ಕರ್ನಾಟಕ ಸರ್ಕಾರ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರ: ಕುಮಾರಸ್ವಾಮಿ

ಸರ್ಕಾರದ ಸಭೆಗಳನ್ನು ಕಾಂಗ್ರೆಸ್​ ಹೈಕಮಾಂಡ್​ ನಾಯಕರಾಗಿರುವ ರಣದೀಪ್ ಸಿಂಗ್ ಸುರ್ಜೇವಾಲ ಅವರು ನಡೆಸಿರುವುದು ಟೀಕೆಗೆ ಕಾರಣವಾಗಿದೆ. ಕರ್ನಾಟಕ ಸರ್ಕಾರವನ್ನು ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರ ಅಂತಾ ಕುಮಾರಸ್ವಾಮಿ ಅವರು ಜರಿದಿದ್ದಾರೆ.

ಕರ್ನಾಟಕ ಸರ್ಕಾರ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರ: ಕುಮಾರಸ್ವಾಮಿ
ರಣದೀಪ್ ಸುರ್ಜೇವಾಲ ಅವರು ಸರ್ಕಾರಿ ಸಭೆ ನಡೆಸಿ ಬಗ್ಗೆ ಟೀಕಿಸಿದ ಹೆಚ್​ಡಿ ಕುಮಾರಸ್ವಾಮಿ
Follow us
|

Updated on: Jun 13, 2023 | 8:04 PM

ಬೆಂಗಳೂರು: ಸರ್ಕಾರದ ಸಭೆಗಳನ್ನು ಕಾಂಗ್ರೆಸ್​ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ (Randeep Surjewala) ಅವರು ನಡೆಸಿರುವುದು ಟೀಕೆಗೆ ಕಾರಣವಾಗಿದೆ. ಬಿಜೆಪಿ ನಂತರ ಇದೀಗ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಟೀಕಿಸಿದ್ದು, ಕರ್ನಾಟಕ ಸರ್ಕಾರವನ್ನು ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರ ಅಂತಾ ಜರಿದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಕುಮಾರಸ್ವಾಮಿ, “ರಾಜ್ಯದಲ್ಲಿರುವುದು ಸಿದ್ದರಾಮಯ್ಯನವರ ನೇತೃತ್ವದ ಸರಕಾರವೋ ಅಥವಾ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರಕಾರಕ್ಕಾ? ಅಥವಾ ಕೈಗೊಂಬೆ ಸರಕಾರಕ್ಕಾ? ಪಾಪ.. ಜನರ ವೋಟು ಹಂಗಿನ ಸರಕಾರದ ಪಾಲಾಗಿದೆ. ಸರಕಾರಕ್ಕೆ ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ” ಎಂದು ಟೀಕಿಸಿದ್ದಾರೆ.

“ಸರಕಾರದ ಅಧಿಕೃತ ಸಭೆಗಳನ್ನು ಹೈಕಮಾಂಡಿನ ನಿಲಯದ ಕಲಾವಿದರೇ ನಡೆಸುವ ಕರ್ಮ ಕರ್ನಾಟಕದ್ದು. ನಾನು ಟ್ಯಾಗ್ ಮಾಡಿರುವ ಫೋಟೋ ಆ ದೈನೇಸಿ ಸ್ಥಿತಿಗೆ ಸಾಕ್ಷಿ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೆವಾಲಾ ಅವರಿಗೆ ಸರಕಾರದ ಸಭೆಗಳನ್ನು ನಡೆಸುವ ಜವಾಬ್ದಾರಿ, ಅವಕಾಶ ಕೊಟ್ಟವರು ಯಾರು?” ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಶಾಂಗ್ರಿಲಾ ಹೋಟೆಲ್‌ನಲ್ಲಿ ATM ಸರ್ಕಾರದ ಗೌಪ್ಯ ಸಭೆಯ ರಹಸ್ಯವೇನು? ಫೋಟೋ ಸಮೇತ ಪ್ರಶ್ನಿಸಿದ ಬಿಜೆಪಿ

“ಸಭೆಯಲ್ಲಿ ಹಿರಿಯ ಸಚಿವರಿದ್ದಾರೆ. ಹಿರಿಯ ಐಎಎಸ್ ಅಧಿಕಾರಿಗಳೂ ಹಾಜರಿದ್ದಾರೆ. ಅಲ್ಲಿಗೆ ಇದು ಅಧಿಕೃತ ಸಭೆಯೇ ಆಯಿತು. ಆದರೆ, ಅಲ್ಲಿ ಸುರ್ಜೆವಾಲಾ ಸೆಂಟರ್ ಸೀಟಿನಲ್ಲಿದ್ದಾರೆ. ಸಚಿವರು ಸೈಡು ಕುರ್ಚಿಗಳ ಪಾಲಾಗಿದ್ದಾರೆ. ಇದೇನು ವಿಚಿತ್ರ? ಮಾನ್ಯ ಮುಖ್ಯಮಂತ್ರಿಗಳೇ ಉತ್ತರಿಸಬೇಕು” ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ ಟ್ವೀಟ್ ಮಾಡಿದ ಬಿಜೆಪಿ ಕರ್ನಾಟಕ, ಶಾಂಗ್ರಿಲಾ ಹೋಟೆಲ್‌ನಲ್ಲಿ ಎಟಿಎಂ ಸರ್ಕಾರದ ಗೌಪ್ಯ ಸಭೆಯ ರಹಸ್ಯವೇನು ಅಂತ ಪ್ರಶ್ನಿಸಿತ್ತು. ಶಾಂಗ್ರಿಲಾ ಹೋಟೆಲ್‌ನಲ್ಲಿ ಎಟಿಎಂ ಸರ್ಕಾರದ ಗೌಪ್ಯ ಸಭೆಯ ರಹಸ್ಯವೇನು? ಸರ್ಕಾರದೊಟ್ಟಿಗಾಗಲಿ, ಬಿಬಿಎಂಪಿ ಒಟ್ಟಿಗಾಗಲಿ ಸುರ್ಜೇವಾಲಗೆ ಸಂಬಂಧವಿಲ್ಲ. ರಣದೀಪ್​​ ಸುರ್ಜೇವಾಲಗೆ ಬಿಬಿಎಂಪಿ ಉನ್ನತ ಅಧಿಕಾರಿಗಳೊಟ್ಟಿಗೇನು ಕೆಲಸ? ಇದು 85% ಡೀಲ್‌ ಫಿಕ್ಸಿಂಗ್ ಸಭೆಯೇ? ಅಂತ ಪ್ರಶ್ನಿಸಿತ್ತು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ