ಮಹಾರಾಷ್ಟ್ರದ ನೂತನ ಸಿಎಂ ಆಗಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕಾರ

ಗುರುವಾರ ಮಹಾರಾಷ್ಟ್ರದ ರಾಜಭವನದಲ್ಲಿ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಮತ್ತು ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಮಹಾರಾಷ್ಟ್ರದ ನೂತನ ಸಿಎಂ ಆಗಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕಾರ
ಪ್ರಮಾಣವಚನ ಸ್ವೀಕರಿಸಿದ ಶಿಂಧೆ, ಫಡ್ನವಿಸ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jun 30, 2022 | 8:18 PM

ಮಹಾರಾಷ್ಟ್ರದ (Maharashtra) ನೂತನ ಮುಖ್ಯಮಂತ್ರಿಯಾಗಿ  ಏಕನಾಥ್ ಶಿಂಧೆ (Eknath Shinde) ಮತ್ತು ಉಪಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ (Devendra Fadnavis) ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.ಗುರುವಾರ ಮಧ್ಯಾಹ್ನ ಶಿಂಧೆ ಮತ್ತು ಫಡ್ನವಿಸ್ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸುವ ಹಕ್ಕು ಮಂಡಿಸಿದ್ದರು. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಫಡ್ನವಿಸ್, ಬಿಜೆಪಿಯನ್ನು ಉರುಳಿಸಲು 2019 ರಲ್ಲಿ ಕಾಂಗ್ರೆಸ್ ಮತ್ತು ಎನ್‌ಸಿಪಿ ಜೊತೆ ಕೈಜೋಡಿಸುವ ಮೂಲಕ ಶಿವಸೇನಾ ಸಾರ್ವಜನಿಕ ಜನಾದೇಶವನ್ನು ಅವಮಾನಿಸಿದೆ. ಮಹಾ ವಿಕಾಸ್ ಅಘಾಡಿ ಸರ್ಕಾರದ ಆಳ್ವಿಕೆಯಲ್ಲಿ ಅವರು ಭ್ರಷ್ಟಾಚಾರದ ನಡೆದಿದೆ. ಅದರ ಪರಿಣಾಮ ಇಬ್ಬರು ನಾಯಕರು ಜೈಲಿನಲ್ಲಿದ್ದಾರೆ. ಶಿಂಧೆ ನೇತೃತ್ವದ ಸರ್ಕಾರದ ಭಾಗವಾಗುವುದಿಲ್ಲ, ಆದರೆ ಹೊರಗಿನಿಂದ ಎಲ್ಲಾ ಬೆಂಬಲವನ್ನು ನೀಡುವುದಾಗಿ ಫಡ್ನವಿಸ್ ಈ ಹಿಂದೆ ಹೇಳಿದ್ದರು. ಫಡ್ನವಿಸ್ ಅವರು ಹೀಗೆ ಹೇಳಿದ ನಂತರ ಜೆಪಿ ನಡ್ಡಾ ಅವರು ಫಡ್ನವಿಸ್ ಮಹಾ ಸರ್ಕಾರದ ಭಾಗವಾಗಬೇಕೆಂದು ಬಿಜೆಪಿ ನೇತೃತ್ವ ಬಯಸಿದೆ. ನಾವು ಅವರಲ್ಲಿ ವೈಯಕ್ತಿಕ ಮನವಿ ಮಾಡಿದ್ದೇವೆ ಎಂದು ಹೇಳಿದ್ದರು. ನಡ್ಡಾ ಅವರ ಹೇಳಿಕೆಯ ಬೆನ್ನಲ್ಲೇ ಅಮಿತ್ ಶಾ ನಡ್ಡಾ ಮನವಿಗೆ ಫಡ್ನವಿಸ್ ಒಪ್ಪಿದ್ದಾರೆ.ಅವರು ಸರ್ಕಾರದ ಭಾಗವಾಗಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

“ಇದು ಬಾಳಾಸಾಹೇಬ್ ಠಾಕ್ರೆ ಮತ್ತು ‘ಧರ್ಮವೀರ’ ಆನಂದ್ ದಿಘೆ ಅವರ ಸಿದ್ಧಾಂತದ ವಿಜಯವಾಗಿದೆ. ನಮ್ಮ ಸರ್ಕಾರ ಸಾಮಾನ್ಯ ಜನರ ಹಿತಾಸಕ್ತಿ ಮತ್ತು ರಾಜ್ಯದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತದೆ ಎಂದು ಶಿಂಧೆ ಪ್ರಮಾಣ ವಚನ ಸ್ವೀಕರಿಸಿದ ನಂತರ ಹೇಳಿದರು.

ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಏಕನಾಥ್ ಶಿಂಧೆ ಮತ್ತು ಫಡ್ನವಿಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

“ಮಹಾರಾಷ್ಟ್ರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಏಕನಾಥ್ ಶಿಂಧೆಜೀ ಅವರನ್ನು ನಾನು ಅಭಿನಂದಿಸಲು ಬಯಸುತ್ತೇನೆ. ತಳಮಟ್ಟದ ನಾಯಕ, ಅವರ ಶ್ರೀಮಂತ ರಾಜಕೀಯ, ಶಾಸಕಾಂಗ ಮತ್ತು ಆಡಳಿತಾತ್ಮಕ ಅನುಭವವನ್ನು ತಮ್ಮೊಂದಿಗೆ ತರುತ್ತಾರೆ. ಮಹಾರಾಷ್ಟ್ರವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಅವರು ಕೆಲಸ ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

Published On - 7:44 pm, Thu, 30 June 22

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್