AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್ ಶಾ ಹೇಳಿದ ಮೇಲೆ ಮತ್ತೆ ಹೇಳಿಕೆ ನೀಡುವುದು ಸರಿಯಲ್ಲ: ಈಶ್ವರಪ್ಪ ಹೇಳಿಕೆಗೆ ಸೋಮಶೇಖರ್, ಕಾರಜೋಳ ಪ್ರತಿಕ್ರಿಯೆ

Karnataka BJP: ಈಶ್ವರಪ್ಪ ಹೇಳಿಕೆಗೆ ಸಚಿವ ಎಸ್​.ಟಿ.ಸೋಮಶೇಖರ್ ಟಾಂಗ್ ಕೊಟ್ಟಿದ್ದಾರೆ. ಸಿಎಂ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದ್ದಾರೆ‌. ಮುಂದೆಯೂ ಅದೇ ರೀತಿ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಅಮಿತ್ ಶಾ ಹೇಳಿದ ಮೇಲೆ ಮತ್ತೆ ಹೇಳಿಕೆ ನೀಡುವುದು ಸರಿಯಲ್ಲ: ಈಶ್ವರಪ್ಪ ಹೇಳಿಕೆಗೆ ಸೋಮಶೇಖರ್, ಕಾರಜೋಳ ಪ್ರತಿಕ್ರಿಯೆ
ಎಸ್​ಟಿ ಸೋಮಶೇಖರ್, ಗೋವಿಂದ ಕಾರಜೋಳ, ಕೆಎಸ್ ಈಶ್ವರಪ್ಪ
TV9 Web
| Updated By: ganapathi bhat|

Updated on:Sep 05, 2021 | 4:36 PM

Share

ಚಾಮರಾಜನಗರ: ಮುಂದಿನ ಚುನಾವಣೆಗೆ ಸಾಮೂಹಿಕ ನಾಯಕತ್ವ ಎಂಬ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಸಚಿವ ಎಸ್​.ಟಿ. ಸೋಮಶೇಖರ್ ಟಾಂಗ್ ಕೊಟ್ಟಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ ಮೇಲೆ ಮುಗಿಯಿತು. ಮುಂದಿನ ಚುನಾವಣೆಗೆ ಬಸವರಾಜ ಬೊಮ್ಮಾಯಿ ನಾಯಕತ್ವ ಎಂದಿದ್ದಾರೆ. ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷರಾಗಿದ್ದವರು, ಕೇಂದ್ರದ ಹಾಲಿ ಗೃಹ ಸಚಿವರು. ಅವರು ಬಸವರಾಜ ಬೊಮ್ಮಾಯಿ ನಾಯಕತ್ವ ಎಂದು ಹೇಳಿದ್ದಾರೆ. ಅಮಿತ್ ಶಾ ಹೇಳಿದ ಮೇಲೆ ಮತ್ತೆ ಹೇಳಿಕೆ ನೀಡುವುದು ಸರಿಯಲ್ಲ ಎಂದು ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

ಈಶ್ವರಪ್ಪ ಸಾಮೂಹಿಕ ನಾಯಕತ್ವವೆಂದು ಹೇಳುವುದು ಸರಿಯಲ್ಲ. ಅಮಿತ್ ಶಾ ಹೇಳಿಕೆಯೇ ಫೈನಲ್​ ಎಂದು ಚಾಮರಾಜನಗರದಲ್ಲಿ ಸಚಿವ ಎಸ್​. ಟಿ. ಸೋಮಶೇಖರ್ ಹೇಳಿದ್ದಾರೆ. ಈಶ್ವರಪ್ಪ ಹೇಳಿಕೆಗೆ ಸಚಿವ ಎಸ್​.ಟಿ.ಸೋಮಶೇಖರ್ ಟಾಂಗ್ ಕೊಟ್ಟಿದ್ದಾರೆ. ಸಿಎಂ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದ್ದಾರೆ‌. ಮುಂದೆಯೂ ಅದೇ ರೀತಿ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ: ವರಿಷ್ಠರ ತೀರ್ಮಾನಕ್ಕೆ ನಾವು ಬದ್ಧ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ಎಂಬ ಅಮಿತ್ ಶಾ ಹೇಳಿಕೆ ವಿಚಾರವಾಗಿ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮದು ರಾಷ್ಟ್ರೀಯ ಪಕ್ಷ ವರಿಷ್ಠರ ತೀರ್ಮಾನಕ್ಕೆ ನಾವು ಬದ್ಧ ಆಗಿರುತ್ತೇವೆ. ಹಿಂದಿನ ಎಲ್ಲ ಚುನಾವಣೆಗಳಲ್ಲೂ ಯಾರು ಸಿಎಂ ಇರ್ತಾರೆ. ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಿದ್ದೇವೆ. ಹಿರಿಯ ನಾಯಕ ಈಶ್ವರಪ್ಪ ಅಪಸ್ವರ ಎತ್ತಿರುವ ವಿಚಾರ, ಅವರನ್ನು ಭೇಟಿ ಆಗಿಲ್ಲ. ಭೇಟಿಯಾಗಿ ಮಾತಾಡುವೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ.

ಬೊಮ್ಮಾಯಿ ಅವ್ರು ಯುವಕರಿದ್ದಾರೆ. ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿ ಅವ್ರಿಗೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಎಂದು ಗೋವಿಂದ ಕಾರಜೋಳ ತಿಳಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಕರ್ನಾಟಕದಲ್ಲಿ ಮುಂದಿನ ಚುನಾವಣೆ ನಡೆಯಲಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಶಿವಮೊಗ್ಗದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯಿಸಿದ್ದರು. ಈಶ್ವರಪ್ಪ ಸಾಮೂಹಿಕ ನಾಯಕತ್ವದಲ್ಲಿ ರಾಜ್ಯದ ಮುಂದಿನ ಚುನಾವಣೆ ನಡೆಯಲಿದೆ ಎಂದು ಹೇಳಿದ್ದರು. ಅಮಿತ್ ಶಾ ಯಾವ ಅರ್ಥದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ ನಡೆಯಲಿದೆ ಎಂದು ಹೇಳಿದ್ದಾರೋ ನಮಗೆ ಗೊತ್ತಿಲ್ಲ. ಆದರೆ, ಸಾಮೂಹಿಕ ನಾಯಕತ್ವದ ಬಗ್ಗೆ ರಾಜ್ಯ ನಾಯಕರ ಒಲವು ಇದೆ ಎಂದು ಶಿವಮೊಗ್ಗದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದರು.

ಇದನ್ನೂ ಓದಿ: ಅಮಿತ್​ ಶಾ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ, ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ನಡೆಯಲಿದೆ; ಸಚಿವ ಈಶ್ವರಪ್ಪ

ಇದನ್ನೂ ಓದಿ: ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ: ಗೃಹ ಸಚಿವ ಅಮಿತ್ ಶಾ ಘೋಷಣೆ

Published On - 4:31 pm, Sun, 5 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ