ಕಾಂಗ್ರೆಸ್ ಸರ್ಕಾರ ಬೀಳಿಸಲು ಸಿಂಗಾಪುರದಲ್ಲಿ ಕಾರ್ಯತಂತ್ರ, ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಹೆಚ್ಡಿ ಕುಮಾರಸ್ವಾಮಿ ಅವರು ಸಿಂಗಾಪುರ ಪ್ರವಾಸದಲ್ಲಿದ್ದಾರೆ. ಇದರ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರು ಮಾತನಾಡಿ ಸಿಂಗಾಪುರದಲ್ಲಿ ಸರ್ಕಾರ ಬೀಳಿಸುವ ಕೆಲಸ ನಡೆಯುತ್ತಿದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಬೆಂಗಳೂರು, (ಜುಲೈ 24): ವಿದೇಶದಲ್ಲಿ ಕುಳಿತು ಕರ್ನಾಟಕದಲ್ಲಿ ಬಹುಮತದ ಕಾಂಗ್ರೆಸ್ ಸರ್ಕಾರವನ್ನು(karnataka congress government ) ಬೀಳಿಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್(dk shivakumar) ಹೊಸ ಬಾಂಬ್ ಸಿಡಿಸಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು (ಜುಲೈ 24) ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಸಿಂಗಾಪುರದಲ್ಲಿ ಕುಳಿತು ಸರ್ಕಾರದ ವಿರುದ್ಧ ತಂತ್ರ ರೂಪಿಸುತ್ತಿದ್ದಾರೆ. ನಮಗೆ ಬಂದ ಮಾಹಿತಿ ಪ್ರಕಾರ ಅವರೇನೋ ತಂತ್ರ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಮಾಡುವುದು ಬಿಟ್ಟು ಹೊರಗೆ ತಂತ್ರ ಮಾಡುತ್ತಿದ್ದಾರೆ ಎಂದು ಹೆಸರು ಹೇಳದೇ ಪರೋಕ್ಷವಾಗಿ ಕುಮಾರಸ್ವಾಮಿ ಸಿಂಗಾಪುರ ಪ್ರವಾಸದ ಬಗ್ಗೆ ಗಂಭೀರ ಆರೋಪ ಮಾಡಿದರು.
ಸಿಂಗಾಪುರದಲ್ಲಿ ಸರ್ಕಾರ ಬೀಳಿಸುವ ಕೆಲಸ ನಡೆಯುತ್ತಿದೆ. ಇದೆಲ್ಲಾ ಒಂದು ತಂತ್ರ. ಇದರ ಬಗ್ಗೆ ನಮಗೂ ಮಾಹಿತಿ ಬಂದಿದೆ. ಬೆಂಗಳೂರಿನಲ್ಲಿ ಆಪರೇಷನ್ ಮಾಡಿದ್ರೆ ಗೊತ್ತಾಗುತ್ತೆ ಎಂದು ಸಿಂಗಾಪುರದಲ್ಲಿ ಕೂತು ಆಪರೇಷನ್ ಮಾಡುತ್ತಿದ್ದಾರೆ ಎಂದು ಸ್ಫೋಟಕ ಹೇಳಿಕೆ ನೀಡಿದರು. ಹಾಗಾದ್ರೆ, ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಸಿಂಗಾಪುರಲ್ಕೆ ಹೋಗಿದ್ದಾರೆಯೇ? ಅಲ್ಲಿ ಯಾರ ಜೊತೆ ತಂತ್ರ ರೂಪಿಸುತ್ತಿದ್ದಾರೆ? ಅಂತೆಲ್ಲ ಪ್ರಶ್ನೆಗಳು ಉದ್ಭವಿಸಿವೆ.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಗುರುವಾರ ಅರೋಗ್ಯ ತಪಾಸಣೆಗೆಂದು ಸಿಂಗಾಪುರಕ್ಕೆ ಹೋಗಿದ್ದಾರೆ ಎನ್ನಲಾಗಿದೆ. ಜೆಡಿಎಸ್ ಪಕ್ಷದ ಮೂಲಗಳ ಪ್ರಕಾರ ಕುಮಾರಸ್ವಾಮಿ ಅವರು ದ್ವೀಪ ರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಕುಮಾರಸ್ವಾಮಿ ಅವರು ಸಿಂಗಾಪುರಕ್ಕೆ ಹೋಗಿರುವುದು ಇದು ಮೊದಲಲ್ಲ. ಹಿಂದೆಯೂ ಹಲವು ಬಾರಿ ಸಿಂಗಾಪುರಕ್ಕೆ ಹೋಗಿದ್ದರು. ಅಲ್ಲದೇ ಸಿಂಗಾಪುರದಲ್ಲಿ ಇದ್ದಗಾಗಲೇ ಇತ್ತ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ಅಲಗಾಡಿತ್ತು.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ