AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ: ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ

ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ತಿಂಗಳ ಒಳಗೆ ಎಲ್ಲವೂ ಸರಿಯಾಗದಿದ್ದರೆ ಹೋರಾಟ ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ: ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ
ನಳಿನ್​ ಕುಮಾರ್​ ಕಟೀಲ್​
ಕಿರಣ್ ಹನುಮಂತ್​ ಮಾದಾರ್
|

Updated on:May 27, 2023 | 1:35 PM

Share

ಮಂಗಳೂರು: ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ದ್ವೇಷದ ರಾಜಕಾರಣವನ್ನು ವಿರೋಧಿಸಿ ಪ್ರತಿಭಟಿಸುತ್ತೇವೆ. ತಿಂಗಳ ಒಳಗೆ ಎಲ್ಲವೂ ಸರಿಯಾಗದಿದ್ದರೆ ಹೋರಾಟ ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್(Nalin Kumar Kateel) ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ‘ಬಿಜೆಪಿ ಸರ್ಕಾರದ ಮೇಲೆ ಮಾಡಿದ ಆರೋಪಗಳ ಪೂರ್ಣ ತನಿಖೆ ನಡೆಯಲಿ. ಸಿದ್ಧರಾಮಯ್ಯ ಮೇಲಿರುವ ಲೋಕಾಯುಕ್ತ ಕೇಸ್ ನ್ನೂ ತನಿಖೆ ಮಾಡಲಿ. ಕರಾವಳಿ ಜಿಲ್ಲೆಗೆ ಒಂದೂ ಮಂತ್ರಿ ಪಟ್ಟ ಇಲ್ಲ, ಈ ಬಗ್ಗೆ ಕೂಡ ದುಃಖ ಇದೆ ಎಂದಿದ್ದಾರೆ.

ಮಂಗಳೂರಿನಲ್ಲಿ ಜಿಲ್ಲೆಯ ಆರು ಬಿಜೆಪಿ ಶಾಸಕರೊಂದಿಗೆ ನಳಿನ್ ಕುಮಾರ್ ಕಟೀಲ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ‘ಪೂರ್ಣ ಬಹುಮತ ಪಡೆದಿರುವ ಕಾಂಗ್ರೆಸ್ ಸಮಸ್ಯೆಗೆ ಪರಿಹಾರ ಮಾಡುವ ಬದಲು ಅಧಿಕಾರ ಹಂಚಿಕೆಯ ಚರ್ಚೆಯಲ್ಲಿದೆ. ಐದು ಉಚಿತ ಯೋಜನೆಗಳನ್ನು 20 ದಿನಗಳಾದರೂ ಹಂಚಿಕೆ ಮಾಡಿಲ್ಲ. ಸರ್ಕಾರಿ ನೌಕರರು ಏಟು ತಿನ್ನುವ ಪರಿಸ್ಥಿತಿ ಬಂದಿದೆ. ವಿದ್ಯುತ್ ಬಿಲ್ ಕಲೆಕ್ಟ್ ಮಾಡಲು ಹೋದವರಿಗೆ ಏಟು ಬೀಳುತ್ತಿದೆ. ಕಾಂಗ್ರೆಸ್ ವಿಜಯೋತ್ಸವದಲ್ಲೇ ಗಲಭೆ ಮಾಡಿದ್ದು, ದ್ವೇಷದ ರಾಜಕಾರಣವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ:ಶಾಸಕ, ಪರಿಷತ್ ಸದಸ್ಯರಾಗದಿದ್ದರೂ ಸಚಿವರಾದ ಎನ್ಎಸ್ ಬೋಸರಾಜು ಯಾರು? ಇವರ ಬಗ್ಗೆ ಒಂದಿಷ್ಟು ತಿಳಿದುಕೊಳ್ಳಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್ಐಆರ್ ಮಾಡಲಾಗಿದೆ. ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತರ ಮೇಲೂ ಕೇಸ್ ಹಾಕಲಾಗಿದೆ. ಕಾಂಗ್ರೆಸ್ ದ್ವೇಷ ಸಾಧನೆ ಮೂಲಕ ಬಿಜೆಪಿಯನ್ನು ಕಟ್ಟಿಹಾಕುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರನ್ನು ಬಿಟ್ಟು ಹಲ್ಲೆ ಹತ್ಯೆ ಮಾಡುತ್ತಿದೆ. ಕಾಂಗ್ರೆಸ್ ನಲ್ಲಿ ತಾಕತ್ ಇದ್ರೆ, ಪಾಕ್ ಪರ ಜೈಕಾರ ಕೂಗಿದವರನ್ನು ಬಂಧಿಸಲಿ. ಪ್ರವೀಣ್ ನೆಟ್ಟಾರ್ ಪತ್ನಿಗೆ ನೀಡಿದ್ದ ಉದ್ಯೋಗ ವನ್ನು ಕಾಂಗ್ರೆಸ್ ಕಿತ್ತುಕೊಂಡಿದೆ. ಅನುಕಂಪದ ಆಧಾರದ ಮೇಲೆ ಮತ್ತೆ ಉದ್ಯೋಗ ನೀಡಿ ಎಂದು ಸಿಎಂ ಸಿದ್ಧರಾಮಯ್ಯಗೆ ನಳಿನ್ ಕುಮಾರ್ ಕಟೀಲ್ ಮನವಿ ಮಾಡಿದ್ದು, ನೀವು ಉದ್ಯೋಗ ನೀಡದಿದ್ದರೂ ಕೇಂದ್ರದ ಎನ್ಎಂಪಿಟಿಯಲ್ಲಿ ಉದ್ಯೋಗ ನೀಡುತ್ತೇವೆ ಎಂದಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:35 pm, Sat, 27 May 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ