AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ, ಮೇಕೆದಾಟು ವಿವಾದದ ನಡುವೆ ದೆಹಲಿಯಲ್ಲಿ ಡಿಕೆಶಿ ಜೊತೆ ಕಾಣಿಸಿಕೊಂಡ ವಿಜಯ್​​: ತಮಿಳುನಾಡು ವಿಪಕ್ಷಗಳಿಂದ ತೀವ್ರ ಟೀಕೆ

ಕಾವೇರಿ ಮತ್ತು ಮೇಕೆದಾಟು ವಿವಾದದ ನಡುವೆಯೇ ದೆಹಲಿಯಲ್ಲಿ ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ತಮಿಳುನಾಡು ಸಿಎಂ ವಿಜಯ್ ಕಾಣಿಸಿಕೊಂಡಿರುವುದಕ್ಕೆ ಎಐಎಡಿಎಂಕೆ ಮತ್ತು ಡಿಎಂಕೆ ಪಕ್ಷಗಳು ತೀವ್ರ ವಾಗ್ದಾಳಿ ನಡೆಸಿ, ತಮಿಳುನಾಡಿನ ಹಿತಾಸಕ್ತಿಗೆ ದ್ರೋಹ ಬಗೆದಿದ್ದಾರೆ ಎಂದು ಆರೋಪಿಸಿವೆ. ಇದು ರಾಜ್ಯದ ಕೋಟ್ಯಂತರ ಜನರ ಬದುಕಿಗೆ ಸಂಬಂಧಿಸಿದ ವಿಚಾರ ಎಂದಿವೆ.

ಕಾವೇರಿ, ಮೇಕೆದಾಟು ವಿವಾದದ ನಡುವೆ ದೆಹಲಿಯಲ್ಲಿ ಡಿಕೆಶಿ ಜೊತೆ ಕಾಣಿಸಿಕೊಂಡ ವಿಜಯ್​​: ತಮಿಳುನಾಡು ವಿಪಕ್ಷಗಳಿಂದ ತೀವ್ರ ಟೀಕೆ
ಡಿಕೆಶಿ ಸೇರಿ ಕಾಂಗ್ರೆಸ್​​ ನಾಯಕರ ಜೊತೆ ತಮಿಳುನಾಡು ಸಿಎಂ ವಿಜಯ್​​Image Credit source: PTI
ಪ್ರಸನ್ನ ಹೆಗಡೆ
|

Updated on: Nov 17, 2026 | 5:48 PM

Share

ಚೆನ್ನೈ, ನವೆಂಬರ್​​ 17: ಕರ್ನಾಟಕದ ಕಾಂಗ್ರೆಸ್ ನಾಯಕರೊಂದಿಗಿನ ಭೇಟಿಯ ವೇಳೆ ಮೆಕೆದಾಟು ವಿಚಾರ ಪ್ರಸ್ತಾಪಿಸದ ಮುಖ್ಯಮಂತ್ರಿ ವಿಜಯ್, ತಮಿಳುನಾಡಿನ ಜನರಿಗೆ ದ್ರೋಹ ಎಸಗಿದ್ದಾರೆ ಎಂದು ಎಐಎಡಿಎಂಕೆ ಆರೋಪಿಸಿದೆ. ಅಧಿಕಾರಕ್ಕೆ ತಂದ ತಮಿಳುನಾಡಿನ ಜನರಿಗೆ ಇದು ಅವರು ಮಾಡಿದ ದ್ರೋಹವಾಗಿದ್ದು, ಪ್ರತಿಯೊಬ್ಬ ತಮಿಳರಿಗರ ಬೆನ್ನಿಗೆ ಚೂರಿ ಹಾಕಿದ್ದಾರೆ. ಕಾಂಗ್ರೆಸ್‌ನ ಕೃಪೆಯಿಂದಲೇ ಅವರು ಸರ್ಕಾರ ನಡೆಸುತ್ತಿದ್ದು, ಕಾಂಗ್ರೆಸ್ ಬೆಂಬಲ ಹಿಂಪಡೆದರೆ ಸರ್ಕಾರ ನಡೆಸಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಅದರ ವಿರುದ್ಧ ಧ್ವನಿ ಎತ್ತಲು ವಿಜಯ್​ ಅವರಿಗೆ ಧೈರ್ಯವಿಲ್ಲ. ತಮಿಳುನಾಡಿನ ಹಕ್ಕುಗಳನ್ನು ರಕ್ಷಿಸುವುದಕ್ಕಿಂತ ಮುಖ್ಯಮಂತ್ರಿ ಕುರ್ಚಿಯಲ್ಲಿ ಉಳಿಯುವುದೇ ಅವರಿಗೆ ಆದ್ಯತೆಯಾಗಿದೆ. ವಿಜಯ್ ಅವರು ಬೆನ್ನೆಲುಬಿಲ್ಲದ ಮುಖ್ಯಮಂತ್ರಿಯಾಗಿದ್ದಾರೆ ಎಂದು ಎಐಎಡಿಎಂಕೆ ವಾಗ್ದಾಳಿ ನಡೆಸಿದೆ.

‘ವಿಜಯ್ ಸಿನಿಮಾ ಶೈಲಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ’

ಸೋಮವಾರ ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರ ಆತ್ಮಕಥನ ‘ಬಿಲಾಂಗಿಂಗ್; ಎ ಜರ್ನಿ ಆಫ್ ಲವ್’ ಆತ್ಮಕತೆ ಬಿಡುಗಡೆ ಕಾರ್ಯಕ್ರಮದಲ್ಲಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಮುಖ್ಯಮಂತ್ರಿಗಳು ಭೇಟಿಯಾಗಿದ್ದರು. ಈ ಭೇಟಿಗೆ ತಮಿಳುನಾಡಿನ ಪ್ರತಿಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗಿದೆ. ಮೇಕೆದಾಟು ವಿಚಾರದಲ್ಲಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ‘ಸಿನಿಮಾ ಶೈಲಿ’ಯಲ್ಲಿ ನಡೆದುಕೊಳ್ಳುತ್ತಿದ್ದಾರೆ ಎಂದು ಪ್ರತಿಪಕ್ಷ ಡಿಎಂಕೆ ಕೂಡ ಕಿಡಿ ಕಾರಿದೆ. ಇದು ರಾಜ್ಯದ ಕೋಟ್ಯಂತರ ಜನರ ಬದುಕಿಗೆ ಸಂಬಂಧಿಸಿದ ವಿಚಾರವಾಗಿದ್ದು, ಏಕಾಂಗಿಯಾಗಿ ನಿರ್ಧಾರ ಕೈಗೊಳ್ಳುವ ಬದಲು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಹೇಳಿದೆ.

ಇದನ್ನೂ ಓದಿ: ‘ನನ್ನ ಕುಟುಂಬದ ಕುರಿತ ಸುಳ್ಳು ಸಂಗತಿಗಳಿಂದ ನೋವಾಗಿತ್ತು’; ಆತ್ಮಕತೆ ಬರೆಯಲು ಕಾರಣ ಬಿಚ್ಚಿಟ್ಟ ಸೋನಿಯಾ ಗಾಂಧಿ

ಕರ್ನಾಟಕ ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ

ಡಿಎಂಕೆಯ ತಮಿಳು ಮುಖವಾಣಿ ‘ಮುರಸೋಲಿ’ಯಲ್ಲಿ ಕರ್ನಾಟಕ ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಲಾಗಿದ್ದು, ಇತರ ಹಲವು ಸಮಸ್ಯೆಗಳಿರುವಾಗ ಮೇಕೆದಾಟು ವಿಚಾರದಲ್ಲಿ ರಾಜಕೀಯ ಮಾಡುವ ಅಗತ್ಯವೇನಿದೆ ಎಂದು ಪ್ರಶ್ನಿಸಲಾಗಿದೆ. ಮೆಕೆದಾಟು ಅಣೆಕಟ್ಟು ನಿರ್ಮಾಣ ಮಾಡುವುದೇ ತಮ್ಮ ಜೀವನದ ಏಕೈಕ ಗುರಿ ಎಂಬಂತೆ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡುತ್ತಿದ್ದಾರೆ ಎಂದು ಡಿಎಂಕೆ ಪತ್ರಿಕೆ ಟೀಕಿಸಿದೆ.

ಮೆಕೆದಾಟು ವಿಚಾರ ಯಾವುದೇ ಸಿನಿಮಾವಲ್ಲ. ಇದು ಕೋಟ್ಯಂತರ ತಮಿಳರ ಜೀವನೋಪಾಯಕ್ಕೆ ಸಂಬಂಧಿಸಿದ ವಿಷಯ. ಇಂತಹ ಗಂಭೀರ ವಿಚಾರದಲ್ಲಿ ಸಿನಿಮಾ ಡೈಲಾಗ್‌ಗಳನ್ನು ಹೇಳುತ್ತಾ ಆರು ತಿಂಗಳ ಕಾಲ ವ್ಯರ್ಥ ಮಾಡಿದ್ದಾರೆ. ಮೆಕೆದಾಟು ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ನಡೆದುಕೊಳ್ಳಬೇಕು. ಸಿನಿಮಾಗಳಲ್ಲಿ ಬೇಕಾದರೆ ಏಕಾಂಗಿಯಾಗಿ ನಟಿಸಲಿ. ಆದರೆ, ಮುಖ್ಯಮಂತ್ರಿಯಾಗಿ ಕಾವೇರಿ ಮತ್ತು ಮೆಕೆದಾಟುವಿನಂತಹ ರಾಜ್ಯದ ಪ್ರಮುಖ ವಿಚಾರಗಳಲ್ಲಿ ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಬೇಕು ಎಂದು ಮುರಸೋಲಿ ಪತ್ರಿಕೆ ಮುಖಾಂತರ ಡಿಎಂಕೆ ಅಭಿಪ್ರಾಯಪಟ್ಟಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದಾರೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
‘ಪ್ರೇಮದ ಊರಲಿ’ ಸಿನಿಮಾದ ಯಶಸ್ಸಿನ ಬಗ್ಗೆ ರಂಗಾಯಣ ರಘು ಪತ್ನಿ ಮನದ ಮಾತು
‘ಪ್ರೇಮದ ಊರಲಿ’ ಸಿನಿಮಾದ ಯಶಸ್ಸಿನ ಬಗ್ಗೆ ರಂಗಾಯಣ ರಘು ಪತ್ನಿ ಮನದ ಮಾತು
ಮಂಜನನ್ನೇ ನಾಮಿನೇಟ್ ಮಾಡಿ ಸಗಣಿ ಸುರಿದ ‘ಮಂಜಿ’: ವಿಡಿಯೋ
ಮಂಜನನ್ನೇ ನಾಮಿನೇಟ್ ಮಾಡಿ ಸಗಣಿ ಸುರಿದ ‘ಮಂಜಿ’: ವಿಡಿಯೋ
RDPR ಪರೀಕ್ಷೆಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ಇಡಿ
RDPR ಪರೀಕ್ಷೆಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ಇಡಿ
ಬಿಎಂಟಿಸಿ ಬಸ್‌ಗಳಲ್ಲಿ ತಂಬಾಕು ಜಾಹೀರಾತು ನಿಷೇಧಕ್ಕೆ ಕ್ರಮ: ಖಾದರ್
ಬಿಎಂಟಿಸಿ ಬಸ್‌ಗಳಲ್ಲಿ ತಂಬಾಕು ಜಾಹೀರಾತು ನಿಷೇಧಕ್ಕೆ ಕ್ರಮ: ಖಾದರ್
ಮೀನು ರಪ್ತು ವಾಹನದಲ್ಲಿ ಸಾಗಿಸುತ್ತಿದ್ದ 35 ಲಕ್ಷ ಮೌಲ್ಯದ ಲಿಕ್ಕರ್​ ಜಪ್ತಿ
ಮೀನು ರಪ್ತು ವಾಹನದಲ್ಲಿ ಸಾಗಿಸುತ್ತಿದ್ದ 35 ಲಕ್ಷ ಮೌಲ್ಯದ ಲಿಕ್ಕರ್​ ಜಪ್ತಿ
ಕಾಂಗ್ರೆಸ್ ನಾಯಕರ ವೈಯಕ್ತಿಕ ಟೀಕೆಗೆ ಯದುವೀರ್ ಒಡೆಯರ್ ಖಡಕ್ ತಿರುಗೇಟು
ಕಾಂಗ್ರೆಸ್ ನಾಯಕರ ವೈಯಕ್ತಿಕ ಟೀಕೆಗೆ ಯದುವೀರ್ ಒಡೆಯರ್ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ಸೌಜನ್ಯ ಪ್ರಕರಣ: ತನಿಖೆಗಾಗಿ ಎಸ್​ಐಟಿಯಿಂದ ಮೆಡಿಕಲ್ ಬೋರ್ಡ್ ರಚನೆ
ಸೌಜನ್ಯ ಪ್ರಕರಣ: ತನಿಖೆಗಾಗಿ ಎಸ್​ಐಟಿಯಿಂದ ಮೆಡಿಕಲ್ ಬೋರ್ಡ್ ರಚನೆ
ದೆಹಲಿಯಲ್ಲಿ ತಮಿಳುನಾಡು ಸಿಎಂ ವಿಜಯ್​ ಜೊತೆ ಸಿಎಂ ಡಿಕೆಶಿ ಚರ್ಚಿಸಿದ್ದೇನು?
ದೆಹಲಿಯಲ್ಲಿ ತಮಿಳುನಾಡು ಸಿಎಂ ವಿಜಯ್​ ಜೊತೆ ಸಿಎಂ ಡಿಕೆಶಿ ಚರ್ಚಿಸಿದ್ದೇನು?
ಬೇಲೂರಿನ ಕೋಗಿಲಮನೆ ಬಳಿ 30ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ
ಬೇಲೂರಿನ ಕೋಗಿಲಮನೆ ಬಳಿ 30ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ