AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಜೆಪಿ ನಡ್ಡಾ ಸಮ್ಮುಖದಲ್ಲಿ ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ 11 ಎಐಎಡಿಎಂಕೆ ನಾಯಕರು

ಎಐಎಡಿಎಂಕೆಯ ಉಚ್ಛಾಟಿತ ನಾಯಕ ಓ ಪನ್ನೀರಸೆಲ್ವಂ, ಎಎಂಎಂಕೆಯ ಟಿಟಿವಿ ದಿನಕರನ್ ಮತ್ತು ಎಐಎಡಿಎಂಕೆಯ ಪ್ರಬಲ ಮಿತ್ರಪಕ್ಷಗಳಾಗಿದ್ದ ಡಿಎಂಡಿಕೆ, ಪಿಎಂಕೆ ಜತೆ ಕೈಜೋಡಿಸಿ ತಮಿಳುನಾಡಿನಲ್ಲಿ ತೃತೀಯ ರಂಗ ರಚನೆಗೆ ಬಿಜೆಪಿ ಪ್ರಯತ್ನ ನಡೆಸುತ್ತಿದೆ. ಆದಾಗ್ಯೂ,ಬಿಜೆಪಿ ಮತ್ತು ಎಐಎಡಿಎಂಕೆ ರಾಷ್ಟ್ರಮಟ್ಟದಲ್ಲಿ ಸೌಹಾರ್ದ ಹೊಂದಿದ್ದರೂ, ಸ್ಥಳೀಯ ಮಟ್ಟದಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ನಡುವೆ ತೀವ್ರ ಸಂಘರ್ಷವಿದೆ.

ತಮಿಳುನಾಡು: ಜೆಪಿ ನಡ್ಡಾ ಸಮ್ಮುಖದಲ್ಲಿ ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ 11 ಎಐಎಡಿಎಂಕೆ ನಾಯಕರು
ಅಣ್ಣಾಮಲೈ- ಇಪಿಎಸ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 05, 2024 | 8:52 PM

Share

ಚೆನ್ನೈ ಫೆಬ್ರುವರಿ 05: ಎಐಎಡಿಎಂಕೆ (AIADMK) ಮತ್ತು ತಮಿಳುನಾಡು (Tamil Nadu)ಬಿಜೆಪಿ (BJP) ನಡುವಿನ ಆಂತರಿಕ ಸಂಘರ್ಷ ಉತ್ತುಂಗಕ್ಕೇರಿರುವ ಸಮಯದಲ್ಲಿ, ಮಾಜಿ ಶಾಸಕರು ಸೇರಿದಂತೆ ಕನಿಷ್ಠ 11 ಎಐಎಡಿಎಂಕೆ ನಾಯಕರು ಬಿಜೆಪಿ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ನ್ಯೂಸ್ 9 ವರದಿ ಮಾಡಿದೆ. ಫೆಬ್ರವರಿ 7 ರಂದು ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಕರೂರ್‌ನ ಮಾಜಿ ಎಐಎಡಿಎಂಕೆ ಶಾಸಕ ಕೆ ವಡಿವೇಲ್ ಮತ್ತು ಕೊಂಗು ಪ್ರದೇಶ ಮತ್ತು ಉತ್ತರ ಜಿಲ್ಲೆಗಳ ಎಐಎಡಿಎಂಕೆ ನಾಯಕರ ಗುಂಪು ಬಿಜೆಪಿಗೆ ಸೇರ್ಪಡೆಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

ತಮಿಳುನಾಡಿನಲ್ಲಿ ಬಿಜೆಪಿ ತೃತೀಯ ರಂಗ ರಚನೆಗೆ ಪ್ರಯತ್ನ

ತಮ್ಮ ದೀರ್ಘಕಾಲದ ಪಾಲುದಾರ ಎಐಎಡಿಎಂಕೆ ಜೊತೆಗಿನ ಸಂಬಂಧ ಕೊನೆಗೊಂಡ ನಂತರ 2024 ರ ಲೋಕಸಭೆ ಚುನಾವಣೆಗೆ ಡಿಎಂಕೆ ಮತ್ತು ಎಐಎಡಿಎಂಕೆ ಹೊರತಾಗಿ ಮೂರನೇ ರಂಗವನ್ನು ರಚಿಸುವ ಧ್ಯೇಯದೊಂದಿಗೆ ಬಿಜೆಪಿ ತಮಿಳುನಾಡಿನಲ್ಲಿ ಲೋಕಸಭೆ ಚುನಾವಣೆಗೆ ಸಜ್ಜಾಗಿದೆ.

ಎಐಎಡಿಎಂಕೆಯ ಉಚ್ಛಾಟಿತ ನಾಯಕ ಓ ಪನ್ನೀರಸೆಲ್ವಂ, ಎಎಂಎಂಕೆಯ ಟಿಟಿವಿ ದಿನಕರನ್ ಮತ್ತು ಎಐಎಡಿಎಂಕೆಯ ಪ್ರಬಲ ಮಿತ್ರಪಕ್ಷಗಳಾಗಿದ್ದ ಡಿಎಂಡಿಕೆ, ಪಿಎಂಕೆ ಜತೆ ಕೈಜೋಡಿಸಿ ತಮಿಳುನಾಡಿನಲ್ಲಿ ತೃತೀಯ ರಂಗ ರಚನೆಗೆ ಬಿಜೆಪಿ ಪ್ರಯತ್ನ ನಡೆಸುತ್ತಿದೆ.

ಗಮನಿಸಬೇಕಾದ ಅಂಶವೆಂದರೆ, ಬಿಜೆಪಿ ಮತ್ತು ಎಐಎಡಿಎಂಕೆ ರಾಷ್ಟ್ರಮಟ್ಟದಲ್ಲಿ ಸೌಹಾರ್ದ ಹೊಂದಿದ್ದರೂ, ಸ್ಥಳೀಯ ಮಟ್ಟದಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ನಡುವೆ ತೀವ್ರ ಸಂಘರ್ಷವಿದೆ. ಬಿಜೆಪಿ ನಾಯಕ ಅಣ್ಣಾಮಲೈ ಅವರು ಎಐಎಡಿಎಂಕೆ ಮಾಜಿ ವರಿಷ್ಠೆ ಜಯಲಲಿತಾ ಮತ್ತು ದ್ರಾವಿಡ ದಿಗ್ಗಜ ಸಿಎನ್ ಅಣ್ಣಾದೊರೈ ವಿರುದ್ಧ ಮಾಡಿದ ಕೆಲವು ಭಾಷಣಗಳಿಂದಾಗಿ ಎಐಎಡಿಎಂಕೆ ಮತ್ತು ಬಿಜೆಪಿ ನಡುವಿನ ಸಂಘರ್ಷವು ಉತ್ತುಂಗದಲ್ಲಿದೆ.

ಬಿಜೆಪಿಯೊಂದಿಗೆ ಮೈತ್ರಿ ಇಲ್ಲ ಎಂದ ಇಪಿಎಸ್

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಇತ್ತೀಚೆಗೆ ಪಕ್ಷದ ಸಭೆಯಲ್ಲಿ ಬಿಜೆಪಿಯೊಂದಿಗೆ ಇನ್ನು ಮುಂದೆ ಯಾವುದೇ ಮೈತ್ರಿ ಇಲ್ಲ ಎಂದು ಪುನರುಚ್ಚರಿಸಿದ್ದರು. ತಕ್ಷಣವೇ ಈ ನಿರ್ಧಾರಕ್ಕೆ ಅನುಮೋದನೆಯ ಸಂಕೇತವಾಗಿ ಸಾಮಾನ್ಯ ಪರಿಷತ್ ಸದಸ್ಯರು ಇಪಿಎಸ್‌ ನಿರ್ಧಾರಕ್ಕೆ ಹರ್ಷ ವ್ಯಕ್ತಪಡಿಸಿದರು.

ಇದನ್ನೂ ಓದಿ: ತಮಿಳುನಾಡು: ಚಲಿಸುತ್ತಿರುವ ಬಸ್​ನಿಂದ ತಳ್ಳಿದ ಪತಿ, ಗರ್ಭಿಣಿ ಸಾವು

ಏತನ್ಮಧ್ಯೆ, ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಅವರು ಸೋಮವಾರ ಚೆನ್ನೈನಲ್ಲಿ ಬಿಜೆಪಿಯ ಸಂಸತ್ ಚುನಾವಣೆಯ ರಾಜ್ಯ ಪ್ರಧಾನ ಕಚೇರಿಯನ್ನು ಉದ್ಘಾಟಿಸಿದ ನಂತರ “2024 ರ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಅವರ ಸ್ಥಾನಕ್ಕೆ ಯಾವುದೇ ಅಭ್ಯರ್ಥಿಗಳಿಲ್ಲ” ಎಂದು ಹೇಳಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!