ಮಾಜಿ ಸಿಎಂ ಸದಾನಂದ ಗೌಡಗೆ ಕಾಂಗ್ರೆಸ್ ಆಹ್ವಾನ: ಅಚ್ಚರಿಯ ಹೇಳಿಕೆ ನೀಡಿದ ಡಿಕೆ ಶಿವಕುಮಾರ್

ಮಾಜಿ ಸಿಎಂ ಸದಾನಂದ ಗೌಡ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂದು ಈ ಹಿಂದೆಯೂ ಹಲವು ಬಾರಿ ಊಹಾಪೋಹಗಳು ಹರಿದಾಡಿದ್ದವು. ಇದೀಗ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂಬ ವದಂತಿಗಳ ಬೆನ್ನಲ್ಲೇ ಮತ್ತೆ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಗುಸುಗುಸು ಕೇಳಿಬರುತ್ತಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು? ಇಲ್ಲಿದೆ ನೋಡಿ.

ಮಾಜಿ ಸಿಎಂ ಸದಾನಂದ ಗೌಡಗೆ ಕಾಂಗ್ರೆಸ್ ಆಹ್ವಾನ: ಅಚ್ಚರಿಯ ಹೇಳಿಕೆ ನೀಡಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ & ಡಿವಿ ಸದಾನಂದ ಗೌಡ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: Ganapathi Sharma

Updated on: Mar 13, 2024 | 11:15 AM

ಬೆಂಗಳೂರು, ಮಾರ್ಚ್​ 13: ಮಾಜಿ ಸಿಎಂ ಡಿವಿ ಸದಾನಂದ ಗೌಡ (DV Sadananda Gowda) ಅವರಿಗೆ ಒಂದೆಡೆ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ (Lok Sabha Elections) ಟಿಕೆಟ್ ದೊರೆಯುತ್ತದೆಯೇ ಎಂಬ ಅನುಮಾನ ಸೃಷ್ಟಿಯಾಗಿದೆ. ಈ ಮಧ್ಯೆ, ಅವರು ಕಾಂಗ್ರೆಸ್ (Congress) ಸೇರುವ ಸಾಧ್ಯತೆಗಳೂ ಇವೆ ಎಂಬ ವದಂತಿಯೂ ಇದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಸದಾನಂದ ಗೌಡ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸೇರುವ ವಿಚಾರವಾಗಿ ಬಹಳಷ್ಟು ಜನ ನಮ್ಮನ್ನು ಬೇಟಿಯಾಗಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಅನೇಕ ಜನ ಪಕ್ಷ ಸೇರ್ಪಡೆ ವಿಚಾರವಾಗಿ ನಮ್ಮನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಿನ್ನೆ ಜಯಪ್ರಕಾಶ್ ಹೆಗ್ಡೆ, ಎಂಪಿಕೆ ನಮ್ಮ ಪಕ್ಷ ಸೇರಿದ್ದಾರೆ. ಇನ್ನೂ ಬಹಳ ಜನ ಪಕ್ಷಕ್ಕೆ ಬರುವವರಿದ್ದಾರೆ. ಅದರಲ್ಲಿ ಹಾಲಿ ಬಿಜೆಪಿ ಎಂಪಿಗಳು ಕೂಡ ಇದ್ದಾರೆ. ಈಗ ಅವರ ಹೆಸರು ಬಹಿರಂಗ ಪಡಿಸುವುದಿಲ್ಲ ಎಂದು  ಹೇಳಿದ್ದಾರೆ.

ಸದಾನಂದ ಗೌಡರನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸಿದ್ದೀರಾ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ಅವರು ಪಕ್ಷಕ್ಕೆ ಬಂದರೆ ಸ್ವಾಗತ ಎಂದು ಹೇಳಿದ್ದಾರೆ.

ಕಾಂಗ್ರೆಸ್​ ಅಭ್ಯರ್ಥಿಗಳ ಎರಡನೇ ಪಟ್ಟಿ 15 ಕ್ಕೆ ಬಿಡುಗಡೆಯಾಗಲಿದೆ. ದೆಹಲಿಯಲ್ಲಿ ಚುನಾವಣಾ ಸಮಿತಿ ಸಭೆಯ ಬಳಿಕ ಪಟ್ಟಿ ಬಿಡುಗಡೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ ವೇಳೆ ಬಿಜೆಪಿ ಟಿಕೆಟ್ ಸಿಗದಿದ್ದರೆ ಸದಾನಂದ ಗೌಡ ಕಾಂಗ್ರೆಸ್​ ಪಕ್ಷ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಕಳೆದ ವರ್ಷದ ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಊಹೋಪೋಹಗಳು ಹರಿದಾಡಿದ್ದವು. ವಿಧಾನಸಭೆ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕ್ಷೇತ್ರಕ್ಕೆ ಅಭ್ಯರ್ಥಿ ಹಾಕುವಲ್ಲಿ ಡಿಕೆ ಶಿವಕುಮಾರ್ ಮೇಲೆ ಸದಾನಂದ ಗೌಡ ಪ್ರಭಾವ ಬೀರಿದ್ದರು ಎಂಬ ಆರೋಪವೂ ಇತ್ತು. ಇದೇ ಕಾರಣಕ್ಕೆ ಅಲ್ಲಿ ಬಿಜೆಪಿಯಿಂದ ದುರ್ಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ ಎಂಬ ಟೀಕೆಗಳು ಕೇಳಿಬಂದಿದ್ದವು.

ಇದನ್ನೂ ಓದಿ: ಬೆಂಗಳೂರು ಉತ್ತರದಿಂದ ಸದಾನಂದ ಗೌಡ ಟಿಕೆಟ್ ಬೇಡಿಕೆಗೆ ಬಿಜೆಪಿ ವರಿಷ್ಠರು ಕೇಳಿದ ಪ್ರಶ್ನೆ ಹೀಗಿದೆ ನೋಡಿ!

ಇದೀಗ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಮತ್ತೆ ಸದಾನಂದ ಗೌಡ ಕುರಿತ ವದಂತಿ ಹರಿದಾಡುತ್ತಿದೆ. ಈ ಮಧ್ಯೆ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಪಕ್ಷದ ನಾಯಕರೇ ನನ್ನ ಮೇಲೆ ಒತ್ತಡ ಹಾಕಿದ್ದಾರೆ. ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ್ದ ನಾನು ನಾಯಕರ ಒತ್ತಡದಿಂದ ಆ ತೀರ್ಮಾನ ವಾಪಸ್ ಮಾಡಿದ್ದೆ. ಇದೀಗ ಟಿಕೆಟ್ ನೀಡದಿದ್ದರೆ ನೋವಾಗುತ್ತದೆ. ವೈಯಕ್ತಿಕ ವರ್ಚಸ್ಸಿಗೆ ಧಕ್ಕೆಯಾಗುತ್ತದೆ ಎಂದು ಸದಾನಂದ ಗೌಡ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್