Sonia Gandhi: ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಸೋನಿಯಾ ಗಾಂಧಿ, ಇದು ಪಕ್ಷಕ್ಕೆ ತಿರುವು ಎಂದ ಅಧಿನಾಯಕಿ

ಭಾರತ್ ಜೋಡೋ ಯಾತ್ರೆಯೊಂದಿಗೆ ನನ್ನ ಇನ್ನಿಂಗ್ಸ್ ಮುಕ್ತಾಯವಾಗಬಹುದು ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶನಿವಾರ ರಾಜಕೀಯದಿಂದ ನಿವೃತ್ತಿ ಹೊಂದುವ ಬಗ್ಗೆ ಪ್ರಸ್ತಾಪಿಸಿದ್ದಾರೆ.

Sonia Gandhi: ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಸೋನಿಯಾ ಗಾಂಧಿ, ಇದು ಪಕ್ಷಕ್ಕೆ ತಿರುವು ಎಂದ ಅಧಿನಾಯಕಿ
ಸೋನಿಯಾ ಗಾಂಧಿ
Follow us
ಅಕ್ಷಯ್​ ಪಲ್ಲಮಜಲು​​
|

Updated on:Feb 25, 2023 | 1:40 PM

ರಾಯ್‌ಪುರ: ಭಾರತ್ ಜೋಡೋ ಯಾತ್ರೆಯೊಂದಿಗೆ ನನ್ನ ಇನ್ನಿಂಗ್ಸ್ ಮುಕ್ತಾಯವಾಗಬಹುದು ಎಂದು ಸೋನಿಯಾ ಗಾಂಧಿ (Sonia Gandhi) ಹೇಳಿದ್ದಾರೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶನಿವಾರ ರಾಜಕೀಯದಿಂದ ನಿವೃತ್ತಿ ಹೊಂದುವ ಬಗ್ಗೆ ಪ್ರಸ್ತಾಪಿಸಿದ್ದಾರೆ. ಇದು ಪಕ್ಷಕ್ಕೆ ತಿರುವು ಎಂದು ಅವರು ಬಣ್ಣಿಸಿದ್ದಾರೆ. 2004 ಮತ್ತು 2009 ರಲ್ಲಿ ಡಾ. ಮನಮೋಹನ್ ಸಿಂಗ್ ಅವರ ಸಮರ್ಥ ನಾಯಕತ್ವದ ಜೊತೆಗೆ ನಮ್ಮ ವಿಜಯಗಳು ನನಗೆ ವೈಯಕ್ತಿಕ ತೃಪ್ತಿ ನೀಡಿತು ಆದರೆ ನನಗೆ ಹೆಚ್ಚು ತೃಪ್ತಿ ನೀಡಿದ್ದು, ರಾಯ್‌ಪುರದಲ್ಲಿ ನಡೆಯುತ್ತಿರುವ ಪಕ್ಷದ ಸಮಾವೇಶದಲ್ಲಿ ತಿಳಿಸಿದ್ದಾರೆ. ಕಾಂಗ್ರೆಸ್​​ಗೆ ಇದು ಸವಾಲಿನ ಸಮಯ. ಬಿಜೆಪಿ-ಆರ್‌ಎಸ್‌ಎಸ್ ಪ್ರತಿಯೊಂದು ಸಂಸ್ಥೆಯನ್ನು ವಶಪಡಿಸಿಕೊಂಡಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಪಕ್ಷದ ಮೂರು ದಿನಗಳ ಸಮಾವೇಶದ ಎರಡನೇ ದಿನದಂದು 15,000 ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಸೋನಿಯಾ ಗಾಂಧಿ, ನನಗೆ ಅತ್ಯಂತ ಸಂತೋಷಕರ ಸಂಗತಿಯೆಂದರೆ, ನನ್ನ ಇನ್ನಿಂಗ್ಸ್ ಭಾರತ್ ಜೋಡೋ ಯಾತ್ರೆಯೊಂದಿಗೆ ಮುಕ್ತಾಯಗೊಳ್ಳಬಹುದು. ಯಾತ್ರೆಯು ಒಂದು ಮಹತ್ವದ ತಿರುವು ನೀಡಿದೆ. ಭಾರತದ ಜನರು ಅಗಾಧವಾಗಿ ಸಾಮರಸ್ಯ, ಸಹಿಷ್ಣುತೆ ಮತ್ತು ಸಮಾನತೆಯನ್ನು ಬಯಸುತ್ತಾರೆ ಎಂಬುದನ್ನು ಇದು ಸಾಬೀತುಪಡಿಸಿದೆ.

ಇದನ್ನೂ ಓದಿ: Sonia Gandhi: ಕಾಂಗ್ರೆಸ್​ನ ನವ ಸಂಕಲ್ಪಗಳ ಬಗ್ಗೆ ಮಾಹಿತಿ ನೀಡಿದ ಸೋನಿಯಾ ಗಾಂಧಿ

ಕಾಂಗ್ರೆಸ್‌ನ 85ನೇ ಸರ್ವಸದಸ್ಯರ ಅಧಿವೇಶನವು ಒಂದು ದಿನದ ಹಿಂದೆ ಪ್ರಾರಂಭವಾಯಿತು ಮತ್ತು 2024 ರ ಲೋಕಸಭೆ ಚುನಾವಣೆಗೆ ಇತರ ವಿರೋಧ ಪಕ್ಷಗಳೊಂದಿಗೆ ಮೈತ್ರಿ ಸೇರಿದಂತೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ. ಬೆಂಬಲಿಗರನ್ನು ಒಟ್ಟುಗೂಡಿಸುವ ಮತ್ತು ಮತದಾರರೊಂದಿಗೆ ಪಕ್ಷದ ಸಂಪರ್ಕ ಹೆಚ್ಚಿಸುವ ಗುರಿಯನ್ನು ಹೊಂದಿರುವ ರಾಹುಲ್ ಗಾಂಧಿ ನೇತೃತ್ವದ ದೇಶಾದ್ಯಂತದ ಕಾಲ್ನಡಿಗೆಯ ಭಾರತ್ ಜೋಡೋ ಯಾತ್ರೆಯ ಹಿನ್ನೆಲೆಯಲ್ಲಿ ಇದನ್ನು ನಡೆಸಲಾಗುತ್ತಿದೆ.

ಸಭೆಯ ಮೊದಲ ದಿನ, ಕಾಂಗ್ರೆಸ್ ಉಸ್ತುವಾರಿ ಸಮಿತಿಯು ಪಕ್ಷದ ಉನ್ನತ ಮಂಡಳಿಯಾದ ಕಾರ್ಯಕಾರಿ ಸಮಿತಿಗೆ ಚುನಾವಣೆ ನಡೆಸದಿರಲು ನಿರ್ಧರಿಸಿತು ಮತ್ತು ಅದರ ಸದಸ್ಯರನ್ನು ನಾಮನಿರ್ದೇಶನ ಮಾಡಲು ಪಕ್ಷದ ಹೊಸ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ನೀಡಿತು.

Published On - 12:56 pm, Sat, 25 February 23

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು