Swami Prasad Maurya: ಸಮಾಜವಾದಿ ಪಕ್ಷ ತೊರೆದು ಹೊಸ ಪಕ್ಷ ಆರಂಭಿಸಿದ ಸ್ವಾಮಿ ಪ್ರಸಾದ್ ಮೌರ್ಯ

ಗುರುವಾರ ರಾಷ್ಟ್ರೀಯ ಶೋಷಿತ್ ಸಮಾಜ ಪಕ್ಷ ಆರಂಭಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸ್ವಾಮಿ ಪ್ರಸಾದ್ ಮೌರ್ಯ ನಾವು INDI ಮೈತ್ರಿಯನ್ನು ಬಲಪಡಿಸುತ್ತೇವೆ ಎಂದು ಘೋಷಿಸಿದ್ದೇವೆ. ಇಂಡಿಯಾ  ಮೈತ್ರಿಕೂಟದ ನಾಯಕರೊಂದಿಗೆ ಚರ್ಚಿಸಿದ ನಂತರ ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಬೇಕು ಎಂಬುದರ ಕುರಿತು ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

Swami Prasad Maurya: ಸಮಾಜವಾದಿ ಪಕ್ಷ ತೊರೆದು ಹೊಸ ಪಕ್ಷ ಆರಂಭಿಸಿದ ಸ್ವಾಮಿ ಪ್ರಸಾದ್ ಮೌರ್ಯ
ಸ್ವಾಮಿ ಪ್ರಸಾದ್ ಮೌರ್ಯ
Follow us
|

Updated on:Feb 22, 2024 | 4:47 PM

ದೆಹಲಿ ಫೆಬ್ರುವರಿ 22: 2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ, ಸಮಾಜವಾದಿ ಪಕ್ಷದ (SP) ಮಾಜಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ (Swami Prasad Maurya) ಗುರುವಾರ ದೆಹಲಿಯಲ್ಲಿ ತಮ್ಮ ಹೊಸ ರಾಜಕೀಯ ಪಕ್ಷ ರಾಷ್ಟ್ರೀಯ ಶೋಷಿತ್ ಸಮಾಜ ಪಕ್ಷ (RSSP) ಅನ್ನು ಪ್ರಾರಂಭಿಸಿದರು. ಮೌರ್ಯ ಅವರು ತಮ್ಮ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಸಮಾಜವಾದಿ ಪಕ್ಷದೊಂದಿಗೆ ಸಂಬಂಧವನ್ನು ಕಡಿದುಕೊಂಡ ಕೆಲವು ದಿನಗಳ ನಂತರ ರಾಷ್ಟ್ರೀಯ ಶೋಷಿತ್ ಸಮಾಜ ಪಕ್ಷ (ಆರ್‌ಎಸ್‌ಎಸ್‌ಪಿ) ಆರಂಭಿಸಿದ್ದಾರೆ. ಫೆಬ್ರವರಿ 20 ರಂದು, ಮೌರ್ಯ ಸಮಾಜವಾದಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಮತ್ತು ಉತ್ತರ ಪ್ರದೇಶ ವಿಧಾನ ಪರಿಷತ್‌ಗೆ ರಾಜೀನಾಮೆ ನೀಡಿ ಹೊಸ ಪಕ್ಷವನ್ನು ರಚಿಸುವುದಾಗಿ ಘೋಷಿಸಿದರು. ಇದಕ್ಕೂ ಮೊದಲು ಫೆಬ್ರವರಿ 13 ರಂದು, ಮೌರ್ಯ ಅವರು ಸಮಾಜವಾದಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ನಾಯಕತ್ವವು ತನ್ನ ವಿರುದ್ಧ ತಾರತಮ್ಯ ಮಾಡುತ್ತಿದೆ. ರಾಮಚರಿತಮಾನಗಳು ಮತ್ತು ಅಯೋಧ್ಯೆ ದೇವಾಲಯದ ಪ್ರತಿಷ್ಠಾಪನೆ ಸಮಾರಂಭದ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ತನ್ನನ್ನು ಸಮರ್ಥಿಸಲಿಲ್ಲ ಎಂದು ಆರೋಪಿಸಿದ್ದರು.

“ನನಗೆ ನಿಮ್ಮೊಂದಿಗೆ ಕೆಲಸ ಮಾಡಲು ಅವಕಾಶ ಸಿಕ್ಕಿತು. ಆದರೆ ಫೆಬ್ರವರಿ 12 ರಂದು ನಮ್ಮ ಮಾತುಕತೆಗಳು ಮತ್ತು ಫೆಬ್ರವರಿ 13 ರಂದು ನಾನು (ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ) ರಾಜೀನಾಮೆ ನೀಡಿದ ನಂತರ, ನನ್ನೊಂದಿಗೆ ಯಾವುದೇ ಮಾತುಕತೆ ನಡೆಸಲಿಲ್ಲ. ಇದರಿಂದಾಗಿ ನಾನು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆಎಂದು ಮೌರ್ಯ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್‌ಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಅವರು ಇದನ್ನು ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಪತ್ರವನ್ನು ಹಂಚಿಕೊಂಡಿದ್ದಾರೆ.

ಪಕ್ಷ ಆರಂಭಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮೌರ್ಯ ನಾವು INDI ಮೈತ್ರಿಯನ್ನು ಬಲಪಡಿಸುತ್ತೇವೆ ಎಂದು ಘೋಷಿಸಿದ್ದೇವೆ. ಇಂಡಿಯಾ  ಮೈತ್ರಿಕೂಟದ ನಾಯಕರೊಂದಿಗೆ ಚರ್ಚಿಸಿದ ನಂತರ ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಬೇಕು ಎಂಬುದರ ಕುರಿತು ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

ಉತ್ತರ ಪ್ರದೇಶ ವಿಧಾನ ಪರಿಷತ್ತಿನ ಅಧ್ಯಕ್ಷರಿಗೆ ಪ್ರತ್ಯೇಕ ಪತ್ರದಲ್ಲಿ ಮೌರ್ಯ ಅವರು, “ನಾನು ವಿಧಾನ ಪರಿಷತ್ತಿನಲ್ಲಿ ಸಮಾಜವಾದಿ ಪಕ್ಷದ ಸದಸ್ಯನಾಗಿ ಆಯ್ಕೆಯಾಗಿದ್ದೇನೆ, ನಾನು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರಿಂದ, ನಾನು ಸಹ ಎಂಎಲ್ಸಿಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ಹಿಂದೂ ಎಂಬುದು ಧರ್ಮವಲ್ಲ, ಮೋಸ: ಎಸ್​​ಪಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ

ಯಾರಾದರೂ ಸಿದ್ಧಾಂತದ ಮೇಲೆ ದಾಳಿ ಮಾಡಲು ಪ್ರಯತ್ನಿಸಿದಾಗ, ನಾನು ನನ್ನ ಹುದ್ದೆಗಳನ್ನು ತೊರೆಯಲು ಯಾವುದೇ ವಿಳಂಬ ಮಾಡಲಿಲ್ಲ, ಫೆಬ್ರವರಿ 22 ರಂದು ದೆಹಲಿಯ ಟಾಲ್ಕಟೋರಾ ಕ್ರೀಡಾಂಗಣದಲ್ಲಿ ನಾನು ಹೊಸ ಪಕ್ಷವನ್ನು ಘೋಷಿಸಲು ನಿರ್ಧರಿಸಿದ್ದೇನೆ ಮತ್ತು ಕಾರ್ಯಕರ್ತರ ಅಭಿಪ್ರಾಯವನ್ನು ತೆಗೆದುಕೊಂಡು ಅದನ್ನು ಮಾಡುತ್ತೇನೆ ಎಂದು ಅವರು ಹೇಳಿದ್ದರು.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:45 pm, Thu, 22 February 24