ದೇವಸ್ಥಾನಗಳ ಹುಂಡಿ ಹಣ ಹಿಂದೂ ಧಾರ್ಮಿಕ ಆಚರಣೆಗೆ ಮಾತ್ರ ಬಳಕೆ: ಸಿದ್ದರಾಮಯ್ಯ ಸ್ಪಷ್ಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಕಾಂಗ್ರೆಸ್​ ಸರ್ಕಾರ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಮಂಡಿಸಿದೆ. ಈ ವಿಧೇಯಕಕ್ಕೆ ರಾಜ್ಯ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.

ದೇವಸ್ಥಾನಗಳ ಹುಂಡಿ ಹಣ ಹಿಂದೂ ಧಾರ್ಮಿಕ ಆಚರಣೆಗೆ ಮಾತ್ರ ಬಳಕೆ: ಸಿದ್ದರಾಮಯ್ಯ ಸ್ಪಷ್ಟನೆ
ಸಿಎಂ ಸಿದ್ದರಾಮಯ್ಯ
Follow us
ವಿವೇಕ ಬಿರಾದಾರ
|

Updated on:Feb 23, 2024 | 9:43 AM

ಬೆಂಗಳೂರು, ಫೆಬ್ರವರಿ 23: ಹಿಂದೂಯೇತರ ಸಮುದಾಯಗಳಿಗೆ ಹಿಂದೂ ದೇವಸ್ಥಾನಗಳ (Temples) ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ (Hindu Temples) ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ ಎನ್ನುವ ಬಿಜೆಪಿ (BJP) ನಾಯಕರ ಆರೋಪ ಸಂಪೂರ್ಣ ಕಪೋಲಕಲ್ಪಿತವಾಗಿದ್ದು ಅಮಾಯಕ ಹಿಂದೂಗಳನ್ನು ನಮ್ಮ ಸರ್ಕಾರದ ವಿರುದ್ಧ ಎತ್ತಿಕಟ್ಟುವ ದುರುದ್ದೇಶದಿಂದ ಬಿಜೆಪಿ ನಾಯಕರು ಇಂತಹ ಕ್ಷುಲಕ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ವಾಗ್ದಾಳಿ ಮಾಡಿದ್ದಾರೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ ವಿಚಾರವಾಗಿ ಬಿಜೆಪಿ ನಾಯಕ ಆರೋಪಕ್ಕೆ ತಿರುಗೇಟು ನೀಡಿದ ಅವರು, “ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಸಂಬಂಧಪಟ್ಟಂತೆ ಮಾತ್ರವೇ ಬಳಸಲಾಗುತ್ತದೆ” ಎಂದು ಸ್ಪಷ್ಟನೆ ನೀಡಿದ್ದಾರೆ.

“ಈ ನಿಧಿಯು 2003ರಲ್ಲಿ ಕಾಯಿದೆಯು ಜಾರಿಗೆ ಬಂದಾಗಿನಿಂದ ಧಾರ್ಮಿಕ ಕಾರ್ಯಗಳಿಗೆ ಮಾತ್ರವೇ ಬಳಕೆಯಾಗುತ್ತಿದ್ದು ಭವಿಷ್ಯದಲ್ಲಿಯೂ ಅದಕ್ಕೆ ಮಾತ್ರವೇ ಬಳಕೆಯಾಗಲಿದೆ. ಬೇರೆ ಯಾವುದೇ ಧರ್ಮದ ಜನರ ಅನುಕೂಲಕ್ಕಾಗಿ ಈ ಹಣವನ್ನು ಬಳಸಲಾಗುವುದಿಲ್ಲ. ದೇವಸ್ಥಾನಗಳ ಹಣವನ್ನು ಕೇವಲ ಹಿಂದೂ ಸಮುದಾಯದ ಏಳಿಗೆ ಮತ್ತು ಕಲ್ಯಾಣಕ್ಕೆ ಮಾತ್ರವೇ ಬಳಸಬೇಕೆನ್ನುವ ಬಾಧ್ಯತೆಯನ್ನು ಈ ನಿಧಿಯ ನಿಬಂಧನೆಗಳಲ್ಲಿ ಒತ್ತಿ ಹೇಳಲಾಗಿದೆ.” ಎಂದು ಕಿಡಿ ಕಾರಿದ್ದಾರೆ.

“ವಿಧಾನಸಭೆಯಲ್ಲಿ ಅಂಗೀಕರಿಸಲಾದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕವನ್ನು ರಾಜಕೀಯ ಕಾರಣಗಳಿಗಾಗಿ ತಪ್ಪಾಗಿ ಜನತೆಯ ಮುಂದಿರಿಸುವ ಪ್ರಯತ್ನವನ್ನು ಬಿಜೆಪಿ ಇಂದು ಮಾಡುತ್ತಿದೆ. 1997ರಲ್ಲಿ ಕಾಯಿದೆಯನ್ನು ಜಾರಿಗೊಳಿಸಿದಾಗಿನಿಂದಲೂ ಸಾಮಾನ್ಯ ಸಂಗ್ರಹಣಾ ನಿಧಿಯನ್ನು ಸೃಜಿಸಬೇಕು ಎನ್ನುವ ನಿಬಂಧನೆ ಕಾಯಿದೆಯಲ್ಲಿಯೇ ಅಡಕವಾಗಿದೆ. ಹೀಗಿದ್ದರೂ ಸಾಮಾನ್ಯ ಸಂಗ್ರಹಣಾ ನಿಧಿಯ ನಿಯಮಾವಳಿಗಳಲ್ಲಿ ಅಡಕವಾಗಿರುವ ಅಂಶಗಳಿಗೆ ವಿರುದ್ಧವಾಗಿ ಇಂತಹ ಆಪಾದನೆಗಳನ್ನು ಮಾಡಲಾಗುತ್ತಿದೆ”.

ತಿದ್ದುಪಡಿಗೂ ಮುನ್ನ

  1. ನಿವ್ವಳ ಆದಾಯ ಹತ್ತು ಲಕ್ಷ ರೂ. ಮೀರುವ ದೇವಸ್ಥಾನಗಳ ಒಟ್ಟು ವಾರ್ಷಿಕ ಆದಾಯದಿಂದ ಶೇ.10
  2. ನಿವ್ವಳ ವಾರ್ಷಿಕ ಆದಾಯ ಐದು ಲಕ್ಷ ರೂ. ಗಿಂತ ಹೆಚ್ಚಿದ್ದು ಹತ್ತು ಲಕ್ಷ ರೂ. ಮೀರದ ದೇವಸ್ಥಾನಗಳ ವಾರ್ಷಿಕ ಆದಾಯದಿಂದ ಶೇ.5 ಹಾಗೂ
  3. ರಾಜ್ಯ ಸರ್ಕಾರದಿಂದ ದೊರೆಯುತ್ತಿದ್ದ ಅನುದಾನ.

ತಿದ್ದುಪಡಿಯ ನಂತರ

  •  ಒಂದು ಕೋಟಿ ರೂ. ನಿವ್ವಳ ಆದಾಯ ಮೀರುವ ದೇವಸ್ಥಾನಗಳ ಒಟ್ಟು ವಾರ್ಷಿಕ ಆದಾಯದಿಂದ ಶೇ.10
  • ಹತ್ತು ಲಕ್ಷ ರೂ ನಿವ್ವಳ ಆದಾಯಕ್ಕಿಂತ ಹೆಚ್ಚಿದ್ದು ರೂ. 1 ಕೋಟಿ ಮೀರದ ಸಂಸ್ಥೆಗಳಿಂದ ಶೇ.5 ಹಾಗೂ
  • ರಾಜ್ಯ ಸರ್ಕಾರದಿಂದ ದೊರೆಯುವ ಅನುದಾನ.

“ನೂತನ ತಿದ್ದುಪಡಿಯನ್ನು ಸಾಮಾನ್ಯ ಸಂಗ್ರಹಣಾ‌ ನಿಧಿಯನ್ನು ಹೆಚ್ಚಿಸುವ ಏಕೈಕ ಉದ್ದೇಶದಿಂದ ಮಾಡಲಾಗಿದೆ. ಚುನಾವಣಾ ದೃಷ್ಟಿಯಿಂದ ಕೇವಲ ಕೋಮು ಧ್ರುವೀಕರಣದತ್ತಲೇ ಗಮನಹರಿಸುತ್ತಿರುವ ಬಿಜೆಪಿ ನಾಯಕರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಸಲುವಾಗಿ ಸಮಾಜದಲ್ಲಿನ ಶಾಂತಿ, ಸಾಮರಸ್ಯವನ್ನು ಕದಡಲು ಇಂತಹ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಅನೈತಿಕ ಹಾದಿ ತುಳಿದಿರುವ ಬಿಜೆಪಿ ನಾಯಕರು ತಮ್ಮ ಸಾರ್ವಜನಿಕ ವರ್ತನೆಗೆ ತಾವೇ ನಾಚಿಕೆಪಡಬೇಕಿದೆ.”

ಇದನ್ನೂ ಓದಿ: ಸಿದ್ದರಾಮಯ್ಯ ಎಷ್ಟು ಅವಧಿಗೆ ಮುಖ್ಯಮಂತ್ರಿ ಅಂತ ಕೇವಲ ನಾಲ್ವರಿಗೆ ಮಾತ್ರ ಗೊತ್ತು: ಪ್ರಿಯಾಂಕ್ ಖರ್ಗೆ

“ಕರ್ನಾಟಕದ ಸಾಮರಸ್ಯವನ್ನು ಕದಡುವ ದ್ರೋಹದ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದು ಇವರ ಈ ಸಂಚನ್ನು ಕನ್ನಡಿಗರು ನಿಷ್ಕ್ರಿಯಗೊಳಿಸಬೇಕಿದೆ. ಚುನಾವಣಾ ದೃಷ್ಟಿಯಿಂದ ಕೇವಲ ಕೋಮು ಧ್ರುವೀಕರಣದತ್ತಲೇ ಗಮನಹರಿಸುತ್ತಿರುವ ಬಿಜೆಪಿ ನಾಯಕರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಸಲುವಾಗಿ ಸಮಾಜದಲ್ಲಿನ ಶಾಂತಿ, ಸಾಮರಸ್ಯವನ್ನು ಕದಡಲು ಇಂತಹ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಅನೈತಿಕ ಹಾದಿ ತುಳಿದಿರುವ ಬಿಜೆಪಿ ನಾಯಕರು ತಮ್ಮ ಸಾರ್ವಜನಿಕ ವರ್ತನೆಗೆ ತಾವೇ ನಾಚಿಕೆಪಡಬೇಕಿದೆ.”

“ಪಕ್ಷದ ರಾಜ್ಯಾಧ್ಯಕ್ಷರಾಗಲು ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ವ್ಯಾಪಕವಾಗಿ ಹರುಡುವ ಸಾಮರ್ಥ್ಯ ಹೊಂದಿರಬೇಕು ಎನ್ನುವಂತಹ ಅಸ್ವಸ್ಥ ನಿಲುವಿಗೆ ಬಿಜೆಪಿ ಇಂದು ಬಂದಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಇದೇ ಕಾರಣಕ್ಕಾಗಿ ಬಿವೈ ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದಂತೆ ಕಾಣುತ್ತಿದೆ. ಅವರ ಜೊತೆ ಇತರೆ ನಾಯಕರು ಕೂಡಾ ಸುಳ್ಳಿನಲ್ಲಿ ಪೈಪೋಟಿ ನೀಡುತ್ತಿರುವಂತೆ ವರ್ತಿಸುತ್ತಿರುವುದು ಕರ್ನಾಟಕದ ದುರಂತವೇ ಸರಿ” ಎಂದು ಟ್ವೀಟ್​ ಮೂಲಕ ಕಿಡಿ ಕಾರಿದ್ದಾರೆ

ಇಂತಹ ದುಷ್ಟತನದ ಹುನ್ನಾರಗಳನ್ನು ಅರ್ಥಮಾಡಿಕೊಳ‍್ಳುವಷ್ಟು ಕನ್ನಡಿಗರು ಪ್ರಬುದ್ಧರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಆಳ್ವಿಕೆಯಲ್ಲಿ ಡಾಲರ್‌ ಎದುರು ರೂಪಾಯಿ ಕುಸಿಯುತ್ತಿರುವಂತೆ ಓರ್ವ ನಾಯಕನಾಗಿ ವಿಜಯೇಂದ್ರ ಅವರ ವಿಶ್ವಾಸಾರ್ಹತೆಯೂ ಕುಸಿಯುತ್ತಿರುವುದು ಸ್ಪಷ್ಟವಾಗಿದೆ ಎಂದರು.

ಇನ್ನು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕವನ್ನು ಪರಿಷತ್​ನಲ್ಲಿ ವಿರೋಧಿಸಲು ಬಿಜೆಪಿ ಸದಸ್ಯರ ತೀರ್ಮಾನಿಸಿದ್ದಾರೆ. ದೇವಸ್ಥಾನಗಳ ಸಾಮಾನ್ಯ ಸಂಗ್ರಹಣಾ ನಿಧಿಯ ಮೊತ್ತವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ವಿಧೇಯಕಕ್ಕೆ ತಿದ್ದುಪಡಿ ತಂದಿದೆ. ಆದರೆ ಸಾಮಾನ್ಯ ಸಂಗ್ರಹಣ ನಿಧಿಯ ಹೆಚ್ಚಳಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:41 am, Fri, 23 February 24

ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ