AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಜ್ ಮನೆಯಲ್ಲಿ ಸಿದ್ದರಾಮಯ್ಯ ನಡೆಸಿದ ಲೀಲೆಗಳೇನು? ಬಹಿರಂಗಪಡಿಸುವಂತೆ ಕುಮಾರಸ್ವಾಮಿ ಸವಾಲ್

ಕಾವೇರಿ ನಿವಾಸದಲ್ಲಿ ವಾಸ್ತವ್ಯ ಹಾಗೂ ಕುಣಿಯಲಾರದವರಿಗೆ ನೆಲ ಡೊಂಕು ಎಂದು ಲೇವಡಿ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮಾಜಿ ಸಿಎಂ ವಿಜಯದಶಮಿ ದಿನದಂದು ಬೆಳ್ಳಂಬೆಳಗ್ಗೆ ಕುಮಾರಸ್ವಾಮಿ ಚಾಟಿ ಬೀಸಿದ್ದಾರೆ. ಅಲ್ಲದೇ ಕೆಜೆ ಜಾರ್ಜ್ ಮನೆಯಲ್ಲಿ ತಾವು ನಡೆಸಿದ ಸಿದ್ದಲೀಲೆ ಬಹಿರಂಗ ಮಾಡುವಿರಾ? ಎಂದು ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ.

ಜಾರ್ಜ್ ಮನೆಯಲ್ಲಿ ಸಿದ್ದರಾಮಯ್ಯ ನಡೆಸಿದ ಲೀಲೆಗಳೇನು? ಬಹಿರಂಗಪಡಿಸುವಂತೆ ಕುಮಾರಸ್ವಾಮಿ ಸವಾಲ್
ಸಿದ್ದರಾಮಯ್ಯ-ಕುಮಾರಸ್ವಾಮಿ
ರಮೇಶ್ ಬಿ. ಜವಳಗೇರಾ
|

Updated on:Oct 24, 2023 | 8:19 AM

Share

ಬೆಂಗಳೂರು, (ಅಕ್ಟೋಬರ್ 24): ಕುಣಿಯಲಾರದವರಿಗೆ ನೆಲ ಡೊಂಕು ಎಂದು ಲೇವಡಿ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರಿಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ವಾಗ್ದಾಳಿ ನಡೆಸಿದ್ದಾರೆ. ವಿಜಯದಶಮಿ ದಿನದಂದು ಬೆಳ್ಳಂಬೆಳಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕುಣಿಯಲಾರದವನಿಗೆ ನೆಲ ಡೊಂಕು ಎನ್ನುವ ಮಾತೇನೋ ಸರಿ, ಕುಣಿಯಲು ಬಿಟ್ಟು ನೆಲ ಅಗೆಯುವ ‘ಮೈತ್ರಿದ್ರೋಹ’ಕ್ಕೆ ಏನು ಹೇಳುವುದು? ದೋಖಾ ದುರುದ್ದೇಶವಾಗಿದ್ದಾಗ ನೆಲ ಡೊಂಕು ಮಾಡುವುದು ಕಷ್ಟವೇ? ಧೈರ್ಯವಾಗಿ, ನೇರವಾಗಿ ಸತ್ಯ ಹೇಳಲು ಭಯವೇ ಹೇಳಿ ಎಂದು ತಿರುಗೇಟು ನೀಡಿದ್ದಾರೆ.

ಕುಣಿಯಲಾರದವನಿಗೆ ನೆಲ ಡೊಂಕು ಎನ್ನುವ ಮಾತೇನೋ ಸರಿ. ಆದರೆ, ಕುಣಿಯಲು ಬಿಟ್ಟು ನೆಲ ಅಗೆಯುವ ನಿಮ್ಮ ‘ಮೈತ್ರಿದ್ರೋಹ’ಕ್ಕೆ ಏನು ಹೇಳುವುದು, ಸಿದ್ದರಾಮಯ್ಯನವರೇ ? ದೋಖಾ ಮಾಡುವುದೇ ದುರುದ್ದೇಶವಾಗಿದ್ದಾಗ ನೆಲವನ್ನು ಡೊಂಕು ಮಾಡುವುದು ಕಷ್ಟವೇ? ‘ಮೀರುಸಾದಿಕ’ನ ಆಧುನಿಕ ಅವತಾರಿ ಆಗಿರುವ ನಿಮಗೆ ಇಂಥ ಕ್ಷುದ್ರವಿದ್ಯೆಗಳೆಲ್ಲ ಕರತಲಾಮಲಕ. ಅದನ್ನೇ ನೀವು ಸುತ್ತಿಬಳಸಿ ಹೇಳುತ್ತಿದ್ದೀರಿ. ಧೈರ್ಯವಾಗಿ, ನೇರವಾಗಿ ಸತ್ಯ ಹೇಳಲು ಭಯವೇ? ಹೇಳಿ, ಕುಮಾರಸ್ವಾಮಿ ಸರಕಾರವನ್ನು ತೆಗೆದಿದ್ದು ನಾನೇ ಎಂದು ಹೇಳಲು ನಿಮಗೆ ಗುಂಡಿಗೆ ಸಾಲದೇ? ಎಂದು ಚಾಟಿ ಬೀಸಿದ್ದಾರೆ.

ಇದನ್ನೂ ಓದಿ: ಹೆಚ್​ಡಿ ಕುಮಾರಸ್ವಾಮಿಯೇ ಕೃತಕ ಎಂದು ಟೀಕಿಸಿದ ಸಿಎಂ ಸಿದ್ದರಾಮಯ್ಯ: ಕಾರಣವೇನು?

ಸಿದ್ಧವನದಲ್ಲಿ ಹೆಣೆದ ಸಿದ್ದಸೂತ್ರ ನನಗೆ ಗೊತ್ತಿಲ್ಲದ ಚಿದಂಬರ ರಹಸ್ಯವೇ? ಬೆಕ್ಕು ಕಣ್ಮುಚ್ಚಿ, ಕದ್ದು ಹಾಲು ಕುಡಿದರೆ ಅನ್ಯರಿಗೆ ಕಾಣದು ಎನ್ನುವಷ್ಟು ಕಿಲಾಡಿತನವೇ? ಇದು ಕಿಲಾಡಿತನವೋ ಅಥವಾ ಕಿಡಿಗೇಡಿತನವೋ? ತಮ್ಮ ಇಂಥ ಸಿದ್ದಲೀಲೆಗಳು ನಮಗೇನೂ ಹೊಸತಲ್ಲ. ಯಡಿಯೂರಪ್ಪ ಅವರು ಕಾವೇರಿಯನ್ನು ಖಾಲಿ ಮಾಡಲಿಲ್ಲ ಸರಿ, ಜಾರ್ಜ್ ಅವರಿಗೆ ಹಂಚಿಕೆ ಆಗಿದ್ದ ನಿವಾಸದಲ್ಲಿ ನೀವು ಯಾಕೆ ಇದ್ದಿರಿ? ಪಾಪ.. ಅನ್ಯರ ಹಂಗೇಕೆ ಬೇಕಿತ್ತು ನಿಮಗೆ? ಮಾಜಿ ಮುಖ್ಯಮಂತ್ರಿಗಳಿಗೆ ಪ್ರತ್ಯೇಕ ಭಂಗಲೆಯನ್ನೇ ಹಂಚಿಕೆ ಮಾಡುತ್ತಿದ್ದೆವು. ನೀವು ಕೇಳಬಹುದಿತ್ತು. ಕುತಂತ್ರ, ಕುಯುಕ್ತಿಯೇ ಸಿದ್ದಸೂತ್ರ ಆಗಿರುವಾಗ ಭಂಗಲೆ ಬಿಟ್ಟುಕೊಡುವಷ್ಟು ಉದಾರತೆ ನಿಮಗೆ ಎಲ್ಲಿಂದ ಬರಬೇಕು? ಎಂದು ಕಿಡಿಕಾರಿದ್ದಾರೆ.

ಬಿ.ಎಸ್​.ಯಡಿಯೂರಪ್ಪ ಕಾವೇರಿ ನಿವಾಸ ಖಾಲಿ ಮಾಡಲಿಲ್ಲ ಸರಿ. ಜಾರ್ಜ್ ಅವರಿಗೆ ಹಂಚಿಕೆ ಆಗಿದ್ದ ನಿವಾಸದಲ್ಲಿ ನೀವು ಯಾಕೆ ಇದ್ದಿರಿ? ಪಾಪ.. ಅನ್ಯರ ಹಂಗೇಕೆ ಬೇಕಿತ್ತು ನಿಮಗೆ? ಮಾಜಿ ಮುಖ್ಯಮಂತ್ರಿಗಳಿಗೆ ಪ್ರತ್ಯೇಕ ಭಂಗಲೆನೇ ಹಂಚಿಕೆ ಮಾಡುತ್ತಿದ್ದೆವು. ಇಷ್ಟಕ್ಕೂ ಇನ್ನೊಬ್ಬರು ಇದ್ದ, ಅದರಲ್ಲೂ ನನ್ನ ಸಂಪುಟದಲ್ಲಿ ಸಚಿವರಾಗಿದ್ದವರಿಗೆ ಹಂಚಿಕೆ ಆಗಿದ್ದ ಭಂಗಲೆಯಲ್ಲಿ ಸೇರಿಕೊಳ್ಳುವುದು ಸಮಾಜವಾದಿಗೆ ಅದೆಂಥ ಸಭ್ಯತೆ? ಅದೆಂಥ ಶೋಭೆ? ಛೀ! ಛೀ! ವೆಸ್ಟ್ ಎಂಡ್ ನಲ್ಲಿ ಇದ್ದ ಕಾರಣವನ್ನು ನಾನು ಈಗಾಗಲೇ ತಿಳಿಸಿದ್ದೇನೆ, ನೂರಾರು ಸಲ. ಆದರೆ, ಜಾರ್ಜ್ ಮನೆಯಲ್ಲಿ ತಾವು ನಡೆಸಿದ ಸಿದ್ದಲೀಲೆಯನ್ನು ಬಹಿರಂಗ ಮಾಡುವಿರಾ? ನಿಮ್ಮ ಅಂತರಂಗವನ್ನು ಒಮ್ಮೆಯಾದರೂ ಬಹಿರಂಗ ಮಾಡಿ ಸಿದ್ದರಾಮಯ್ಯನವರೇ ಎಂದು ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:19 am, Tue, 24 October 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ