ರಾವಣ ಮಾತ್ರ ಅಲ್ಲ, ಸಿದ್ದರಾಮಯ್ಯ ಕೂಡ ರಾಮ ವಿರೋಧಿ -ಶಾಸಕ ಸುನೀಲ್​ ಕುಮಾರ್​

ರಾವಣ ಮಾತ್ರ ಅಲ್ಲ, ಸಿದ್ದರಾಮಯ್ಯ(Siddaramaiah) ಕೂಡ ರಾಮನ ವಿರೋಧಿ ಎನ್ನುವುದನ್ನು ತೋರಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್(Sunil kumar)ಸಿಎಂ ವಿರುದ್ದ ಕಿಡಿಕಾರಿದ್ದಾರೆ.​ ಬೆಂಗಳೂರಿನಲ್ಲಿ ಮಾತನಾಡಿದ ಅವರು ‘ ನಾನು ಪಟ್ಟಿ ಕೊಡುತ್ತೇನೆ, ನಿಮಗೆ ತಾಕತ್ ಇದ್ದರೆ ಕರ ಸೇವಕರನ್ನು ಬಂಧಿಸಿ ಎಂದಿದ್ದಾರೆ.

ರಾವಣ ಮಾತ್ರ ಅಲ್ಲ, ಸಿದ್ದರಾಮಯ್ಯ ಕೂಡ ರಾಮ ವಿರೋಧಿ -ಶಾಸಕ ಸುನೀಲ್​ ಕುಮಾರ್​
ಸುನೀಲ್​ ಕುಮಾರ್​, ಸಿದ್ದರಾಮಯ್ಯ
Edited By:

Updated on: Jan 02, 2024 | 3:42 PM

ಬೆಂಗಳೂರು, ಜ.02: ರಾವಣ ಮಾತ್ರ ಅಲ್ಲ, ಸಿದ್ದರಾಮಯ್ಯ(Siddaramaiah) ಕೂಡ ರಾಮನ ವಿರೋಧಿ ಎನ್ನುವುದನ್ನು ತೋರಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್(Sunil kumar)ಸಿಎಂ ವಿರುದ್ದ ಕಿಡಿಕಾರಿದ್ದಾರೆ.​ ಬೆಂಗಳೂರಿನಲ್ಲಿ ಮಾತನಾಡಿದ ಅವರು ‘ ನಾನು ಪಟ್ಟಿ ಕೊಡುತ್ತೇನೆ, ನಿಮಗೆ ತಾಕತ್ ಇದ್ದರೆ ಕರ ಸೇವಕರನ್ನು ಬಂಧಿಸಿ. ನಾನೂ ಕರ ಸೇವೆಯಲ್ಲಿ ಭಾಗಿಯಾಗಿದ್ದೆ, ಬಂಧನ ಮಾಡಿದಾಕ್ಷಣ ಹಿಂದುತ್ವಕ್ಕೆ ಧಕ್ಕೆ ಮಾಡಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿಎಂಗೆ ಹಿಂದೂಗಳ ಭಾವನೆ ಇದ್ರೆ ದೇಗುಲಗಳನ್ನು ಜೀರ್ಣೋದ್ಧಾರ ಮಾಡಲಿ

ರಾಮ ಮಂದಿರ ಉದ್ಘಾಟನೆಯಿಂದ ಇಡೀ ದೇಶ ಖುಷಿ ಪಡುತ್ತಿದೆ. ಆದರೆ, ಸಿದ್ದರಾಮಯ್ಯ ಅವರು ಶ್ರೀಕಾಂತ ಪೂಜಾರಿ ಎಂಬಾತನ ಬಂಧನದ ಮೂಲಕ ಅಪಶಕುನ ಮಾಡುತ್ತಿದ್ದಾರೆ. ಸರ್ಕಾರ ಹಿಂದುತ್ವದ ಪರ, ಹಿಂದೂಗಳ ಭಾವನೆ ಇದ್ದರೆ ನೂರು ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಲಿ. ಇನ್ನು ಮನೆ ಮನೆಗಳಲ್ಲಿ ದೀಪ ಬೆಳಗಿಸಿ ಎಂದು ಪ್ರಧಾನಿ ಕರೆ ಕೊಟ್ಟಿದ್ದಾರೆ. ಅದರಂತೆ ಸಿಎಂ ಹಾಗೂ ಸಚಿವರು ಕೂಡ ತಮ್ಮ ಮನೆಯಲ್ಲಿ ನಂದಾ ದೀಪ ಬೆಳಗಿಸಲಿ, ಸಿಎಂ ಕೂಡ ತಮ್ಮ ಕುಟುಂಬ ಸದಸ್ಯರ ಜೊತೆ ಸೇರಿ ದೀಪ ಹಚ್ಚಲಿ ಎಂದಿದ್ದಾರೆ.

ಇದನ್ನೂ ಓದಿ:ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿ ಶಾಂತಿ ಸುವ್ಯವಸ್ಥೆ ಕದಡುವ ಕೆಲಸ ಸಿದ್ದರಾಮಯ್ಯ ಮಾಡುತ್ತಿದ್ದಾರೆ: ಬಿವೈ ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ನೆಲೆಗೊಂಡಿದೆ. ಅದನ್ನು ಕದಡುವ ದುಸ್ಸಾಹಸಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ಮುಂದಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ್ದ ಅವರು, ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿಯವರನ್ನು ಬಂಧಿಸುವ ಮೂಲಕ 30 ವರ್ಷಗಳ ಹಿಂದಿನ ಪ್ರಕರಣವನ್ನು ಮುನ್ನೆಲೆಗೆ ತರುವ ಕೆಲಸ ಸಿದ್ದರಾಮಯ್ಯ ಮಾಡಿದ್ದಾರೆ. ಹಿಂದೂ ಕಾರ್ಯಕರ್ತನನ್ನು ಬಂಧಿಸಿರುವ ಸಂದರ್ಭದ ಬಗ್ಗೆ ಎಲ್ಲರೂ ಯೋಚಿಸಬೇಕಿದೆ ಎಂದು ಕಿಡಿಕಾರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ