AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿವೇಶನಕ್ಕೆ ಗೈರು: ರಮೇಶ್ ಜಾರಕಿಹೊಳಿ, ಈಶ್ವರಪ್ಪಗೆ ಸ್ಪೀಕರ್ ಶಾಕ್!

ಮಾಜಿ ಸಚಿವರು, ಬಿಜೆಪಿ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಕೆ.ಎಸ್. ಈಶ್ವರಪ್ಪ ಅವರಿಗೆ ಸ್ಪೀಕರ್ ಶಾಕ್ ಕೊಟ್ಟಿದ್ದಾರೆ.

ಅಧಿವೇಶನಕ್ಕೆ ಗೈರು: ರಮೇಶ್ ಜಾರಕಿಹೊಳಿ, ಈಶ್ವರಪ್ಪಗೆ ಸ್ಪೀಕರ್ ಶಾಕ್!
Eshwarappa And Ramesh Jarkiholi
TV9 Web
| Edited By: |

Updated on:Oct 14, 2022 | 8:22 PM

Share

ಬೆಂಗಳೂರು: ಬಿಜೆಪಿ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಕೆ.ಎಸ್​.ಈಶ್ವರಪ್ಪ ಅವರು ಸಚಿವ ಸ್ಥಾನ ಸಿಗದಿದ್ದಕ್ಕೆ ಅಧಿವೇಶನಕ್ಕೆ ಗೈರಾಗುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಇದರ ಮಧ್ಯೆ ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿಗೆ ಸ್ಪೀಕರ್ ಶಾಕ್ ಕೊಟ್ಟಿದ್ದಾರೆ.

ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪತ್ರ ಬರೆಯುವ ಮೂಲಕ ವಿಧಾನಸಭಾ ಅಧಿವೇಶನಕ್ಕೆ ಗೈರಾಗಿರುವುದನ್ನು ಪ್ರಶ್ನಿಸಿದ್ದಾರೆ.

ಜಾರಕಿಹೊಳಿ ಬುಟ್ಟಿಗೆ ಕೈ ಹಾಕಿದ ಎಚ್​ಡಿಕೆ, ಮತ್ತೆ ರಾಜಕೀಯ ಧೃವೀಕರಣಕ್ಕೆ ಸಾಕ್ಷಿಯಾಗತ್ತಾ ರಾಜ್ಯ ರಾಜಕಾರಣ?

ವಿಧಾನಸಭೆ ಅಧಿವೇಶನ ಶಾಸಕರ ಸಾಂವಿಧಾನಿಕ‌ ಹಕ್ಕು. ನೀವು ಸದನಕ್ಕೆ ಬಾರದೇ ಇದ್ದಿದ್ದು ನಮಗೆ ಅಸಂವಿಧಾನಿಕ ಸಾರ್ವಜನಿಕವಾಗಿ ಸದನಕ್ಕೆ ಹಾಜರಾಗಲ್ಲ ಎಂಬುದು ಸಹ ಒಪ್ಪಿತವಲ್ಲ. ಮುಂದಿನ ದಿನಗಳಲ್ಲಿ ಸದನಕ್ಕೆ ಗೈರಾಗಲ್ಲ ಎಂದು ಭಾವಿಸುತ್ತೇನೆ. ಸಾಂವಿಧಾನಿಕವಾಗಿ ನಡೆದುಕೊಳ್ಳಬೇಕಿರುವುದು ನಮ್ಮ ಕರ್ತವ್ಯ ಎಂದು ಈಶ್ವರಪ್ಪ, ರಮೇಶ್​ ಜಾರಕಿಹೊಳಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮಳೆಗಾಲದ ಅಧಿವೇಶನಕ್ಕೆ ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿ ಅವರು ಗೈರಾಗಿದ್ದರು. ಇದರೊಂದಿಗೆ ಈ ಇಬ್ಬರು ನಾಯಕರು ಬೊಮ್ಮಾಯಿ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ. ರಮೇಶ್ ಜಾರಕಿಹೊಳಿ ಅವರದ್ದು ಇದೇನಿದು ಮೊದಲಲ್ಲ. ಈ ಹಿಂದೆ ಕಾಂಗ್ರೆಸ್​ನಲ್ಲಿದ್ದಾಗಲೂ ಸರಿಯಾಗಿ ಅಧಿವೇಶನ ಹಾಗೂ ಸಚಿವ ಸಂಪುಟಕ್ಕೆ ಗೈರಾಗಿರುವ ಸಾಕಷ್ಟು ಉದಾಹರಣೆಗಳು ಇವೆ.

ಇನ್ನು ಈಶ್ವರಪ್ಪ ಸಚಿವರಾಗಿದ್ದಾಗ ಪ್ರತಿ ಅಧಿವೇಶನದಲ್ಲೂವಿಪಕ್ಷಗಳ ವಿರುದ್ಧ ಮುಗಿಬಿದ್ದು, ಸರ್ಕಾರದ ಪರ ಮಾತನಾಡುತ್ತಿದ್ದರು. ಆದರೆ ಈಶ್ವರಪ್ಪ ಈ ಬಾರಿ ಅಧಿವೇಶನಕ್ಕೆ ಒಂದು ವಾರದಿಂದ ಗೈರಾಗುವ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

ತಮ್ಮ ಹುದ್ದೆಗೋಸ್ಕರ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತದೇ ಗೈರಾಗಿರುವುದು ವಿಪರ್ಯಾಸವೇ ಸರಿ.

Published On - 8:22 pm, Fri, 14 October 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ