ಸಚಿವ ಜಮೀರ್ ಅಹಮ್ಮದ್ ಖಾನ್ ತಂಗಿದ್ದ ಹೋಟೆಲ್​​ ಮೇಲೆ ಪೊಲೀಸ್ ದಾಳಿ

ತೆಲಂಗಾಣ ವಿಧಾನಸಭೆ ಚುನಾವಣೆಯ ಪ್ರಚಾರ ಕಾವು ರಂಗೇರಿದ್ದು, ಕರ್ನಾಟಕದ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಭರ್ಜರಿ ಮತ ಬೇಟೆ ನಡೆಸಿದ್ದಾರೆ. ಇನ್ನು ಸಚಿವ ಜಮೀರ್ ಅಹಮ್ಮದ್ ಖಾನ್ ತಂಗಿದ್ದ ಹೋಟೆಲ್​ ಮೇಲೆ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಸಚಿವ ಜಮೀರ್ ಅಹಮ್ಮದ್ ಖಾನ್ ತಂಗಿದ್ದ ಹೋಟೆಲ್​​ ಮೇಲೆ ಪೊಲೀಸ್ ದಾಳಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Nov 23, 2023 | 8:21 AM

ಹೈದರಾಬಾದ್, (ನವೆಂಬರ್ 23): ತೆಲಂಗಾಣದಲ್ಲಿ ವಿಧಾನಸಬೆ ಚುನಾವಣೆ (telangana assembly election 2023) ರಂಗೇರಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಕರ್ನಾಟಕದ ನಾಯಕರು (Karnataka Leaders) ಸಹ ತೆರಳಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್​ ನಾಯಕರು ಸಹ ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಭರ್ಜರಿ ಕ್ಯಾಂಪೇನ್ ಮಾಡುತ್ತಿದ್ದಾರೆ. ಅದರಂತೆ ಸಚಿವ ಜಮೀರ್ ಅಹಮ್ಮದ್ ಖಾನ್ (zameer ahmed khan ಮತ ಬೇಟೆ ನಡೆಸಿದ್ದಾರೆ. ಇದರ ಮಧ್ಯೆ ಜಮೀರ್ ತಂಗಿದ್ದ ಹೋಟೆಲ್​ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಜಮೀರ್ ಅಹಮ್ಮದ್ ಖಾನ್ ಉಳಿದುಕೊಂಡಿದ್ದ ಹೈದರಾಬಾದ್ ನಗರದ ಪಾರ್ಕ್ ಹಯಾತ್ ಹೋಟೆಲ್ ಮೇಲೆ ನಿನ್ನೆ(ನವೆಂಬರ್ 22) ತಡರಾತ್ರಿ ದಾಳಿಯಾಗಿದೆ.

ಚುನಾವಣೆಗೆ ಅಕ್ರಮ ಹಣ ವರ್ಗಾವಣೆ ಶಂಕೆ ಮೇರೆ ಪೊಲೀಸರು ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಇನ್ನು ಈ ಬಗ್ಗೆ ಜಮೀರ್ ಅಹಮ್ಮದ್ ಖಾನ್ ಸಾಮಾಜಿ ಜಾಲತಾಣಗಳಲ್ಲಿ ಸ್ಪಷ್ಟನೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ಉಳಿದುಕೊಂಡಿರುವ ಹೈದರಾಬಾದ್ ನಗರದ ಪಾರ್ಕ್ ಹಯಾತ್ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆದ್ರೆ, ಅವರಿಗೆ ಏನು ಸಿಕ್ಕಿಲ್ಲ. ತೆಲಂಗಾಣದಲ್ಲಿಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದ ಹಿನ್ನೆಲೆಯಲ್ಲಿ ಕೇಂದ್ರದಲ್ಲಿ ಬಿಜೆಪಿ ಮತ್ತು ರಾಜ್ಯದ ಬಿಆರ್‌ಎಸ್ ಸರ್ಕಾರ ಹತಾಶೆಗೊಂಡಿದ್ದು, ಜಂಟಿ ರಾಜಕೀಯ ದಾಳಿ ನಡೆಸಿವೆ. ಇದು ನಮ್ಮನ್ನು ಹೆದರಿಸಿ ಹಿಂದಕ್ಕೆ ಕಳುಹಿಸುವ ತಂತ್ರವಾಗಿದೆ. ಆದರೆ ನಾವು ಇದಕ್ಕೆ ಹೆದರುವುದಿಲ್ಲ ಎಂದು ಬರೆದುಕೊಂಡಿದ್ದಾರೆ.

ಇನ್ನು ಮೊನ್ನೇ ಅಷ್ಟೇ ಗೌರಿಬಿದನೂರು ಕಾಂಗ್ರೆಸ್ ನಾಯಕ ಎನ್​ಹೆಚ್​ ಶಿವಶಂಕರ್ ರೆಡ್ಡಿ ವಾಸ್ತವ್ಯ ಇದ್ದ ಹೋಟೆಲ್​ ಮೇಲೆ ಸಹ ಚುನಾವಣಾಧಿಕಾರಿಗಳು ದಾಳಿ ಮಾಡಿದ್ದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:18 am, Thu, 23 November 23

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು