿ; ದ್ರೌಪದಿ ಮುರ್ಮುಗೆ ಬೆಂಬಲ ನೀಡಲು ಸಹಮತ

Published On - 9:46 am, Tue, 12 July 22

ಮುಸ್ಲಿಮರಿಗೆ ಮತದಾನದ ಹಕ್ಕು: ಸ್ವಾಮೀಜಿ ಹೇಳಿಕೆಗೆ ಮಹದೇವಪ್ಪ ಗರಂ
ಮುಸ್ಲಿಮರಿಗೆ ಮತದಾನದ ಹಕ್ಕು: ಸ್ವಾಮೀಜಿ ಹೇಳಿಕೆಗೆ ಮಹದೇವಪ್ಪ ಗರಂ
ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್