AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sumalatha Ambareesh: ಅಭಿವೃದ್ಧಿಗೆ ಮತ್ತೊಂದು ಹೆಸರೇ ಪ್ರಧಾನಿ ಮೋದಿ; ಸುಮಲತಾ ಬಣ್ಣನೆ

ಅಭಿವೃದ್ಧಿಗೆ ಮತ್ತೊಂದು ಹೆಸರೇ ಪ್ರಧಾನಿ ನರೇಂದ್ರ ಮೋದಿ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಣ್ಣಿಸಿದರು.

Sumalatha Ambareesh: ಅಭಿವೃದ್ಧಿಗೆ ಮತ್ತೊಂದು ಹೆಸರೇ ಪ್ರಧಾನಿ ಮೋದಿ; ಸುಮಲತಾ ಬಣ್ಣನೆ
ನರೇಂದ್ರ ಮೋದಿ ಹಾಗೂ ಸುಮಲತಾ ಅಂಬರೀಶ್
Ganapathi Sharma
|

Updated on: Mar 10, 2023 | 8:51 PM

Share

ಮಂಡ್ಯ: ಅಭಿವೃದ್ಧಿಗೆ ಮತ್ತೊಂದು ಹೆಸರೇ ಪ್ರಧಾನಿ ನರೇಂದ್ರ ಮೋದಿ (Narendra Modi) ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಬಣ್ಣಿಸಿದರು. ಬಿಜೆಪಿಗೆ ಸಂಪೂರ್ಣ ಬೆಂಬಲ ಘೋಷಿಸಿದ ನಂತರ ಗೆಜ್ಜಲಗೆರೆಗೆ ತೆರಳಿ ಬಿಜೆಪಿ ಮಾರ್ಚ್ 12ರ ಸಮಾವೇಶದ ಸ್ಥಳ ವೀಕ್ಷಣೆ ಮಾಡಿದ ಬಳಿಕ ಅವರು ಮಾತನಾಡಿದರು. ಅಂದು ಮೋದಿ ಬೆಂಗಳೂರು ಮೈಸೂರು ಎಕ್ಸ್​​​ಪ್ರೆಸ್​ ವೇ ಉದ್ಘಾಟನೆ ಮಾಡಲಿದ್ದಾರೆ. ಮಂಡ್ಯದಲ್ಲೇ ದಶಪಥ ಹೆದ್ದಾರಿ ಲೋಕಾರ್ಪಣೆಯಾಗುತ್ತಿರುವುದಕ್ಕೆ ಸುಮಲತಾ ಹರ್ಷ ವ್ಯಕ್ತಪಡಿಸಿದರು. 41 ವರ್ಷದ ಬಳಿಕ ಪ್ರಧಾನಿಯವರು ಮಂಡ್ಯಕ್ಕೆ ಆಗಮಿಸುತ್ತಿರುವುದಕ್ಕೆ ಖುಷಿ ನೀಡಿದೆ. ಮೋದಿ ಭೇಟಿಯಿಂದ ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ ಅನುಕೂಲವಾಗಲಿದೆ. ಗೆಜ್ಜಲಗೆರೆ ಸಮಾವೇಶಕ್ಕೆ 2 ಲಕ್ಷಕ್ಕೂ ಹೆಚ್ಚು ಜನರು ಬರುವ ನಿರೀಕ್ಷೆ ಇದೆ ಎಂದು ಅವರು ಹೇಳಿದರು.

ಬಿಜೆಪಿ ಪರ ಪ್ರಚಾರ ನಡೆಸುವ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚಿಸುತ್ತೇನೆ. ಪಕ್ಷದ ನಾಯಕರ ತೀರ್ಮಾನದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುವೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕರ್ನಾಟಕದ ಅಭಿವೃದ್ಧಿಯ ಪಥಕ್ಕೆ ಕೊಡುಗೆ: ಪ್ರಧಾನಿ ಮೋದಿ

ಶುಕ್ರವಾರ ಮಧ್ಯಾಹ್ನ ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಸುಮಲತಾ, ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಸಂಪೂರ್ಣ ಭರವಸೆಯಿಟ್ಟು ಬಿಜೆಪಿಗೆ ಬೆಂಬಲ ಘೋಷಿಸುತ್ತಿರುವುದಾಗಿ ತಿಳಿಸಿದ್ದರು. ಪ್ರಧಾನಿ ಮೋದಿಯವರಿಂದಾಗಿಯೇ ನಾವು ವಿದೇಶಗಳಲ್ಲೂ ತಲೆಯೆತ್ತಿ ತಿರುಗಾಡುಂತಾಗಿದೆ, ಕೇವಲ ಅವರಿಂದ ಮಾತ್ರ ದೇಶದ ಪ್ರಗತಿ ಸಾಧ್ಯ. ಅವರ ನಾಯಕತ್ವದಲ್ಲಿ ಸಂಪೂರ್ಣ ನಂಬಿಕೆ ಇಟ್ಟು ಬೆಂಬಲ ನೀಡುತ್ತಿದ್ದೇನೆ ಎಂದು ಹೇಳಿದ್ದರು. ಆದರೆ, ಅವರು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿಲ್ಲ. ಈ ಬಾರಿಯ ಸಂಸತ್ತಿನ ಅವಧಿ ಮುಗಿಯುವವರೆಗೆ ಅವರು ಪಕ್ಷೇತರ ಸಂಸದರಾಗಿಯೇ ಮುಂದುವರಿಯಲಿದ್ದಾರೆ.

ಬಿಜೆಪಿಗೆ ಸುಮಲತಾ ಬೆಂಬಲ; ವಿಶೇಷವಿಲ್ಲ ಎಂದ ಡಿಕೆಶಿ

ಬಿಜೆಪಿಗೆ ಮಂಡ್ಯ ಸಂಸದೆ ಸುಮಲತಾ ಬೆಂಬಲ ಘೋಷಿಸಿರುವುದು ಹೊಸದೇನು ಅಲ್ಲ. ಅವರು ಮೊದಲಿನಿಂದಲೂ ಬಿಜೆಪಿ ಬೆಂಬಲಿಸಿದ್ದಾರೆ ಎಂದು ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬಿಜೆಪಿಗೆ ಬೆಂಬಲ ನೀಡಿರುವುದು ಅವರ ವೈಯಕ್ತಿಕ ವಿಚಾರ. ಏನು ಬೇಕಾದರೂ ತೀರ್ಮಾನ ಮಾಡಲಿ. ಅವರಿಗೆ ಒಳ್ಳೆಯದಾಗಲಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ ಕೂಡ ಸುಮಲತಾ ಬಿಜೆಪಿಗೆ ಬೆಂಬಲ ಘೋಷಿಸಿದ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದರು. ಸುಮಲತಾ ಕೂಡ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್​ ಅನ್ನೇ ಗುರಿಯಾಗಿಸಿ ವಾಗ್ದಾಳಿ ನಡೆಸಿದ್ದು ಬಿಟ್ಟರೆ ಕಾಂಗ್ರೆಸ್ ವಿರುದ್ಧ ಮಾತನಾಡಿರಲಿಲ್ಲ. ಇದರ ಹಿಂದೆ ಹಲವು ರಾಜಕೀಯ ಲೆಕ್ಕಾಚಾರಗಳಿರಬಹುದು ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು