ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ: ಅಚ್ಚರಿಯ ಕಾರಣ ನೀಡಿದ ಮಾಜಿ ಶಾಸಕಿ

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಅವರು ಸಂಪುಟದಲ್ಲಿ ಮಹಿಳಾ ಸಚಿವರಿಗೆ ಸ್ಥಾನಮಾನವಿಲ್ಲದ ಕಾರಣ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷರಿಗೆ ಆಗಸ್ಟ್ 20ರಂದು ಪತ್ರ ಬರೆದಿದ್ದ ಈ ನಿರ್ಧಾರ ಈಗ ಬಹಿರಂಗವಾಗಿದೆ. ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪಕ್ಷಕ್ಕೆ ನಿಷ್ಠರಾಗಿ ಮುಂದುವರಿಯುವುದಾಗಿ ಸ್ಪಷ್ಟಪಡಿಸಿದ್ದು, ಭವಿಷ್ಯದ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಶ್ರಮಿಸುವುದಾಗಿ ತಿಳಿಸಿದ್ದಾರೆ.

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ: ಅಚ್ಚರಿಯ ಕಾರಣ ನೀಡಿದ ಮಾಜಿ ಶಾಸಕಿ
ಸೌಮ್ಯಾ ರೆಡ್ಡಿ
Image Credit source: social Media
Edited By:

Updated on: Oct 17, 2026 | 4:50 PM

ಬೆಂಗಳೂರು, ಅ.17: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯದ ಸಚಿವ ಸಂಪುಟದಲ್ಲಿ ಒಬ್ಬರೂ ಮಹಿಳಾ ಸಚಿವರೇ ಇಲ್ಲದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಅವರು ಎಐಸಿಸಿ ಅಧ್ಯಕ್ಷರಿಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನಮಾನ ನೀಡಿಲ್ಲ ಎಂಬ ಅಸಮಾಧನ ಈ ಮೊದಲ್ಲೇ ಕಾಂಗ್ರೆಸ್​​ನಲ್ಲಿ ಇತ್ತು. ಅದರೂ ಕಾಂಗ್ರೆಸ್​ ಹೈಕಮಾಂಡ್​ ಈ ಬಗ್ಗೆ ಯಾವುದೇ ಕ್ರಮವನ್ನು ತೆಗೆದುಕೊಂಡಿರಲಿಲ್ಲ. ಕರ್ನಾಟಕ ಕಾಂಗ್ರೆಸ್ ಪಕ್ಷದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಕೂಡ ಇದಕ್ಕೆ ನಾನೇ ಕಾರಣ ಎಂಬ ಅಚ್ಚರಿಯ ಹೇಳಿಕೆಯನ್ನು ಕೂಡ ನೀಡಿದ್ದರು. ಈ ಎಲ್ಲ ಗದ್ದಲದ ನಂತರ ಖಂಡಿತ ಮಹಿಳೆಯರಿಗೆ ಸಚಿವ ಸ್ಥಾನ ನೀಡುತ್ತೇವೆ ಎಂಬ ಭರವಸೆಯನ್ನು ಹೈಕಮಾಂಡ್​​​ ನೀಡಿದರು. ಆದರೆ ಇಲ್ಲಿಯವರೆಗೂ ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶ ಸಿಕ್ಕಿಲ್ಲ. ಇದೀಗ ಇದರಿಂದ ಅಸಮಾಧನಗೊಂಡು ಸೌಮ್ಯಾ ರೆಡ್ಡಿ ಅವರು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇವರ ಈ ನಿರ್ಧಾರದಿಂದ ಕಾಂಗ್ರೆಸ್​​ ಪಾಳಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಸೌಮ್ಯಾ ರೆಡ್ಡಿ ಅವರು 2026ರ ಆಗಸ್ಟ್ 20ರಂದೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಕಳುಹಿಸಿಕೊಟ್ಟಿದ್ದರು ಎಂಬುದು ಈಗ ಬಹಿರಂಗವಾಗಿದೆ. ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಸ್ಥಾನಮಾನ ಹಾಗೂ ಸಚಿವ ಸ್ಥಾನ ಸಿಗದಿರುವ ಬಗ್ಗೆ ಪತ್ರದಲ್ಲಿ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಮಹಿಳಾ ಸಚಿವರ ನೇಮಕ ಮಾಡುವಂತೆ ಕಾಂಗ್ರೆಸ್ ಹೈಕಮಾಂಡ್ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ವೈರಲ್ ವಿಡಿಯೋ ಮೂಲ ಪತ್ತೆಗೆ ಮುಂದಾದ ಸೈಬರ್ ಪೊಲೀಸರು: ಮೂರು ಆಯಾಮಗಳಲ್ಲಿ ಸಿದ್ದರಾಮಯ್ಯ ದೂರಿನ ತನಿಖೆ ಶುರು

ಪಕ್ಷದ ಹಿತದೃಷ್ಟಿಯಿಂದ, ಕೆಪಿಸಿಸಿ ಮಹಿಳಾ ಘಟಕಕ್ಕೆ ಹೊಸ ಅಧ್ಯಕ್ಷರನ್ನು ನೇಮಕ ಮಾಡುವವರೆಗೆ ತಾವೇ ಆ ಸ್ಥಾನದಲ್ಲಿ ಮುಂದುವರಿಯುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಹುದ್ದೆ ತೊರೆದರೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತೆಯಾಗಿ ಮುಂದುವರಿಯುವುದಾಗಿ ತಿಳಿಸಿರುವ ಅವರು, ಮುಂಬರುವ 2028ರ ವಿಧಾನಸಭೆ ಹಾಗೂ 2029ರ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More
Loading...
Unable to load recommendations.
Follow Us