ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ಒಂದೇ ಹೋಟೆಲ್​ನಲ್ಲಿ ಕಾಂಗ್ರೆಸ್​ನ 2 ಪ್ರತ್ಯೇಕ ಸಭೆ

| Updated By: ರಮೇಶ್ ಬಿ. ಜವಳಗೇರಾ

Updated on: Feb 21, 2024 | 10:29 PM

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ ಪ್ರಮುಖವಾಗಿ ಕಾಂಗ್ರೆಸ್​​ನಲ್ಲಿ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗಳು ನಡೆದಿವೆ. ಇದರ ಮಧ್ಯೆ ಬೆಂಗಳೂರಿನ ಒಂದೇ ಹೋಟೆಲ್​ನಲ್ಲಿ ಕಾಂಗ್ರೆಸ್​​ನ ಎರಡು ಪ್ರತ್ಯೇಕ ಸಭೆ ನಡೆದಿದ್ದರೆ, ಅತ್ತ ಕುಮಾರಸ್ವಾಮಿ ದೆಹಲಿಗೆ ತೆರಳಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ಒಂದೇ ಹೋಟೆಲ್​ನಲ್ಲಿ ಕಾಂಗ್ರೆಸ್​ನ 2 ಪ್ರತ್ಯೇಕ ಸಭೆ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು, (ಫೆಬ್ರವರಿ 21): ಕರ್ನಾಟಕ ಕಂಗ್ರೆಸ್​​ನಲ್ಲಿ (Karnataka Congress) ಮಹತ್ವದ ಬೆಳವಣಿಗೆಗಳು ನಡೆದಿವೆ. ಲೋಕಸಭಾ ಚುನಾವಣೆಗೆ (Loksabha Elections 2024)ತಯಾರಿ ನಡೆಸಿದ್ದ ಕಾಂಗ್ರೆಸ್​​ಗೆ ಇದೀಗ ಮೊದಲು ರಾಜ್ಯಸಭೆಯಲ್ಲಿ (Rajyasabha Elections 2024) ಗೆಲ್ಲುವ ಟಾಸ್ಕ್​ ಇದೆ. ಯಾಕಂದ್ರೆ, ನಾಲ್ಕು ಸ್ಥಾನಕ್ಕೆ ಎನ್​ಡಿಎ (NDA) ಅಭ್ಯರ್ಥಿಯಾಗಿ 5ನೇ ಅಭ್ಯರ್ಥಿ ಕಣದಲ್ಲಿರುವುದರಿಂದ ಆಡಳಿತರೂಢ ಕಾಂಗ್ರೆಸ್​​ಗೆ ಕುದುರೆ ವ್ಯಾಪಾರದ ಭಯ ಶುರುವಾಗಿದೆ. ಈ ಸಂಬಂಧ ಕಾಂಗ್ರೆಸ್​​ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ, ಇದರಕ್ಕೆ ಪೂರಕವೆಂಬಂತೆ ಬೆಂಗಳೂರಿನ ಖಾಸಗಿ ಹೋಟೆಲ್​ವೊಂದರಲ್ಲಿ ಕಾಂಗ್ರೆಸ್​ನ ಎರಡು ಪ್ರತ್ಯೇಕ ಸಭೆಗಳು ನಡೆದಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಹೌದು… ಒಂದೇ ಹೋಟೆಲ್​ನಲ್ಲಿ ಒಂದು ಕಡೆ ಹಳೇ ಮೈಸೂರು ಭಾಗದ ಕಾಂಗ್ರೆಸ್​​ನ ಒಕ್ಕಲಿಗ ನಾಯಕರ ಸಭೆ ನಡೆದಿದ್ದರೆ, ಮತ್ತೊಂದೆಡೆ ಕಲಬುರಗಿ ಜಿಲ್ಲಾ ಕಾಂಗ್ರೆಸ್​ ನಾಯಕರು ಸಭೆ ನಡೆಸಿದ್ದಾರೆ. ಸಚಿವರಾದ ಪ್ರಿಯಾಂಕ್ ಖರ್ಗೆ, ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಲೋಕಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದಬಂದಿದೆ.

ಇದನ್ನೂ ಓದಿ: ಕೊನೆಗೂ ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್‌ ಸೇರ್ಪಡೆಗೆ ಸಿಕ್ತು ಗ್ರೀನ್ ಸಿಗ್ನಲ್

ಈ ಬಾರಿ ಲೋಕಸಭಾ ಚುನಾವಣೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಅಭ್ಯರ್ಥಿ ಮಾಡಬೇಕಾ? ಅಥವಾ ಬೇರೆಯವರಿಗೆ ಟಿಕೆಟ್ ನೀಡಬೇಕಾ ಎಂಬ ಕುರಿತು ಕಲಬುರಗಿ ಜಿಲ್ಲಾ ನಾಯಕರ ಮಾತುಕತೆ ನಡೆಸಿದ್ದಾರೆ. ಇನ್ನು ಈ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ಸಹ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಇನ್ನು ಸಭೆಯಲ್ಲಿ ಶಾಸಕಿ ಖನೀಸ್ ಫಾತಿಮಾ, ಅಲ್ಲಮಪ್ರಭು, ಅಜಯ್ ಸಿಂಗ್, M.Y.ಪಾಟೀಲ್, ತಿಪ್ಪಣ್ಣ ಕಮಕನೂರು ಸೇರಿ ಹಲವು ನಾಯಕರು ಭಾಗಿಯಾಗಿದ್ದರು.

ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ

ಇನ್ನು ನಾಳೆ(ಫೆಬ್ರವರಿ 22) ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದೆ. ನಾಳೆ ಸಂಜೆ 7 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ರಾಜ್ಯಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ. ಎನ್​ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿರುವ ಕುಪೇಂದ್ರ ರೆಡ್ಡಿ ಅವರನ್ನು ಗೆಲ್ಲಿಸಿಕೊಳ್ಳುವ ಬಗ್ಗೆ ಏನೆಲ್ಲಾ ಮಾಡಬೇಕು ಎನ್ನುವುದರ ಬಗ್ಗೆ ಮಾತುಕತೆ ನಡೆಯಲಿದೆ ಎನ್ನಲಾಗಿದೆ.

ಮತ್ತೊಂದೆಡೆ ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಅವರು ದಿಢೀರ್ ದೆಹಲಿಗೆ ಹಾರಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಕೆಲ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಸದ್ಯದ  ರಾಜ್ಯ ರಾಜಕಾರಣದ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಒಟ್ಟಿನಲ್ಲಿ ಕಾಂಗ್ರೆಸ್​ ಹಾಗೂ ಜೆಡಿಎಸ್​-ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ.