ಕಾಂತರಾಜ್ ವರದಿಯನ್ನು ಬೆಂಕಿಗೆ ಹಾಕಿ ಸುಡಬೇಕು; ಕೆಎಸ್​ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

ಕಾಂತರಾಜ್ ಆಯೋಗದ ವರದಿ ಬಗ್ಗೆ ಇಬ್ಬರು ಈಗ ಬಡಿದಾಡುತ್ತಿದ್ದಾರೆ. ನಾನೇ ಹಿಂದುಳಿದ ವರ್ಗಗಳ ಚಾಂಪಿಯನ್ ಅಂತ ಬಿಂಬಿಸಿಕೊಳ್ಳಲು ಸಿಎಂ ಯತ್ನಿಸುತ್ತಿದ್ದಾರೆ. 8 ವರ್ಷಗಳಿಂದ ಕಾಂತರಾಜ್‌ ವರದಿ ಬಗ್ಗೆ ಸಿಎಂ ಹೇಳುತ್ತಿದ್ದಾರೆ. ಹಿಂದುಳಿದ ವರ್ಗ, ದಲಿತರ ಉದ್ಧಾರ ಮಾಡುವುದು ಸಿಎಂ ಉದ್ದೇಶವಲ್ಲ ಎಂದು ಮಾಜಿ ಸಚಿವ ಕೆಎಸ್​ ಈಶ್ವರಪ್ಪ ವಾಗ್ದಾಳಿ ಮಾಡಿದರು

ಕಾಂತರಾಜ್ ವರದಿಯನ್ನು ಬೆಂಕಿಗೆ ಹಾಕಿ ಸುಡಬೇಕು; ಕೆಎಸ್​ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ
ಮಾಜಿ ಸಚಿವ ಕೆಎಸ್​ ಈಶ್ವರಪ್ಪ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on:Nov 03, 2023 | 3:31 PM

ಬೆಂಗಳೂರು ನ.03: ರಾಜ್ಯದಲ್ಲಿ ಜಾತಿ ಗಣತಿ (Caste Census) ವರದಿ ಬಿಡುಗಡೆಗೆ ಒತ್ತಾಯ ಕೇಳಿ ಬರುತ್ತಿರುತ್ತಿದ್ದು, ಈ ಮಧ್ಯೆ ಮಾಜಿ ಸಚಿವ ಕೆಎಸ್​ ಈಶ್ವರಪ್ಪ (KS Eshwarappa) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾಂತರಾಜ್ ವರದಿಯನ್ನು (Kantaraj Report) ತೆಗೆದುಕೊಂಡು ಹೋಗಿ ಬೆಂಕಿಗೆ ಹಾಕಿ ಸುಡಬೇಕು. ಕಾಂತರಾಜ್ ವರದಿಗೆ ಸದಸ್ಯ ಕಾರ್ಯದರ್ಶಿ ಸಹಿಯೇ ಇಲ್ಲ. ಕಾಂತರಾಜ್ ವರದಿಯನ್ನು ತೆಗೆದುಕೊಂಡು ಹೋಗಿ ಬೆಂಕಿಗೆ ಹಾಕಿ ಸುಡಬೇಕು. ಕಾಂತರಾಜ್ ಆಯೋಗದ ವರದಿಯ ಅವೈಜ್ಞಾನಿಕವಾಗಿದೆ. ರಾಜ್ಯದಲ್ಲಿ ಜಾತಿಗಣತಿ ವರದಿ ಬಿಡುಗಡೆಗೆ ನಾಮಕಾವಸ್ತೆ ಸಿದ್ಧತೆ ಮಾಡಿದ್ದಾರೆ ಎಂದು ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾಂತರಾಜ್ ಆಯೋಗದ ವರದಿ ಬಗ್ಗೆ ಇಬ್ಬರು ಈಗ ಬಡಿದಾಡುತ್ತಿದ್ದಾರೆ. ನಾನೇ ಹಿಂದುಳಿದ ವರ್ಗಗಳ ಚಾಂಪಿಯನ್ ಅಂತ ಬಿಂಬಿಸಿಕೊಳ್ಳಲು ಸಿಎಂ ಯತ್ನಿಸುತ್ತಿದ್ದಾರೆ. 8 ವರ್ಷಗಳಿಂದ ಕಾಂತರಾಜ್‌ ವರದಿ ಬಗ್ಗೆ ಸಿಎಂ ಹೇಳುತ್ತಿದ್ದಾರೆ. ನಾಳೆ ಬಾ ಅನ್ನೋದು ಸಿಎಂ ಸಿದ್ದರಾಮಯ್ಯರವರ ಘೋಷಣೆಯಾಗಿದೆ. ಹಿಂದುಳಿದ ವರ್ಗ, ದಲಿತರ ಉದ್ಧಾರ ಮಾಡುವುದು ಸಿಎಂ ಉದ್ದೇಶವಲ್ಲ ಎಂದು ವಾಗ್ದಾಳಿ ಮಾಡಿದರು.

ವರದಿ ಬಿಡುಗಡೆಯಾದರೇ ಕೋರ್ಟ್‌ನಲ್ಲಿ ಒಂದೇ ದಿನದಲ್ಲಿ ಬಿದ್ದುಹೋಗುತ್ತೆ. ಸಿಎಂ ಅವದ್ದು ಒಂದು ಅಭಿಪ್ರಾಯ, ಡಿಸಿಎಂ ಅವರು ಒಂದು ಅಭಿಪ್ರಾಯ ಹೊಂದಿದ್ದಾರೆ. ಒಂದೇ ಸರ್ಕಾರದಲ್ಲಿ ಎರಡು ಅಭಿಪ್ರಾಯಗಳಿವೆ. ಕಾಂತರಾಜ್ ರಿಪೋರ್ಟ್ ಬಗ್ಗೆ ಮೊದಲು ಸರ್ಕಾರ ತೀರ್ಮಾನ ಮಾಡಲಿ. ನಂತರ ವಿಪಕ್ಷವಾಗಿ ಬಿಜೆಪಿ ತನ್ನ ಅಭಿಪ್ರಾಯ ಹೇಳುತ್ತದೆ ಎಂದರು.

ಇದನ್ನೂ ಓದಿ: ನಾನೇ ಸಿಎಂ ಎಂದು ಹೇಳುವ ದೌರ್ಭಾಗ್ಯ ಸಿದ್ದರಾಮಯ್ಯಗೆ ಬರಬಾರದಿತ್ತು

ಜಾತಿ ಗಣತಿ ವರದಿ ಬಗ್ಗೆ ಬಿಜೆಪಿ ಅಭಿಪ್ರಾಯ ಕೇಳಲು ಅಲ್ಲಿಯ ತನಕ ಸರ್ಕಾರವೇ ಇರಲ್ಲ. ವ್ಯವಸ್ಥಿತವಾಗಿ ಇಡೀ ದೇಶಕ್ಕೆ ಅನ್ವಯವಾಗುವಂತೆ ರಿಸರ್ವೇಷನ್ ಬಗ್ಗೆ ಬಿಜೆಪಿ ಒಂದು ಸ್ಪಷ್ಟ ನಿಲುವು ತಳೆಯಲಿದೆ ಎಂದು ಹೇಳಿದರು.

ಒಬಿಸಿಯನ್ನು ಟಾರ್ಗೆಟ್​ ಮಾಡಿದೆಯಾ ಬಿಜೆಪಿ ?

ಇನ್ನೇನು ಆರೇಳು ತಿಂಗಳಲ್ಲಿ ಲೋಕಸಭಾ ಚುನಾವಣೆ ಬಂದೇ ಬಿಡುತ್ತದೆ. ಎಲ್ಲ ರಾಜಕೀಯ ಪಕ್ಷಗಳು ಸಿದ್ದತೆ ನಡೆಸಿವೆ. ಬಿಜೆಪಿ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಏರಲು ತಯಾರಾಗುತ್ತಿದೆ. ಕಳೆದ ಹಲವು ಚುನಾವಣೆಗಳಲ್ಲಿ ಧರ್ಮಾಸ್ತ್ರ ಪ್ರಯೋಗಿಸುತ್ತಿದ್ದ ಬಿಜೆಪಿ ಈ ಬಾರಿ ಜಾತಿ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ಹೌದು ಇದಕ್ಕೆ ಸೂಕ್ತ ನಿದರ್ಶನ ತೆಲಂಗಾಣ ವಿಧಾನಸಭೆ ಚುನಾವಣೆಗೆ ಹೆಚ್ಚು ಸಂಖ್ಯೆಯಲ್ಲಿ ಒಬಿಸಿ ನಾಯಕರಿಗೆ ಟಿಕೆಟ್​ ನಿಡಿದ್ದು ಮತ್ತು ಗುರುವಾರ (ನ.03) ರಂದು ದೆಹಲಿಯಲ್ಲಿ ನಡೆದಿದ್ದ ಒಬಿಸಿ ನಾಯಕರ ಸಭೆ.

ಹೌದು ವರಿಷ್ಠರ ಬುಲಾವ್​ ಮೇರೆಗೆ ರಾಜ್ಯದ ಹಿಂದುಳಿದ ವರ್ಗದ ನಾಯಕರಾದ ಕೆ.ಎಸ್.ಈಶ್ವರಪ್ಪ, ಕೋಟ ಶ್ರೀನಿವಾಸ್ ಪೂಜಾರಿ, ಸಂಸದ ಪಿ.ಸಿ.ಮೋಹನ್ ದೆಹಲಿಗೆ ತೆರಳಿದ್ದರು. ಈ ಸಭೆಯಲ್ಲಿ ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳ 40 ಜನ ಒಬಿಸಿ ನಾಯಕರು ಭಾಗವಹಿಸಿದ್ದರು. ಈ ಸಭೆಯಲ್ಲಿ ಹಲವು ಮಹತ್ವದ ವಿಷಯಗಳು ಚರ್ಚೆಯಾಗಿವೆ ಎನ್ನಲಾಗುತ್ತಿದೆ. ಹಾಗೇ ಹಿಂದುಳಿದ ನಾಯಕರಿಗೆ ಹೈ ನಾಯಕರು ಕೆಲವು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಕರ್ನಾಟಕದತ್ತ ಚಿತ್ತ ಹರಿಸಿದ ಬಿಜೆಪಿ ಹೈಕಮಾಂಡ್​, ಓಬಿಸಿ ನಾಯಕರ ಜತೆ ಚರ್ಚೆ ನಡೆಸಿದ್ದೇನು?

ಇನ್ನು ರಾಜ್ಯದಲ್ಲಿ ಕಾಂಗ್ರೆಸ್​​ ಜಾತಿ ಗಣತಿ ವರದಿ ಬಿಡುಗಡೆ ಮಾಡಲು ಮುಂದಾಗಿದ್ದು, ಇದಕ್ಕೆ ರಾಜ್ಯ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಈ ಜಾತಿ ಗಣತಿ ವರದಿ ಮೇಲೆ ಬಿಜೆಪಿಯ ಹೈಕಮಾಂಡ್​ ನಾಯಕರೂ ಕಣ್ಣು ಇಟ್ಟಿದ್ದಾರೆ.

ಹಿಂದುಳಿದ ವರ್ಗಗಳ ಬಗ್ಗೆ ಸ್ಪಷ್ಟವಾಗಿ ತಜ್ಞರ ಜೊತೆ ಎಲ್ಲಾ ಚರ್ಚೆ ಮಾಡಿ ಒಂದು ರೂಪ ತರಬೇಕು. ವ್ಯವಸ್ಥಿತವಾಗಿ ಇಡೀ ದೇಶಕ್ಕೆ ಅನ್ವಯವಾಗುವಂತೆ ಮೀಸಲಾತಿ ಬಗ್ಗೆ ಬಿಜೆಪಿ ಒಂದು ಸ್ಪಷ್ಟ ನಿಲುವು ತಳೆಯಲಿದೆ ಎಂದು ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಹೇಳುವ ಮೂಲಕ ದೆಹಲಿಯಲ್ಲಿ ವರಿಷ್ಠರ ಜೊತೆ ಚರ್ಚಿಸಲಾದ ವಿಷಯಗಳ ಬಗ್ಗೆ ಹಿಂಟ್​ ನೀಡಿದರು.

ತೆಲಂಗಾಣದಲ್ಲಿ ಬಿಜೆಪಿ ಟಿಕೆಟ್​ ಹಂಚಿಕೆ

ತೆಲಂಗಾಣದಲ್ಲಿ ಬಿಜೆಪಿ ಇದುವರೆಗೆ 53 ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಈ ಪೈಕಿ 14 ಸ್ಥಾನಗಳು ಎಸ್‌ಸಿ/ಎಸ್‌ಟಿಗೆ ನೀಡಲಾಗಿದ್ದು, ಉಳಿದ 39 ಸ್ಥಾನಗಳಲ್ಲಿ ಬಿಜೆಪಿ ಗರಿಷ್ಠ ಸ್ಥಾನಗಳನ್ನು ಹಿಂದುಳಿದ ವರ್ಗಕ್ಕೆ ಹಂಚಿಕೆ ಮಾಡಿದೆ. ಬಿಜೆಪಿ 13 ಸ್ಥಾನಗಳಲ್ಲಿ (ಶೇ 33) ರೆಡ್ಡಿ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ. ಆದರೆ, ಇತರ ಸಮುದಾಯದ ಜನರಿಗೆ 6 (ಶೇ 16) ಟಿಕೆಟ್ ನೀಡಲಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:00 pm, Fri, 3 November 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್