ಗಣಪತಿ ಕೂರಿಸುವ ವಿಚಾರದಲ್ಲಿ ಮುಸ್ಲಿಮರ ಜೊತೆ ಕೈಜೋಡಿಸಿದ ಬಿಜೆಪಿ: ಪ್ರಮೋದ್ ಮುತಾಲಿಕ್ ವಾಗ್ದಾಳಿ

ವಿವಾದಿತ ಚಾಮರಾಜಪೇಟೆ ಮೈದಾನದಲ್ಲಿ ಗಣಪತಿ ಕೂರಿಸಲು ಅಂದಿನ ಬಿಜೆಪಿ ಸರ್ಕಾರ ಅವಕಾಶ ನೀಡಿರಲಿಲ್ಲ. ಈ ಬಗ್ಗೆ ಇಂದು ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ ಪ್ರಮೋದ್ ಮುತಾಲಿಕ್, ಬಿಜೆಪಿ ಮುಸ್ಲಿಮರ ಜೊತೆ ಕೈಜೋಡಿಸಿತ್ತು ಎಂದು ಆರೋಪಿಸಿದ್ದಾರೆ.

ಗಣಪತಿ ಕೂರಿಸುವ ವಿಚಾರದಲ್ಲಿ ಮುಸ್ಲಿಮರ ಜೊತೆ ಕೈಜೋಡಿಸಿದ ಬಿಜೆಪಿ: ಪ್ರಮೋದ್ ಮುತಾಲಿಕ್ ವಾಗ್ದಾಳಿ
ಪ್ರಮೋದ್ ಮುತಾಲಿಕ್ ಮತ್ತು ಬಸವರಾಜ ಬೊಮ್ಮಾಯಿ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: Rakesh Nayak Manchi

Updated on: Jul 30, 2023 | 3:39 PM

ಹಾವೇರಿ, ಜುಲೈ 30: ಚಾಮರಾಜಪೇಟೆ ಮೈದಾನದಲ್ಲಿ ಗಣಪತಿ ಕೂರಿಸುವ ವಿಚಾರದಲ್ಲಿ ಬಿಜೆಪಿ (BJP) ಮುಸ್ಲಿಮರ ಜೊತೆ ಕೈ ಜೋಡಿಸಿದ್ದರು ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ಆರೋಪಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರೇ ನೇಮಿಸಿದ ವಕ್ಫ್ ಬೋರ್ಡ್​ ಅಧ್ಯಕ್ಷ ಶಫಿ ಸಹದಿ ಗಣಪತಿ ಕೂಸಿಲು ಅವಕಾಶ ನೀಡಬಾರದೆಂದು ಕೋರ್ಟ್​​ಗೆ ಹೋಗಿದ್ದರು. ಇವನಿಗೆ ಆಧಾರವಾಗಿ ನಿಂತಿದ್ದು ಸಚಿವ ಜಮೀರ್ ಅಹ್ಮದ್ ಖಾನ್ ಎಂಬ ಮತಾಂಧ, ದೇಶದ್ರೋಹಿ ಎಂದು ವಾಗ್ದಾಳಿ ನಡೆಸಿದರು.

ಅಲ್ಲದೆ, ಮೈದಾನದಲ್ಲಿ ಒಂದು ಗಣಪತಿ ಕೂರಿಸಲು ಬಿಡಲಿಲ್ಲ. ಅದಕ್ಕೆ ಬಿಜೆಪಿಯವರೇ ಮುಸ್ಲಿಮರ ಜೊತೆ ಕೈ ಜೋಡಿಸಿದ್ದರು. ನ್ಯಾಯಾಲಯ ಕೂಡಾ ಸ್ಟೇ ಕೊಟ್ಟಿತ್ತು. ಕೋರ್ಟ್ ಒಂದು ಕಡೆ ನಿಮ್ಮದೇ ಜಾಗ ಎಂದು ಹೇಳಿತು, ಇನ್ನೊಂದು ಕಡೆ ಸ್ಟೇ ಕೊಟ್ಟಿತು. ಇದೇ ಕಾರಣಕ್ಕೆ ಬಿಜೆಪಿಯವರು ಚುನಾವಣೆಯಲ್ಲಿ ಮಣ್ಣು ತಿಂದರು ಎಂದರು.

ಇದನ್ನೂ ಓದಿ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಪ್ರಮುಖ ಹುದ್ದೆಗಳಲ್ಲಿ ಮಹತ್ವದ ಬದಲಾವಣೆ, ಯಾರಿಗೆ? ಯಾವ ಸ್ಥಾನ?

ಚಾಮರಾಜಪೇಟೆ ಮೈದಾನದಲ್ಲಿ ರಾಷ್ಟ್ರದ ಧ್ವಜನೇ ಹಾರಲಿಲ್ಲ. ಇದಕ್ಕೆ ಕಠೀಣ ಕ್ರಮ ತೆಗೆದುಕೊಳ್ಳುತ್ತೇವೆ ಅಂತ ಬಿಜೆಪಿಯವರು ಹೇಳಿ ಏನೂ ಮಾಡಲಿಲ್ಲ. ನಮಗೆ ಕಾಂಗ್ರೆಸ್​, ಜೆಡಿಎಸ್​ನವರ ಮೇಲೆ ಬೇಸರ ಆಗಲಿಲ್ಲ. ಕೇಸರಿ ಹಾಕಿಕೊಂಡು ಹಿಂದುತ್ವದ ಮೇಲೆ ಅಧಿಕಾರಕ್ಕೆ ಬಂದರವ ಮೇಲೆ ನಮಗೆ ಬೇಸರ ಆಯ್ತು. ಅಲ್ಲಿ ಧ್ವಜ ಹಾರಿಸಿದ್ದು ಬಿಜೆಪಿಯವರಲ್ಲ, ನಾವು ಎಂದರು.

ಮೊನ್ನೆ ಸಚಿವ ಜಮೀರ್ ಮುಖ್ಯಮಂತ್ರಿ ಜೊತೆ ಹೋಗಿ ನಮಾಜ್ ಮಾಡಿದರು. ಆದರೆ ಬಿಜೆಪಿ ಅವಧಿಯಲ್ಲಿ ಶಿಗ್ಗಾವಿ ಕ್ಷೇತ್ರದಲ್ಲಿ ಶೇಕಡಾ 30 ರಷ್ಟು ಮುಸ್ಲಿಮರಿದ್ದಾರೆ ಅಂತ ಆಗಿನ ಮುಖ್ಯಮಂತ್ರಿ ಅಲ್ಲಿಗೆ ಹೋಗಲೇ ಇಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ವಿರುದ್ಧ ಮುತಾಲಿಕ್ ವಾಗ್ದಾಳಿ ನಡೆಸಿದರು.

ಈ ಕರ್ನಾಟಕದ ಬಿಜೆಪಿ ನಾಯಕರ ಬಗ್ಗೆ ಚರ್ಚೆನೇ ಬೇಡ. ದೇಶ ಉಳಿಸಬೇಕಿದೆ. ನರೇಂದ್ರ ಮೋದಿ ಅವರನ್ನು ಗೆಲ್ಲಿಸಿ ದೇಶ ಉಳಿಸಿ ಅಭಿಯಾನ ಆರಂಭ ಮಾಡುತ್ತಿದ್ದೇವೆ. ಈ ವರ್ಷ ಪೂರ್ತಿ ಮನೆ ಮನೆಗಳಲ್ಲಿ ಮೋದಿ ಗೆಲ್ಲಿಸಿ ದೇಶ ಉಳಿಸಿ ಅಭಿಯಾನ ಮಾಡುತ್ತೇವೆ. ಗ್ಯಾರಂಟಿ ವಾರಂಟಿ ಮರೆಯಿರಿ, ದೇಶ ಉಳಿಸೋಣ ಬನ್ನಿ ಅಂತ ಕಾರ್ಯಕರ್ತರು ಜಾಗೃತಿ ಮೂಡಿಸಲಿದ್ದಾರೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್