ಹೊಸ ಸಂಸತ್ ಭವನ ಕಟ್ಟಿದ್ದು ವಿಪಕ್ಷದವರಿಗೆ ಹೊಟ್ಟೆ ಉರಿ; ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಹೊಸ ಸಂಸತ್ ಭವನ ಕಟ್ಟಿದ್ದು ವಿಪಕ್ಷದವರಿಗೆ ಹೊಟ್ಟೆ ಉರಿಯಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಸಂಸತ್ ಭವನ ಭಾರತದ ಹೊಸ ಕನಸಿಗೆ ಹುರುಪು ತಂದಿದೆ ಎಂದರು.

ಹೊಸ ಸಂಸತ್ ಭವನ ಕಟ್ಟಿದ್ದು ವಿಪಕ್ಷದವರಿಗೆ ಹೊಟ್ಟೆ ಉರಿ; ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ
Follow us
ಕಿರಣ್ ಹನುಮಂತ್​ ಮಾದಾರ್
|

Updated on: May 28, 2023 | 3:14 PM

ನವದೆಹಲಿ: ಹೊಸ ಸಂಸತ್ ಭವನ ಕಟ್ಟಿದ್ದು ವಿಪಕ್ಷದವರಿಗೆ ಹೊಟ್ಟೆ ಉರಿಯಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ(Shobha Karandlaje) ಹೇಳಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಸಂಸತ್ ಭವನ ಭಾರತದ ಹೊಸ ಕನಸಿಗೆ ಹುರುಪು ತಂದಿದೆ. ನಿರ್ಲಕ್ಷಕ್ಕೆ ಒಳಗಾಗಿದ್ದ ನಮ್ಮ ಹೆಮ್ಮೆಯ ಚೋಳ ಧರ್ಮ ದಂಡ(ಸೆಂಗೋಲ್) ಸಂಸತ್ ಪ್ರವೇಶಿಸಿದೆ ಇಂದು(ಮೇ.28) ತುಂಬಾ ಆನಂದವಾಗಿದೆ. ಬ್ರಿಟಿಷರು ಕಟ್ಟಿಸಿದ ಸಂಸತ್​​ನಲ್ಲಿ ಕಾಂಗ್ರೆಸ್ಸಿಗರು ಎಂಜಾಯ್ ಮಾಡ್ತಿದ್ರು, ಇದೀಗ ಹೊಸ ಸಂಸತ್ ಭವನ ಕಟ್ಟಿದ್ದು ವಿರೋಧ ಪಕ್ಷಗಳಿಗೆ ಹೊಟ್ಟೆ ಉರಿಗೆ ಕಾರಣವಾಗಿದೆ. ದೇಶದ ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದರು.

ಮಾಜಿ ಪ್ರಧಾನಿ ಹೆಚ್​​.ಡಿ.ದೇವೇಗೌಡರು ಕಾರ್ಯಕ್ರಮದಲ್ಲಿ ಭಾಗಿ

ಇನ್ನು ಮಾಜಿ ಪ್ರಧಾನಿ ಹೆಚ್​​.ಡಿ.ದೇವೇಗೌಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಅವರ ದೊಡ್ಡತನ. ದೇಶದ ವಿಚಾರ ಬಂದಾಗ ಒಟ್ಟಿಗೆ ನಿಲ್ಲುತ್ತಾರೆ ಎಂದರು. ಇದೇ ವೇಳೆ ಶೃಂಗೇರಿ ಪುರೋಹಿತರು ಭಾಗವಹಿಸಿರುವುದು ನಮಗೆ ಹೆಮ್ಮೆಯಾಗಿದೆ. ಶೃಂಗೇರಿ ರಾಜಕೀಯ ಪಕ್ಷಕ್ಕೆ ಅಂಟಿಕೊಳ್ಳದ ಮಠ. ಪೂಜೆ, ಗಣಹೋಮ ಮಾಡಿದ್ದಾರೆ ನಾನು ತುಂಬಾ ಸಂತೋಷವಾಗಿದ್ದೇನೆ ಎಂದರು.

ಇದನ್ನೂ ಓದಿ:Wrestlers Protest: ನೂತನ ಸಂಸತ್ತಿನವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳ ಬಂಧನ

ನೂತನ ಸಂಸತ್ ಭವನ ಉದ್ಘಾಟಿಸಿದ ಪ್ರಧಾನಿ ಮೋದಿ

ಇನ್ನು ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್​ ಭವನದ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿದರು. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಆಸನದ ಬಳಿ ಐತಿಹಾಸಿಕ ರಾಜದಂಡ ಸೆಂಗೋಲ್​ ಸ್ಥಾಪಿಸಲಾಯಿತು. ಇದೇ ಸಂದರ್ಭದಲ್ಲಿ ಪೂಜೆ ಹಾಗೂ ಸರ್ವಧರ್ಮ ಪ್ರಾರ್ಥನೆ ನಡೆಯಿತು. ನೂತನ ಕಟ್ಟಡದ ಸ್ಮರಣ ಫಲಕವನ್ನು ಅನಾವರಣಗೊಳಿಸಿದರು. ಸಮಾರಂಭದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ಅಧೀನಂ ಗಣ್ಯರು ಉಪಸ್ಥಿತರಿದ್ದರು.

ಇನ್ನು ಇದೇ ವೇಳೆ ನೂತನ ಸಂಸತ್ ಭವನ ಕಟ್ಟಡ ನಿರ್ಮಾಣಕ್ಕಾಗಿ ಶ್ರಮಿಸಿದ ಕಾರ್ಮಿಕರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸನ್ಮಾನ ಮಾಡಿದರು. ಸಾಂಪ್ರದಾಯಿಕ ಶಾಲು ಹೊದಿಸಿ, ಸ್ಮರಣಿಕೆ ನೀಡುವ ಮೂಲಕ ಕಾರ್ಮಿಕರಿಗೆ ಪ್ರಧಾನಿ ಮೋದಿಯವರು ಗೌರವ ಸಲ್ಲಿಸಿದರು. ಆಗಸ್ಟ್ 14, 1947 ರಂದು ಬ್ರಿಟಿಷ್ ಗುಲಾಮಗಿರಿ ಆಳ್ವಿಕೆಯಿಂದ ಮುಕ್ತಿ ಪಡೆದ ಭಾರತಕ್ಕೆ ಅಧಿಕಾರವನ್ನು ಹಸ್ತಾಂತರಿಸುವ ಸೂಚಕವಾಗಿ ಸಂಗೋಲ್ ಅನ್ನು ಭಾರತೀಯರಿಗೆ ಬ್ರಿಟೀಷರು ನೀಡಿದ್ದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್