ಎಸ್​ಆರ್ ಪಾಟೀಲ್​ಗೆ ತಪ್ಪಿದ ಪರಿಷತ್ ಚುನಾವಣೆ ಟಿಕೆಟ್; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

| Updated By: ganapathi bhat

Updated on: Nov 22, 2021 | 9:18 PM

ಎಸ್.ಆರ್. ಪಾಟೀಲ್​ಗೆ ಟಿಕೆಟ್ ಕೊಡಿಸಿ ಎಂದು ಕಾರ್ಯಕರ್ತರು ಒತ್ತಾಯ ಮಾಡಿದ್ದಾರೆ. ಇಲ್ಲದಿದ್ದರೆ ನಾವು ಸಾಮೂಹಿಕವಾಗಿ ರಾಜೀನಾಮೆ ನೀಡುತ್ತೇವೆ ಎಂದು ಹೆಚ್.ವೈ. ಮೇಟಿ ಎದುರು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ಎಸ್​ಆರ್ ಪಾಟೀಲ್​ಗೆ ತಪ್ಪಿದ ಪರಿಷತ್ ಚುನಾವಣೆ ಟಿಕೆಟ್; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಎಸ್​ಆರ್ ಪಾಟೀಲ್
Follow us on

ಬಾಗಲಕೋಟೆ: ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ ಚುನಾವಣೆ ಟಿಕೆಟ್ ಎಸ್.ಆರ್. ಪಾಟೀಲ್​ಗೆ ಕೈತಪ್ಪಿದೆ. ಈ ಕಾರಣದಿಂದ ಬೀಳಗಿ ತಾಲೂಕು ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ ವ್ಯಕ್ತವಾಗಿದೆ. ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಬಾಡಗಂಡಿ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಮಾಜಿ ಸಚಿವ ಹೆಚ್.ವೈ. ಮೇಟಿ ಭೇಟಿ ನೀಡಿದ್ದಾರೆ. ಪ್ರತಿಭಟನೆ ಮಾಡಬೇಡಿ ಎಂದ ಹೆಚ್.ವೈ. ಮೇಟಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಎಸ್.ಆರ್. ಪಾಟೀಲ್​ಗೆ ಟಿಕೆಟ್ ಕೊಡಿಸಿ ಎಂದು ಕಾರ್ಯಕರ್ತರು ಒತ್ತಾಯ ಮಾಡಿದ್ದಾರೆ. ಇಲ್ಲದಿದ್ದರೆ ನಾವು ಸಾಮೂಹಿಕವಾಗಿ ರಾಜೀನಾಮೆ ನೀಡುತ್ತೇವೆ ಎಂದು ಹೆಚ್.ವೈ. ಮೇಟಿ ಎದುರು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಪಕ್ಷದ ವರಿಷ್ಠರ ವಿರುದ್ಧ ಎಸ್​ಆರ್​ಪಿ ಬೆಂಬಲಿಗರ ಆಕ್ರೋಶ ಕೇಳಿಬಂದಿದೆ. ಕಾಂಗ್ರೆಸ್​ ಪಕ್ಷದ ಹೈಕಮಾಂಡ್​ ನಿರ್ಧಾರ ಖಂಡಿಸಿ ಘೋಷಣೆ ಕೂಗಲಾಗಿದೆ.

ಸದಸ್ಯರು, ಪಟ್ಟಣ ಪಂಚಾಯತ್ ಸದಸ್ಯರಿಂದ ರಾಜೀನಾಮೆ ಬೆದರಿಕೆ ಕೇಳಿಬಂದಿದೆ. ಎಸ್.ಆರ್.ಪಾಟೀಲ್ ಒಡೆತನದ ಶಿಕ್ಷಣ ಸಂಸ್ಥೆಯಲ್ಲಿ ಸಭೆ ನಡೆಸಲಾಗಿದೆ. ಎಸ್.ಆರ್. ಪಾಟೀಲ್ ಬೆಂಬಲಿಗರು, ‘ಕೈ’ ಮುಖಂಡರ ಸಭೆ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಬಾಡಗಂಡಿ ಗ್ರಾಮದಲ್ಲಿರುವ ಬಾಪೂಜಿ ಶಿಕ್ಷಣ ಸಂಸ್ಥೆಯಲ್ಲಿ ಸಭೆ ಮಾಡಲಾಗಿದೆ. 4 ಬಾರಿ ಎಂಎಲ್​ಸಿಯಾಗಿ, ಪರಿಷತ್ ವಿಪಕ್ಷ ನಾಯಕರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಎಸ್.ಆರ್. ಪಾಟೀಲ್​ಗೆ ಪರಿಷತ್​ನ​ ವಿಪಕ್ಷ ನಾಯಕರಾಗಿದ್ದರೂ ಟಿಕೆಟ್​ ಕೈತಪ್ಪಿದೆ. ಹೀಗಾಗಿ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದಾರೆ.

ಈ ಮಧ್ಯೆ, ಸಕ್ರಿಯ ಕಾರ್ಯಕರ್ತರಿಗೆ ಕಾಂಗ್ರೆಸ್​ ಟಿಕೆಟ್ ನೀಡಿದ್ದೇವೆ. ಕಳೆದ ಬಾರಿಗಿಂತ ಈ ಬಾರಿ ನಮ್ಮ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್​ ಪಕ್ಷದ ಹೊರಗಿನವರಿಗೆ ಟಿಕೆಟ್ ನೀಡಿಕೆ ವಿಚಾರವಾಗಿ ಅವರು ಪ್ರತಿಕ್ರಿಯಿಸಿದ್ದಾರೆ. ಸ್ಥಳೀಯ ನಾಯಕರು ಹೇಳಿದಂತೆ ನಾವು ಕೇಳಬೇಕಾಗುತ್ತದೆ. ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ನಾವು ನೋಡಿದ್ದೇವೆ. ಹೀಗಾಗಿ ಇದು ಅನಿವಾರ್ಯ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಎಸ್.ಆರ್. ಪಾಟೀಲ್​​ರನ್ನು ನಾವು ಕೈಬಿಡುವ ಪ್ರಶ್ನೆ ಇಲ್ಲ. ಎಸ್.ಆರ್. ಪಾಟೀಲ್​ರಿಗೆ ಸೂಕ್ತ ಸ್ಥಾನಮಾನ ನೀಡುತ್ತೇವೆ. ಈ ವಿಚಾರವಾಗಿ ಬೇರೆ ರೀತಿ ತಂತ್ರಗಾರಿಕೆ ನಡೆಯುತ್ತಿದೆ. ಕೆ.ಸಿ. ಕೊಂಡಯ್ಯ ವಿಚಾರದಲ್ಲಿ ಶಾಸಕರಿಂದ ಅಭಿಪ್ರಾಯ ಪಡೆಯಲಾಗಿದೆ. ಆದರೆ ಹೈಕಮಾಂಡ್ ಹೇಳಿದ್ದನ್ನು ನಾವು ಕೇಳಲೇಬೇಕು ಎಂದು ಬೆಂಗಳೂರಲ್ಲಿ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Karnataka Congress: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಇದನ್ನೂ ಓದಿ: ಕಾಂಗ್ರೆಸ್ ಸಾಗರದಷ್ಟು ಬೆಳೆದಿದ್ದರೂ ಯಾರಿಗೂ ಉಪಯೋಗವಿಲ್ಲ: ಬಿಎಸ್ ಯಡಿಯೂರಪ್ಪ