AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾರಕಕ್ಕೇರಿದ ಸೊರಬ ಬಿಜೆಪಿಯಲ್ಲಿನ ಭಿನ್ನಮತ, ಕುಮಾರ್ ಬಂಗಾರಪ್ಪ ವಿರುದ್ಧ ಸ್ವಪಕ್ಷದ ಮುಖಡರಿಂದಲೇ ಬೈಕ್​ ರ್ಯಾಲಿ

ಕುಮಾರ್ ಬಂಗಾರಪ್ಪ ನಡೆಯ ವಿರುದ್ಧ ಮೂಲ ವಲಸಿಗ ಸಂಘರ್ಷ ನಡೆಯುತ್ತಲೇ ಇದೆ. ಈ ಎರಡು ಬಣಗಳ ನಡುವಿನ ಗುದ್ದಾಟ ಈಗ ಚುನಾವಣೆ ಸಂದರ್ಭದಲ್ಲಿ ಮತ್ತಷ್ಟು ಹೆಚ್ಚಾಗಿದೆ.

ತಾರಕಕ್ಕೇರಿದ ಸೊರಬ ಬಿಜೆಪಿಯಲ್ಲಿನ ಭಿನ್ನಮತ, ಕುಮಾರ್ ಬಂಗಾರಪ್ಪ ವಿರುದ್ಧ ಸ್ವಪಕ್ಷದ ಮುಖಡರಿಂದಲೇ ಬೈಕ್​ ರ್ಯಾಲಿ
ಕುಮಾರ್ ಬಂಗಾರಪ್ಪ ವಿರುದ್ಧ ಬೈಕ್ ರ್ಯಾಲಿ
ರಮೇಶ್ ಬಿ. ಜವಳಗೇರಾ
|

Updated on: Mar 26, 2023 | 12:56 PM

Share

ಸೊರಬ: ಸೊರಬ ಬಿಜೆಪಿಯಲ್ಲಿ (soraba BJP) ಪುನಃ ಭಿನ್ನಮತ ಸ್ಫೋಟಗೊಂಡಿದೆ. ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಹಾಲಿ ಶಾಸಕ ಕುಮಾರ್ ಬಂಗಾರಪ್ಪ(Kumar Bangarappa) ವಿರುದ್ಧ ಅಸಮಾಧಾನ ಭುಗಿಲೆದ್ದಿದೆ. ಸೊರಬ ತಾಲೂಕಿನ ಮೂಲ ಬಿಜೆಪಿ ಹಾಗೂ ಆರ್​ಎಸ್​ಎಸ್ (BJP And RSS) ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು. ಯಾವುದೇ ಕಾರಣಕ್ಕೂ ಈ ಬಾರಿ ಕುಮಾರ್ ಬಂಗಾರಪ್ಪಗೆ ಬಿಜೆಪಿ ಟಿಕೆಟ್ ನೀಡದಂತೆ ನಮೋ ವೇದಿಕೆಯ ಸಾವಿರಾರು ಕಾರ್ಯಕರ್ತರು ಬೃಹತ್​ ಬೈಕ್ ರ್ಯಾಲಿ (Bike Rally) ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಈ ಮೂಲಕ ಕುಮಾರ್ ಬಂಗಾರಪ್ಪಗೆ ಟಿಕೆಟ್ ನೀಡದಂತೆ ಸಂದೇಶ ರವಾನಿಸಿದರು.

ಇದನ್ನೂ ಓದಿ: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಸಿಟಿ ರವಿ: ಪಾದಯಾತ್ರೆಯಲ್ಲಿ ಘೋಷಣೆ

ಹೌದು…ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿಯಲ್ಲಿ ಇಂದು(ಮಾರ್ಚ್ 26) ಸೊರಬದ ಮೂಲಕ ಬಿಜೆಪಿಗರು ಹಾಗೂ ಆರ್​ಎಸ್​ಎಸ್​ ಮುಖಂಡರು ಬೃಹತ್ ಬೈಕ್ ರ್ಯಾಲಿ ಮಾಡಿದರು. ಆನವಟ್ಟಿಯ ಕೋಟಿಪುರ ವೃತ್ತದಿಂದ ಆನವಟ್ಟಿಯ ವರೆಗೂ ಬೈಕ್ ರ್ಯಾಲಿ ಮಾಡಿ ಶಾಸಕ ಕುಮಾರ್ ಬಂಗಾರಪ್ಪ ವಿರುದ್ಧ ಘೋಷಣೆ ಕೂಗಿದರು. ನಮೋ ವೇದಿಕೆಯಿಂದ ನಡೆದ ಬೈಕ್ ರ್ಯಾಲಿಯಲ್ಲಿ ಭಾಗಿಯಾದ ಸಾವಿರಾರು ಕಾರ್ಯಕರ್ತರು.

ಬಳಿಕ ನಮೋ ವೇದಿಕೆ ಕಾರ್ಯಕರ್ತರು ಬಹಿರಂಗ ಸಭೆ ನಡೆಸಿ ಕುಮಾರ್ ಬಂಗಾರಪ್ಪಗೆ ಬಿಜೆಪಿ ಟಿಕೆಟ್ ನೀಡದಂತೆ ಆಗ್ರಹಿಸಿದರು. ಈ ವೇಳೆ ಬಿಜೆಪಿ ಹಿರಿಯ ಮುಖಂಡ ಪದ್ಮನಾಭ ಭಟ್ ಹಾಗೂ ಸೊರಬ ನಮೋ ವೇದಿಕೆಯ ಪಾಣಿ ರಾಜಪ್ಪ ಅವರು ಕುಮಾರ್ ಬಂಗಾರಪ್ಪ ವಿರುದ್ಧ ಬಹಿರಂಗ ಅಸಮಾಧಾನ ಹೊರಹಾಕಿದರು.

ಕುಮಾರ್ ಬಂಗಾರಪ್ಪ ವಿರುದ್ಧ ಸ್ವಪಕ್ಷದ ಮುಖಂಡರು ಅಸಮಾಧಾನ ವ್ಯಕ್ತಪಡಿಸುತ್ತಿರವುದು ಇದು ಮೊದಲಲ್ಲ. ಮೊದಲಿನಿಂದಲೂ ಸೊರಬ ಬಿಜೆಪಿಯಲ್ಲಿ ಮೂಲ ಮತ್ತು ವಲಸಿಗರ ನಡುವೆ ಭಿನ್ನಮತ ಇದೆ. ಕುಮಾರ್ ಬಂಗಾರಪ್ಪ ವಿರುದ್ಧ ನಮೋ ಸೊರಬ ವೇದಿಕೆ ಸ್ಥಾಪನೆಗೊಂಡಿದ್ದು, ಬಿಜೆಪಿ ಬಣ ಸಂಘರ್ಷ ಮತ್ತಷ್ಟು ತಾರಕ್ಕೇರಿದೆ. ನರೇಂದ್ರ ಮೋದಿ ಜನ್ಮದಿನದಂದೇ ಸೊರಬ ಬಿಜೆಪಿಯಲ್ಲಿನ ಭಿನಮ್ಮತ ಬಹಿರಂಗವಾಗಿತ್ತು. ಅಲ್ಲದೇ ಕುಮಾರ್ ಬಂಗಾರಪ್ಪ ಬಣ ಮತ್ತು ಮೂಲ ಬಿಜೆಪಿಗರಿಂದ ಪರಸ್ಪರ ಟೀಕೆ, ಸುದ್ದಿಗೋಷ್ಠಿಯಲ್ಲಿ ವಿವಾದಾತ್ಮಕ ಹೇಳಿಕೆಗಳಿಂದ ಪೊಲೀಸ್​ ಠಾಣೆ ಮೆಟ್ಟಿಲು ಸಹ ಏರಿದ್ದರು.

ಶಾಸಕ ಕುಮಾರ್ ಬಂಗಾರಪ್ಪ ಆಯ್ಕೆಯಾಗಿನಿಂದಲೂ ಅವರ ವಿರುದ್ಧ ಅದೇ ಪಕ್ಷದ ಮುಖಂಡರು, ಕಾರ್ಯಕರ್ತರು ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ. ಕುಮಾರ್ ಬಂಗಾರಪ್ಪ ನಡೆಯ ವಿರುದ್ಧ ಮೂಲ ವಲಸಿಗ ಸಂಘರ್ಷ ನಡೆಯುತ್ತಲೇ ಇದೆ. ಈ ಎರಡು ಬಣಗಳ ನಡುವಿನ ಗುದ್ದಾಟ ಈಗ ಮತ್ತಷ್ಟು ಹೆಚ್ಚಾಗಿದೆ. ಚುನಾವಣೆ ಹೊಸ್ತಿಲಲ್ಲೇ ಬಣ ರಾಜಕೀಯದಿಂದ ಹಿರಿಯ ನಾಯಕರಿಗೆ ದೊಡ್ಡ ತಲೆನೋವಾಗಿದೆ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!