BJP-Mukt Bharat: ನಿತೀಶ್ ಕುಮಾರ್ ಬದಿಯಲ್ಲಿ ನಿಂತು ಬಿಜೆಪಿ ಮುಕ್ತ ಭಾರತದ ಆಸೆ ತೋಡಿಕೊಂಡ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್

ನಿತೀಶ್ ಅವರು ಬಿಜೆಪಿಯೊಂದಿಗಿನ ಸಂಖ್ಯೆ ಕಡಿದುಕೊಂಡ ಅವರನ್ನು ಮೊದಲ ಬಾರಿಗೆ ಭೇಟಿಯಾದ ಪ್ರಮುಖ ನಾಯಕ ಕೆ.ಚಂದ್ರಶೇಖರ್ ರಾವ್ ಪ್ರಧಾನಿ ಹುದ್ದೆಯ ತಮಗೂ ಕಣ್ಣಿದೆ ಎಂಬ ಸಂದೇಶ ರವಾನಿಸಿದ್ದಾರೆ.

BJP-Mukt Bharat: ನಿತೀಶ್ ಕುಮಾರ್ ಬದಿಯಲ್ಲಿ ನಿಂತು ಬಿಜೆಪಿ ಮುಕ್ತ ಭಾರತದ ಆಸೆ ತೋಡಿಕೊಂಡ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 31, 2022 | 9:28 PM

ಪಾಟ್ನಾ: ಹಲವು ಚುನಾವಣೆಗಳಲ್ಲಿ ಬಿಜೆಪಿ ನಾಯಕರು ಘೋಷಿಸುವ ‘ಕಾಂಗ್ರೆಸ್ ಮುಕ್ತ ಭಾರತ’ (Congress-Mukt Bhart) ಘೋಷಣೆಯನ್ನು ತುಸು ಬದಲಿಸಿದ ತೆಲಂಗಾಣ ಮುಖ್ಯಮಂತ್ರಿ, ತೆಲಂಗಾಣ ರಾಷ್ಟ್ರೀಯ ಸಮಿತಿ ಮುಖ್ಯಸ್ಥ ಕೆ.ಚಂದ್ರಶೇಖರ್ ರಾವ್ (Telangana CM K Chandrashekhar Rao) ‘ಬಿಜೆಪಿ ಮುಕ್ತ ಭಾರತ’ ಇಂದಿನ ಅಗತ್ಯ ಎಂದು ಘೋಷಿಸಿದರು. ದೇಶವ್ಯಾಪಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಗೆ ಹೊರತಾದ ಮೈತ್ರಿಕೂಟ ರಚಿಸಲು ಅವರು ದೇಶಾದ್ಯಂತ ಸಂಚರಿಸುತ್ತಿದ್ದಾರೆ. ಹಲವು ನಾಯಕರನ್ನು ಭೇಟಿಯಾಗಿ, ಸಂಘಟಿಸಲು ಪ್ರಯತ್ನಿಸುತ್ತಿದ್ದಾರೆ.

ಕಾಂಗ್ರೆಸ್ ಮತ್ತು ಬಿಜೆಪಿಗೆ ಹೊರತಾದ ಪಕ್ಷಗಳ ಮೈತ್ರಿ ರಚಿಸಲು ಹಲವು ವರ್ಷಗಳಿಂದ ಕೆಸಿಆರ್ ಪ್ರಯತ್ನಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಈ ಪ್ರಯತ್ನಕ್ಕೆ ಹೊಸ ವೇಗ ತಂದುಕೊಡಬಹುದು ಎಂದು ಹೇಳಲಾಗಿದೆ. ‘ನಮಗೆ ದೊಡ್ಡ ಕನಸು ಇದೆ’ ಎಂದು ನಿತೀಶ್ ಈಗಾಗಲೇ ಹಲವು ಬಾರಿ ಸ್ಪಷ್ಟಪಡಿಸಿದ್ದಾರೆ.

ಪಾಟ್ನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ತೃತೀಯ ರಂಗ ರೂಪಿಸಬೇಕು ಏಕೆ? ನಾವು ಪ್ರಧಾನ ರಂಗವನ್ನೇ ರೂಪಿಸಲು ಯತ್ನಿಸುತ್ತಿದ್ದೇವೆ’ ಎಂದು ಚಂದ್ರಶೇಖರ್ ರಾವ್ ಆತ್ಮವಿಶ್ವಾಸ ಪ್ರದರ್ಶಿಸಿದರು. ‘ಭಾರತದ ಎಲ್ಲ ವಿರೋಧಪಕ್ಷಗಳೂ ಒಂದಾಗಿ ಮುಂದೆ ಬಂದು, ಬಿಜೆಪಿ ಮುಕ್ತ ಭಾರತದ ಘೋಷಣೆ ಮೊಳಗಿಸಬೇಕು. ಭಾರತದ ಎಲ್ಲ ವಿರೋಧಪಕ್ಷಗಳನ್ನೂ ಸಂಘಟಿಸಲು ಪ್ರಯತ್ನಿಸುತ್ತೇವೆ’ ಎಂದು ನಿತೀಶ್ ಅವರ ಪರವಾಗಿ ಘೋಷಿಸಿದರು. ‘ನಾವು ಭಿನ್ನಮತಗಳನ್ನು ದೂರ ಮಾಡಿಕೊಂಡು, ಎಲ್ಲ ಸಮಾನಮನಸ್ಕ ಪಕ್ಷಗಳನ್ನು ಒಗ್ಗೂಡಿಸಲು ಪ್ರಯತ್ನಿಸುತ್ತಿದ್ದೇವೆ’ ಎಂದು ಕೆಸಿಆರ್ ತಿಳಿಸಿದರು.

ಪಾಟ್ನಾದಲ್ಲಿ ಕೆಸಿಆರ್ ಅವರು ನಿತೀಶ್ ಕುಮಾರ್ ಅವರೊಂದಿಗೆ ಸುಮಾರು ಒಂದು ತಾಸು ಮಾತನಾಡಿದರು. ಈ ವೇಳೆ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಸಹ ಉಪಸ್ಥಿತರಿದ್ದರು. ಬಿಜೆಪಿಯೊಂದಿಗೆ ಸಂಬಂಧ ಕಡಿದುಕೊಳ್ಳುವ ನಿತೀಶ್ ಕುಮಾರ್ ಅವರ ನಿರ್ಧಾರವು ವಿರೋಧ ಪಕ್ಷಗಳಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಬಿಜೆಪಿಯ ನರೇಂದ್ರ ಮೋದಿ ಅವರನ್ನು 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಎದುರಿಸಲು ಎಂಟು ಬಾರಿ ಬಿಹಾರದ ಮುಖ್ಯಮಂತ್ರಿಯಾಗಿರುವ ನಿತೀಶ್ ಕುಮಾರ್ ಅವರು ಸಮರ್ಥರು ಎಂಬ ವಿಶ್ವಾಸ ವಿರೋಧ ಪಕ್ಷಗಳಲ್ಲಿ ಮೂಡಿದೆ.

ಪ್ರಧಾನಿ ಹುದ್ದೆಯನ್ನು ಮನಸ್ಸಿನಲ್ಲಿ ಇರಿಸಿಕೊಂಡೇ ನಿತೀಶ್ ಕುಮಾರ್ ಅವರು ಬಿಜೆಪಿಯೊಂದಿಗೆ ಸಂಖ್ಯೆ ಕಡಿದುಕೊಂಡರು ಎಂದು ಬಿಜೆಪಿ ಹಲವು ಬಾರಿ ಆರೋಪಿಸಿತ್ತು. ಆದರೆ ನಿತೀಶ್ ಅವರು ಬಿಜೆಪಿಯೊಂದಿಗಿನ ಸಂಖ್ಯೆ ಕಡಿದುಕೊಂಡ ಅವರನ್ನು ಮೊದಲ ಬಾರಿಗೆ ಭೇಟಿಯಾದ ಪ್ರಮುಖ ನಾಯಕ ಕೆ.ಚಂದ್ರಶೇಖರ್ ರಾವ್ ಪ್ರಧಾನಿ ಹುದ್ದೆಯ ತಮಗೂ ಕಣ್ಣಿದೆ. ಪ್ರಧಾನಿ ಹುದ್ದೆಯನ್ನು ಅಷ್ಟು ಸುಲಭವಾಗಿ ಬಿಟ್ಟುಕೊಡುವುದಿಲ್ಲ ಎಂಬ ಸಂದೇಶ ರವಾನಿಸಿದರು.

‘ನಿತೀಶ್ ಕುಮಾರ್ ಅವರು ದೇಶದ ಪ್ರಸಿದ್ಧ ಹಿರಿಯ ನಾಯಕರು. ಮುಂದಿನ ದಿನಗಳಲ್ಲಿ ವಿರೋಧ ಪಕ್ಷಗಳು ಯಾವ ವಿಚಾರದ ಆಧಾರದ ಮೇಲೆ ಚುನಾವಣೆ ಎದುರಿಸಬೇಕು ಎನ್ನುವುದನ್ನು ನಿರ್ಧರಿಸುತ್ತದೆ. ಆಗ ಸರ್ವಸಮ್ಮತ ನಾಯಕನನ್ನು ಆರಿಸಲಾಗುವುದು’ ಎಂದು ಕೆಸಿಆರ್ ಹೇಳಿದರು. ಇಂದು ಮುಂಜಾನೆ ಪಾಟ್ನಾದಲ್ಲಿ ನಡೆದ ಸಮಾರಂಭದಲ್ಲಿ ಇಬ್ಬರೂ ನಾಯಕರು ಜಂಟಿಯಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ರಾಜ್ಯಗಳ ಅಗತ್ಯದ ಬಗ್ಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಅರಿವಿಲ್ಲ. ಕೇವಲ ಪ್ರಚಾರ ಮತ್ತು ಪ್ರಸಾರವನ್ನೇ ಸರ್ಕಾರದ ಉದ್ದೇಶವಾಗಿಸಿಕೊಂಡು ಆಡಳಿತ ನಡೆಸುತ್ತಿದೆ ಎಂದು ಹೇಳಿದ್ದರು.

Published On - 9:28 pm, Wed, 31 August 22

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್