ಕುಚುಕು ಗೆಳೆಯ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಬಗ್ಗೆ ಮೊದಲ ಪ್ರತಿಕ್ರಿಯೆಯಲ್ಲೇ ಅಚ್ಚರಿ ಮಾತುಗಳಾನ್ನಾಡಿದ ಶ್ರೀರಾಮುಲು!

ಕುಚುಕು ಗೆಳೆಯರಾಗಿರುವ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಅವರ ನಡುವೆ ಕೂಡ ಬಿರುಕುಂಟಾಗಿದೆ ಎನ್ನುವ ಗಾಳಿ ಸುದ್ದಿ ಕೂಡ ಎಲ್ಲೆಡೆ ಹರಡಿದೆ. ಇನ್ನು ಇದರ ಮಧ್ಯೆ ರೆಡ್ಡಿ ಹೊಸ ಪಕ್ಷ ಕಟ್ಟಿರುವ ಬಗ್ಗೆ ಶ್ರೀರಾಮುಲು ಹೇಳಿದ್ದಿಷ್ಟು..

ಕುಚುಕು ಗೆಳೆಯ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಬಗ್ಗೆ ಮೊದಲ ಪ್ರತಿಕ್ರಿಯೆಯಲ್ಲೇ ಅಚ್ಚರಿ ಮಾತುಗಳಾನ್ನಾಡಿದ ಶ್ರೀರಾಮುಲು!
ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Dec 25, 2022 | 3:26 PM

ಬಳ್ಳಾರಿ: ಬಿಜೆಪಿಯ ಬಗ್ಗೆ ಅಲ್ಲಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಮಾಜಿ ಸಚಿವ ಹಾಗೂ ಗಣಿ ಉದ್ಯಮಿ ಜಿ.ಜನಾರ್ದನ ರೆಡ್ಡಿ ((Janardhan Reddy)) ಹೊಸ ರಾಜಕೀಯ ಪಕ್ಷ ಘೋಷಿಸಿದ್ದಾರೆ. ನೂತನ ರಾಜಕೀಯ ಪಕ್ಷಕ್ಕೆ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ (kalyana rajya pragati party)ಎಂಬ ಹೆಸರು ಇರಿಸಲಾಗಿದೆ. ಇನ್ನು ಗೆಳೆಯನ ಹೊಸ ಪಕ್ಷಕ್ಕೆ ಕುಚುಕು ಸ್ನೇಹಿತ ಶ್ರೀರಾಮುಲು(Sriramulu) ಮೊದಲ ಪ್ರತಿಕ್ರಿಯೆ ನೀಡಿದ್ದು, ಅಚ್ಚರಿ ಮಾತುಗಳನ್ನಾಡಿದ್ದಾರೆ.

ಇದನ್ನೂ ಓದಿ: ಹೊಸ ಪಕ್ಷ ಸ್ಥಾಪನೆ ಜತೆಗೆ ತಾವು ಸ್ಪರ್ಧೆ ಮಾಡುವ ಕ್ಷೇತ್ರವನ್ನೂ ಘೋಷಿಸಿದ ಜನಾರ್ದನ ರೆಡ್ಡಿ

ಜನಾರ್ದನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿದ ಬಗ್ಗೆ ಬಳ್ಳಾರಿಯಲ್ಲಿ ಇಂದು(ಡಿಸೆಂಬರ್ 25) ಮೊದಲ ಪ್ರತಿಕ್ರಿಯೆ ಕೊಟ್ಟಿರುವ ಶ್ರೀರಾಮುಲು, ಜನಾರ್ದನ ರೆಡ್ಡಿ ಬುದ್ಧಿವಂತರು. ಎಲ್ಲವನ್ನೂ ತಿಳಿದವರು. ಅನುಭವ ಇದ್ದ ವ್ಯಕ್ತಿ ಇದ್ದಾರೆ. ನಾನ್ನ ಪ್ರಾಣ ಸ್ನೇಹಿತನಾಗಿ ಜನಾರ್ದನ ರೆಡ್ಡಿ ಬಿಜೆಪಿ‌ಗೆ ದೊಡ್ಡ ಶಕ್ತಿಯಾಗಿದ್ದರು. ಜನಾರ್ದನ ರೆಡ್ಡಿಗೂ ಕೂಡ ಪಕ್ಷವು ಶಕ್ತಿಯಾಗಿ ನಿಂತಿತ್ತು. ಅವರು ವೈಯಕ್ತಿಕವಾಗಿ‌ ಪಕ್ಷ ಮಾಡಿದ್ದಾರೆ. ಬಿಜೆಪಿ ಪಕ್ಷ ಅವರನ್ನು ಯಾವತ್ತು ಬಿಟ್ಟು ಕೊಟ್ಟಿಲ್ಲ. ಅವರು ಪಕ್ಷವನ್ನು ಯಾವತ್ತೂ ಬಿಟ್ಟು ಕೊಟ್ಟಿಲ್ಲ. ಹೊಸ ಪಕ್ಷ ಒಳೆಯದು, ಕೆಟ್ಟದು ಎಂದು ಅನಾಲಿಸಿಸ್ ಮಾಡುವುದಿಲ್ಲ. ಈ ಬಗ್ಗೆ ಡಿಬೆಟ್ ಮಾಡಲು ನನಗೆ ಇಷ್ಟವಿಲ್ಲ. ರೆಡ್ಡಿ ಒಳ್ಳೆಯದನ್ನೇ ಯೋಚನೆ ಮಾಡಿ ನಿರ್ಧಾರ ತೆಗೆದುಕೊಂಡಿರುತ್ತಾರೆ. ನಾನು ಪಕ್ಷದ ಶಿಸ್ತಿನ ಸಿಪಾಯಿ. ಕಾಲ ಬಂದಾಗ ಎಲ್ಲವುದಕ್ಕೂ ಉತ್ತರ ಕೊಡುತ್ತೇನೆ ಎಂದು ಅಚ್ಚರಿ ಮಾತುಗಳನ್ನಾಡಿದರು.

ಅವರೊಬ್ಬ ಅನುಭವ ಕಾಜಕಾರಣಿ, ಯೋಚನೆ ಮಾಡಿ ನಿರ್ಧಾರ ತೆಗೆದುಕೊಂಡಿದ್ದಾರೆ. ಈವರೆಗೆ ರೆಡ್ಡಿಯವರ ಜೊತೆಗೆ ಬಂಡೆಯಾಗಿ ನಿಂತಿದ್ದೆ ಪಕ್ಷದ ಮುಖಂಡರೊಂದಿಗೆ ಮಾತನಾಡಿದ್ದೇನೆ. ಈ ಸಂದರ್ಭದಲ್ಲಿ ಸಿದ್ಧಾಂತ ಬೇರೆ ಇದ್ದಾಗ ಹೇಗೆ ಮನವೊಲಿಸುವುದಕ್ಕೆ ಆಗುತ್ತೆ ಎಂದು ಪರೋಕ್ಷವಾಗಿ ಮನವೊಲಿಸೋ ಕೆಲಸ ಮುಗಿದಿದೆ ಎಂದರು.

ಇದನ್ನೂ ಓದಿ: ಹೊಸ ರಾಜಕೀಯ ಪಕ್ಷ ಘೋಷಿಸಿದ ಜನಾರ್ದನ ರೆಡ್ಡಿ

ಕಾರ್ಯಕರ್ತರು ಇಬ್ಭಾಗವಾಗ್ತಾರಾ ಎನ್ನುವ ಮಾಧ್ಯಮಗಳ ಪ್ರಶ್ನಿಗೆ ಪ್ರತಿಕ್ರಿಯಿಸಿದ ರಾಮುಲು, ಕಾರ್ಯಕರ್ತರು ನಮ್ಮ ಜೊತೆ ಇದ್ದಾರೆ.‌ ಇದರಲ್ಲಿ ಯಾವುದೇ ಗೊಂದಲ ಆಗುವುದಿಲ್ಲ. ಬಿಜೆಪಿ ರಾಷ್ಟ್ರೀಯ ಪಕ್ಷ. ಪಕ್ಷಕ್ಕೆ ಹಿನ್ನಲೆ ಮತ್ತು ಸಿದ್ಧಾಂತ ಇದೆ. ಹೊಸ ಪಕ್ಷದಿಂದ ನಮ್ಮ ಪಕ್ಷದ ಮೇಲೆ ಯಾವುದೇ ಪ್ರಭಾವ ಬೀಳುವುದಿಲ್ಲ. ರಾಜಕಾರಣ ಮತ್ತು ಸ್ನೇಹ ಬೇರೆ ಇದೆ. ಸ್ನೇಹಿತನಾಗಿ ನಾವು ಮುಂದುವರೆಯತ್ತೇವೆ. ರೆಡ್ಡಿಯವರೊಂದಿಗೆ ನಮ್ಮ ಎಲ್ಲಾ ನಾಯಕರು ಎಲ್ಲಾ ಸಂದರ್ಭದಲ್ಲಿ ನಿಂತಿದ್ದರು. ಆದ್ರೇ ಅವರೀಗ ಪಕ್ಷ ಮಾಡಿದ್ದಾರೆ ಈ ಬಗ್ಗೆ ಹೆಚ್ಚೇನು ಹೇಳಲಾಗದು ಎಂದು ಹೇಳಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ