ರಾಜ್ಯ ಸರ್ಕಾರ ನ್ಯಾಯವಾಗಿ ಒಟ್ಟು 15 ಕೆಜಿ ಅಕ್ಕಿ ಕೊಡಬೇಕು: ಸಂಸದ ತೇಜಸ್ವಿ ಸೂರ್ಯ ಆಗ್ರಹ

|

Updated on: Jun 17, 2023 | 7:13 PM

ಉಚಿತವಾಗಿ 10 ಕೆಜಿ ಅಕ್ಕಿ ಕೊಡುತ್ತೇವೆಂದು ರಾಜ್ಯ ಸರ್ಕಾರ ಹೇಳಿದೆ. ಈಗಾಗಲೇ ಕೇಂದ್ರ ಸರ್ಕಾರ ತಲಾ 5 ಕೆಜಿ ಅಕ್ಕಿ ಕೊಡುತ್ತಿದೆ. ಹಾಗಾದರೆ ರಾಜ್ಯ ಸರ್ಕಾರ ನ್ಯಾಯವಾಗಿ ಒಟ್ಟು 15 ಕೆಜಿ ಅಕ್ಕಿ ಕೊಡಬೇಕು ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಆಗ್ರಹಿಸಿದ್ದಾರೆ.

ಬೆಂಗಳೂರು: ಉಚಿತವಾಗಿ 10 ಕೆಜಿ ಅಕ್ಕಿ ಕೊಡುತ್ತೇವೆಂದು ರಾಜ್ಯ ಸರ್ಕಾರ ಹೇಳಿದೆ. ಈಗಾಗಲೇ ಕೇಂದ್ರ ಸರ್ಕಾರ ತಲಾ 5 ಕೆಜಿ ಅಕ್ಕಿ ಕೊಡುತ್ತಿದೆ. ಹಾಗಾದರೆ ರಾಜ್ಯ ಸರ್ಕಾರ ನ್ಯಾಯವಾಗಿ ಒಟ್ಟು 15 ಕೆಜಿ ಅಕ್ಕಿ ಕೊಡಬೇಕು ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಆಗ್ರಹಿಸಿದರು. ನಗರದಲ್ಲಿ ಸಂಸದರಾದ ಪಿ.ಸಿ.‌ ಮೋಹನ್ ಮತ್ತು ತೇಜಸ್ವಿ ಸೂರ್ಯ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಕ್ಕಿ ಕೊಡಲಾಗದೆ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಕುಣಿಯಲಾಗದವನು ನೆಲಡೊಂಕು ಅಂದಂತಾಗಿದೆ ರಾಜ್ಯದ ಸ್ಥಿತಿ. ಜನರನ್ನು ರಾಜ್ಯ ಸರ್ಕಾರ ದಾರಿ ತಪ್ಪಿಸುತ್ತಿದೆ ಎಂದು ವಾಗ್ದಾಳಿ ಮಾಡಿದರು.

ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ ಮಾರದಂತೆ ಸೂಚನೆ

ಅನ್ನಭಾಗ್ಯ ಯೋಜನೆ ವಿಚಾರದಲ್ಲಿ ಕೇಂದ್ರ ತಾರತಮ್ಯ ಮಾಡಿಲ್ಲ. ಕೇಂದ್ರದ ಮೇಲೆ ರಾಜ್ಯ ಸರ್ಕಾರ ಸುಳ್ಳು ಆರೋಪ ಮಾಡುತ್ತಿದೆ. ಎಫ್​ಸಿಐಗೆ ಪತ್ರ ಬರೆಯುವ ಮೊದಲೇ ಮಾರಾಟ ಯೋಜನೆಯ ನಿಯಮಗಳಲ್ಲಿ ಬದಲಾವಣೆ ತರಲಾಗಿತ್ತು.

ಇದನ್ನೂ ಓದಿ: ಅಕ್ಕಿ ರಾಜಕೀಯ ಜಟಾಪಟಿ ನಡುವೆ ಖುದ್ದು ಪ್ರಧಾನಿ ಮೋದಿ ಭೇಟಿಗೆ ಮುಂದಾದ ಸಿದ್ದರಾಮಯ್ಯ

ಅಕ್ಕಿ, ಗೋಧಿ ಮಾರದಂತೆ ಅಂತರ್ ಸಚಿವಾಲಯ ಸಮಿತಿ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ ಮಾರದಂತೆ ಸೂಚನೆ ಮಾಡಿದೆ. ಅಕ್ಕಿ, ಗೋಧಿ ಕೊರತೆ ಆಗದಂತೆ ಮೇ ತಿಂಗಳಿನಲ್ಲೇ ಕೇಂದ್ರ ನಿಯಮಗಳಲ್ಲಿ ಈ ಬದಲಾವಣೆ ತಂದಿದೆ ಎಂದು ತಿಳಿಸಿದರು.

ಇದನ್ನೂ ಓದಿ: Gruha Lakshmi Scheme: ಗೃಹಲಕ್ಷ್ಮೀ ಯೋಜನೆಯಲ್ಲಿ ಬದಲಾವಣೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಹೇಳಿಕೆ

ಇದು ದ್ವೇಷದ ರಾಜಕಾರಣವಲ್ಲ, ಅ‌ಸಮರ್ಥ ರಾಜಕಾರಣ

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರುವ ಅಕ್ಕಿ ಯಾವುದೂ ನಿಲ್ಲುವುದಿಲ್ಲ. ಇದು ದ್ವೇಷದ ರಾಜಕಾರಣವಲ್ಲ, ಅ‌ಸಮರ್ಥ ರಾಜಕಾರಣ. ಈ ಹಿಂದೆಯೂ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆ ಘೋಷಿಸಿದ್ದರು. ಆಗಲೂ ಕೇಂದ್ರ ಸರ್ಕಾರದ ಅಕ್ಕಿಗೆ ತಮ್ಮ ಫೋಟೋ ಹಾಕಿಕೊಂಡಿದ್ದರು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:04 pm, Sat, 17 June 23