AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya: ಪಕ್ಷಗಳ ಟಿಕೆಟ್ ಸಿಗದಿದ್ದರೂ ಸುಮಲತಾ ಮಂಡ್ಯದಲ್ಲಿ ಸ್ಪರ್ಧೆ ಖಚಿತ? ಸುಳಿವು ಕೊಟ್ಟ ಚಾಲೆಂಜಿಂಗ್ ಸ್ಟಾರ್ ದರ್ಶನ್

Challenging Star Darshan Speaks: ಬಿಜೆಪಿ ಜೆಡಿಎಸ್ ಪಾಳಯದಿಂದ ಟಿಕೆಟ್ ಸಿಗದಿದ್ದರೆ ಸುಮಲತಾ ಅಂಬರೀಶ್ ಅವರು ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರಾ? ಕಾಟೇರಾ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸುಮಲತಾ ಅಂಬರೀಶ್ ಮತ್ತೆ ಮಂಡ್ಯದಲ್ಲಿ ಸ್ಪರ್ಧಿಸಬಹುದು ಎಂದು ಸುಳಿವು ನೀಡಿದ್ದಾರೆ. ಸುಮಮ್ಮನಿಗೆ ನಿಮ್ಮ ಸೇವೆ ಮಾಡಲು ಮತ್ತೊಮ್ಮೆ ಅವಕಾಶ ನೀಡಿ ಎಂದು ದರ್ಶನ್ ಅವರು ಮಂಡ್ಯ ಜನರಿಗೆ ಮನವಿ ಮಾಡಿದ್ದಾರೆ.

Mandya: ಪಕ್ಷಗಳ ಟಿಕೆಟ್ ಸಿಗದಿದ್ದರೂ ಸುಮಲತಾ ಮಂಡ್ಯದಲ್ಲಿ ಸ್ಪರ್ಧೆ ಖಚಿತ? ಸುಳಿವು ಕೊಟ್ಟ ಚಾಲೆಂಜಿಂಗ್ ಸ್ಟಾರ್ ದರ್ಶನ್
ಚಾಲೆಂಜಿಂಗ್ ಸ್ಟಾರ್ ದರ್ಶನ್
ಪ್ರಶಾಂತ್​ ಬಿ.
| Edited By: |

Updated on: Dec 25, 2023 | 11:22 AM

Share

ಮಂಡ್ಯ, ಡಿಸೆಂಬರ್ 25: ಜೆಡಿಎಸ್ ಮತ್ತು ಬಿಜೆಪಿ ಮಧ್ಯೆ ಚುನಾವಣಾ ಪೂರ್ವ ಮೈತ್ರಿ ಏರ್ಪಟ್ಟಿರುವ ನಡುವೆ ಸುಮಲತಾ ಅಂಬರೀಶ್ (Sumalatha Ambareesh) ಅವರ ಮುಂದಿನ ನಡೆ ಬಗ್ಗೆ ಕುತೂಹಲ ಇದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ವಿಚಾರದ ಬಗ್ಗೆ ಮಹತ್ವದ ಸುಳಿವು ನೀಡಿದ್ದಾರೆ. ಸುಮಲತಾ ಅಂಬರೀಶ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದಲ್ಲೇ ಸ್ಪರ್ಧಿಸಬಹುದು ಎಂಬುದನ್ನು ದರ್ಶನ್ ತಿಳಿಸಿದ್ದಾರೆ. ಕಾಟೇರಾ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ (Katera movie pre release function) ಪಾಲ್ಗೊಂಡಿದ್ದ ನಟ ದರ್ಶನ್, ತಮ್ಮ ಸಿನಿಮಾ ಪ್ರೊಮೋಶನ್ ಜೊತೆಗೆ ಸುಮಲತಾ ಅವರ ಪರ ಮತ ಯಾಚಿಸುವ ಕೆಲಸವನ್ನೂ ಶುರುವಿಟ್ಟುಕೊಂಡಿದ್ದಾರೆ. ‘ಸುಮಮ್ಮನಿಗೆ ಮತ್ತೊಮ್ಮೆ ನಿಮ್ಮ ಸೇವೆ ಮಾಡಲು ಅವಕಾಶ ಕೊಡಿ,’ ಎಂದು ಕಾಟೇರಾ ಸ್ಟಾರ್ ತಮ್ಮ ಭಾಷಣದ ವೇಳೆ ಮಂಡ್ಯದ ಜನರಿಗೆ ಕರೆ ಕೊಟ್ಟಿದ್ದಾರೆ. ಈ ಮೂಲಕ ಸುಮಲತಾ ಅಂಬರೀಶ್ ಮಂಡ್ಯದಲ್ಲಿ ಮತ್ತೊಮ್ಮೆ ಸ್ಪರ್ಧಿಸಬಹುದು ಎಂಬ ಪ್ರಬಲ ಸುಳಿವನ್ನು ಅವರು ನೀಡಿದ್ದಾರೆ.

ಮಂಡ್ಯ ರಾಜಕೀಯ ಸದಾ ಕಾಲ ಕುತೂಹಲ ಕೆರಳಿಸಿಕೊಂಡು ಹೋಗುತ್ತದೆ. ಈಗ ಲೋಕಸಭಾ ಚುನಾವಣೆ ಬರುತ್ತಿದ್ದು ಈ ಕ್ಷೇತ್ರದ ಮೇಲೆ ಹೆಚ್ಚಿನ ಜನರ ಕಣ್ಣು ನೆಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿಯಿಂದ ಇಲ್ಲಿ ಕುತೂಹಲ ಹೆಚ್ಚಾಗಿದೆ. ಜೆಡಿಎಸ್ ಜೊತೆ ಹೆಚ್ಚು ರಾಜಕೀಯ ಸಂಘರ್ಷ ಕಂಡಿದ್ದ ಸುಮಲತಾ ಅಂಬರೀಶ್ ಅವರ ಮುಂದಿನ ನಡೆ ಏನು ಎಂಬುದು ಒಂದು ಕುತೂಹಲ. ಹಾಗೆಯೇ, ಬಿಜೆಪಿ ಜೊತೆ ಹೆಚ್ಚು ಸಖ್ಯ ಹೊಂದಿರುವ ಸುಮಲತಾ ಅಂಬರೀಶ್ ಅವರನ್ನು ಕ್ಷೇತ್ರದಿಂದ ದೂರ ಸರಿಸಲು ಜೆಡಿಎಸ್ ಪ್ರಯತ್ನಿಸುತ್ತದಾ ಎಂಬುದೂ ಇನ್ನೊಂದು ಕುತೂಹಲ.

ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಮತ್ತು ದಲಿತ ನಾಯಕರು ದೆಹಲಿಯಲ್ಲಿ; ಮೂರು ಡಿಸಿಎಂ ಸ್ಥಾನಗಳಾಗಬೇಕೆಂದು ಹೈಕಮಾಂಡ್ ಬಳಿ ಮನವಿ?

ಆದರೆ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಾಳಯದಿಂದ ಟಿಕೆಟ್ ಸಿಗಲಿ, ಬಿಡಲಿ ಸುಮಲತಾ ಅಂಬರೀಶ್ ಮಂಡ್ಯ ಲೋಕಸಭಾ ಕ್ಷೇತ್ರದಲ್ಲೇ ಸ್ಪರ್ಧಿಸುವುದು ಖಚಿತ ಎಂಬುದು ದರ್ಶನ್ ಮಾತಿನಲ್ಲಿ ಅಭಿವ್ಯಕ್ತಗೊಂಡಿದೆ. ಒಂದು ವೇಳೆ ಬಿಜೆಪಿ ಜೆಡಿಎಸ್​ನಿಂದ ಟಿಕೆಟ್ ಸಿಗದೇ ಹೋದರೆ ಕಾಂಗ್ರೆಸ್ ಟಿಕೆಟ್​ಗೆ ಸುಮಲತಾ ಪ್ರಯತ್ನಿಸಬಹುದು. ಕಾಂಗ್ರೆಸ್ ಟಿಕೆಟ್ ಕೂಡ ಸಿಗದೇ ಹೋದರೆ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಬಹುದು ಎನ್ನಲಾಗಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ಹೇಳಿರುವುದಷ್ಟೇ ಅಲ್ಲ, ಸ್ವತಃ ಸುಮಲತಾ ಅವರೇ ತಾನು ಮಂಡ್ಯದಿಂದ ಎಲ್ಲೂ ಹೋಗಲ್ಲ ಎಂದು ಈ ಹಿಂದೆ ಸ್ಪಷ್ಟಪಡಿಸಿರುವುದುಂಟು. ಕಳೆದ ಬಾರಿಯ ಚುನಾವಣೆಯಲ್ಲಿ ಅವರು ಪಕ್ಷೇತರ ಅಭ್ಯರ್ಥಿಯಾಗಿಯೇ ನಿಂತು ಅಚ್ಚರಿಯ ಗೆಲುವು ಪಡೆದಿದ್ದರು. ಆಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್ ಜೋಡೆತ್ತುಗಳಾಗಿ ಸುಮ್ಮಮ್ಮರ ಗೆಲುವಿಗೆ ಶ್ರಮಿಸಿದ್ದರು. ಈಗಲೂ ಕೂಡ ಈ ಇಬ್ಬರು ನಟರು ಮಂಡ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಧುಮುಕುವ ಸಾಧ್ಯತೆ ಇದ್ದೇ ಇದೆ. ಯಶ್ ಅಖಿಲ ಭಾರತ ಸ್ಟಾರ್ ಆಗಿದ್ದಾರೆ. ಅವರ ಜನಪ್ರಿಯತೆ ಮೊದಲಿಗಿಂತ ಹೆಚ್ಚಿದೆ. ದರ್ಶನ್ ಮಾಸ್ ಖದರ್ ಬಗ್ಗೆ ಹೇಳುವುದೇ ಬೇಡ.

ಇನ್ನಷ್ಟು ರಾಜಕೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ