AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರದಲ್ಲೇ ರಾಷ್ಟ್ರೀಯ ಪಕ್ಷ ಸ್ಥಾಪನೆ: ಕೆಸಿಆರ್

K Chandrasekhar Rao ಕಳೆದ ತಿಂಗಳು ಕೆಸಿಆರ್  ಬಿಹಾರದ ಸಿಎಂ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರನ್ನು ಪಟನಾದಲ್ಲಿ ಭೇಟಿಯಾಗಿದ್ದರು, ಅಲ್ಲಿ ಅವರು "ಬಿಜೆಪಿ-ಮುಕ್ತ ಭಾರತ್" ಗೆ ಕರೆ ನೀಡಿದ್ದರು.

ಶೀಘ್ರದಲ್ಲೇ ರಾಷ್ಟ್ರೀಯ ಪಕ್ಷ ಸ್ಥಾಪನೆ: ಕೆಸಿಆರ್
ಕೆಸಿಆರ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Sep 11, 2022 | 7:59 PM

Share

ಊಹಾಪೋಹಗಳಿಗೆ ತೆರೆ ಎಳೆದಿರುವ ತೆಲಂಗಾಣ ಮುಖ್ಯಮಂತ್ರಿ ಮತ್ತು ತೆಲಂಗಾಣ ರಾಷ್ಟ್ರ ಸಮಿತಿ (TRS) ನಾಯಕ ಕೆ.ಚಂದ್ರಶೇಖರ್ ರಾವ್ (KCR) ಅವರು ಶೀಘ್ರದಲ್ಲೇ ರಾಷ್ಟ್ರೀಯ ಪಕ್ಷವನ್ನು ಪ್ರಾರಂಭಿಸಲಿದ್ದು ಅದರ ನೀತಿಗಳನ್ನು ರೂಪಿಸುವ ಕೆಲಸ ನಡೆಯುತ್ತಿದೆ ಎಂದು ಭಾನುವಾರ ಹೇಳಿದ್ದಾರೆ. ತೆಲಂಗಾಣ ಚಳವಳಿಯ ಆರಂಭದ ಮೊದಲು ನಾವು ಮಾಡಿದಂತೆ ಬುದ್ಧಿಜೀವಿಗಳು, ಅರ್ಥಶಾಸ್ತ್ರಜ್ಞರು ಮತ್ತು ವಿವಿಧ ಕ್ಷೇತ್ರಗಳ ತಜ್ಞರೊಂದಿಗೆ ಸುದೀರ್ಘ ಚರ್ಚೆಯ ನಂತರ ಪರ್ಯಾಯ ರಾಷ್ಟ್ರೀಯ ಕಾರ್ಯಸೂಚಿಯಲ್ಲಿ ಒಮ್ಮತವಿದೆ ಎಂದು ಕೆಸಿಆರ್ ಕಚೇರಿಯ ಅಧಿಕೃತ ಪ್ರಕಟಣೆ ತಿಳಿಸಿದೆ. “ಶೀಘ್ರದಲ್ಲೇ, ರಾಷ್ಟ್ರೀಯ ಪಕ್ಷದ ರಚನೆ ಮತ್ತು ಅದರ ನೀತಿಗಳ ರಚನೆ ನಡೆಯಲಿದೆ” ಎಂದು ಪ್ರಕಟಣೆಯಲ್ಲಿ ಹೇಳಿದೆ.  ಕೆಸಿಆರ್ ಅವರು ರಾಷ್ಟ್ರೀಯ ರಾಜಕೀಯದಲ್ಲಿ ಮಹತ್ವಾಕಾಂಕ್ಷೆ ಹೊಂದಿದ್ದು ಸಮಾನ ಮನಸ್ಕ ಪ್ರಾದೇಶಿಕ ಪಕ್ಷಗಳ ಬೆಂಬಲವನ್ನು ಒಗ್ಗೂಡಿಸಲು ನೋಡುತ್ತಿದ್ದಾರೆ. ಮೇ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆ ನಂತರ ಅವರು ಭಾನುವಾರ ಮಧ್ಯಾಹ್ನ ಹೈದರಾಬಾದ್‌ನಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜನತಾ ದಳ (ಜಾತ್ಯತೀತ) ನಾಯಕ ಎಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು. ಬಲ್ಲ ಮೂಲಗಳ ಪ್ರಕಾರ ಮಧ್ಯಾಹ್ನದ ಊಟದ ನಂತರ ಇಬ್ಬರೂ ರಾಷ್ಟ್ರ ರಾಜಕಾರಣದ ಪ್ರಸ್ತುತ ಸನ್ನಿವೇಶ ಮತ್ತು ಇತರ ವಿಷಯಗಳ ಬಗ್ಗೆ ಚರ್ಚಿಸಿದರು.

ಕಳೆದ ತಿಂಗಳು ಕೆಸಿಆರ್  ಬಿಹಾರದ ಸಿಎಂ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರನ್ನು ಪಟನಾದಲ್ಲಿ ಭೇಟಿಯಾಗಿದ್ದರು, ಅಲ್ಲಿ ಅವರು “ಬಿಜೆಪಿ-ಮುಕ್ತ ಭಾರತ್” ಗೆ ಕರೆ ನೀಡಿದ್ದರು. ಮೇ ತಿಂಗಳಲ್ಲಿ ಅವರು ಬೆಂಗಳೂರು ಹೊರತುಪಡಿಸಿ ದೆಹಲಿ ಮತ್ತು ಚಂಡೀಗಢಕ್ಕೂ ಭೇಟಿ ನೀಡಿದ್ದರು. ಪ್ರಾದೇಶಿಕ ನಾಯಕರೊಂದಿಗಿನ ಅವರ ಕೆಲವು ಚರ್ಚೆಗಳು ಕಾಂಗ್ರೆಸ್ ಅನ್ನು ಯಾವುದೇ ಫೆಡರಲ್ ಮೈತ್ರಿಯಿಂದ ಹೊರಗಿಡುವ ಬಗ್ಗೆ ಕೇಂದ್ರೀಕರಿಸಿದೆ ಎಂದು ಮೂಲಗಳು ತಿಳಿಸಿವೆ.

ಟಿಆರ್‌ಎಸ್ ಪದಾಧಿಕಾರಿಗಳ ಪ್ರಕಾರ, ಕೆಲವು ಪ್ರಾದೇಶಿಕ ನಾಯಕರು ಕೆಸಿಆರ್‌ನೊಂದಿಗೆ ಈ ಪ್ರಸ್ತಾಪಕ್ಕೆ ಸಮ್ಮತಿ ಸೂಚಿಸಿದ್ದರೂ ಕೆಲವರು ಖಚಿತವಾಗಿ ಒಪ್ಪಿಲ್ಲ. ಕೆಸಿಆರ್ ಅವರು ಎಡ ಪಕ್ಷಗಳು, ನಾಗರಿಕ ಸಮಾಜ ಮತ್ತು ಬುದ್ಧಿಜೀವಿಗಳ ಬೆಂಬಲವನ್ನು ಸಹ ಬಯಸುತ್ತಿದ್ದಾರೆ. ಕಳೆದ ವಾರ ಸಿಪಿಐ(ಎಂ)ನ ರಾಜ್ಯ ಕಾರ್ಯದರ್ಶಿ ತಮ್ಮಿನೇನಿ ವೀರಭದ್ರಂ, ಮಾಜಿ ಶಾಸಕ ಜೂಲಕಂಟಿ ರಂಗಾರೆಡ್ಡಿ ಮತ್ತು ಪಕ್ಷದ ಕೇಂದ್ರ ಸಮಿತಿ ಸದಸ್ಯ ಚೆರುಪಳ್ಳಿ ಸೀತಾರಾಮುಲು ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಅವರು ಸುಮಾರು ಒಂದು ಗಂಟೆ ಕಾಲ ಚರ್ಚೆ ನಡೆಸಿದ್ದರು.

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ