AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹಳ ವರ್ಷಗಳಿಂದ ಕಾಂಗ್ರೆಸ್-ಬಿಜೆಪಿ ನಡುವೆ ಒಳ ಒಪ್ಪಂದವಿದೆ: ಹೊಸ ಬಾಂಬ್​ ಸಿಡಿಸಿದ ಹೆಚ್​ಡಿ ಕುಮಾರಸ್ವಾಮಿ

ಬಹಳ ವರ್ಷಗಳಿಂದ ಕಾಂಗ್ರೆಸ್-ಬಿಜೆಪಿ ನಡುವೆ ಒಳ ಒಪ್ಪಂದವಿದೆ. ಲೋಕಸಭಾ ಚುನಾವಣೆ ಸೋಲಿನ ಸೇಡನ್ನು ನಾವು ತೀರಿಸಿಕೊಳ್ಳುತ್ತೀದ್ದೇವೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on:Apr 03, 2023 | 7:37 PM

Share

ಮಂಡ್ಯ: ಬಹಳ ವರ್ಷಗಳಿಂದ ಕಾಂಗ್ರೆಸ್​ ಬಿಜೆಪಿ ನಡುವೆ ಒಳ ಒಪ್ಪಂದವಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಹೊಸ ಬಾಂಬ್ ಸಿಡಿಸಿದ್ದಾರೆ. ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಪರೇಷನ್ ಕಮಲ ಆದಾಗಿಂದಲೂ ಇದೆಲ್ಲ ನಡೆಯುತ್ತಲೇ ಇದೆ. ಯಾವ ರೀತಿಯ ಒಪ್ಪಂದ ಮಾಡಿಕೊಂಡಿದ್ದಾರೆಂದು ತಿಳಿಯುತ್ತಿದೆ. ಕಳೆದ ಲೋಕಸಭಾ ಚುನಾವಣೆ ವೇಳೆ ಬಿಜೆಪಿ, ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡು JDS ಸೋಲಿಸಿದರು. ಮಂಡ್ಯ ಜಿಲ್ಲೆಯಲ್ಲಿ ಮತ್ತೆ ಕುತಂತ್ರ ರಾಜಕಾರಣಕ್ಕೆ ಮುಂದಾಗಿದ್ದಾರೆ. ಕಾಂಗ್ರೆಸ್, ಬಿಜೆಪಿ, ರೈತ ಸಂಘ ಒಗ್ಗೂಡಿ ಜಿಲ್ಲೆಯ ಜನತೆಗೆ ದ್ರೋಹ ಬಗೆಯುವ ಕೆಲಸಕ್ಕೆ ಮುಂದಾಗಿದ್ದಾರೆ. ಈ ಕುರಿತು ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಜನ ತೀರ್ಮಾನಿಸುತ್ತಾರೆ. ಮೇಲುಕೋಟೆ ಕ್ಷೇತ್ರದಲ್ಲಿ ಏನಾಗಿದೆ ಅಂತಾ ಈಗ ನೋಡುತ್ತಿಲ್ವಾ ಎಂದು ಪ್ರಶ್ನಿಸಿದರು. ಕಾಂಗ್ರೆಸ್, ರೈತ ಸಂಘ ಅಂತೆಲ್ಲ ಸೇರಿಕೊಳ್ಳುತ್ತಾರೆ ಎಂದು ಕಿಡಿಕಾರಿದರು.

ಎಲ್ಲಾ ಕ್ಷೇತ್ರದಲ್ಲೂ ಹೆಸರಿಗೆ ಬಹಿರಂಗವಾಗಿ JDS ಬಗ್ಗೆ ಮಾತನಾಡುತ್ತಾರೆ. ಬಹಳ ವರ್ಷಗಳಿಂದ ಕಾಂಗ್ರೆಸ್-ಬಿಜೆಪಿ ನಡುವೆ ಒಳ ಒಪ್ಪಂದವಿದೆ. ಲೋಕಸಭಾ ಚುನಾವಣೆ ಸೋಲಿನ ಸೇಡನ್ನು ನಾವು ತೀರಿಸಿಕೊಳ್ಳುತ್ತೀದ್ದೇವೆ. ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಕುತಂತ್ರದ ಫಲಿತಾಂಶ ಪಡೆಯಲಾಗಿದೆ. ಈ ಬಾರಿ ಮಂಡ್ಯ ಜಿಲ್ಲೆಯ ಜನರು ಆ ಸೇಡನ್ನು ತೀರಿಸಿಕೊಳ್ಳುತ್ತಾರೆ ಎಂದು ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ಹೋರಾಟದಲ್ಲಿ ಭಾಗಿಯಾಗಿದ್ದ ಕೆಲವರಿಂದ ಜಯಮೃತ್ಯುಂಜಯ ಸ್ವಾಮೀಜಿಗೆ ಧಮ್ಕಿ: ಅರವಿಂದ ಬೆಲ್ಲದ್ ಗಂಭೀರ ಆರೋಪ

ನಾರಾಯಣಗೌಡ ವಿರುದ್ಧ ಕಿಡಿಕಾರಿದ ಹೆಚ್​​.ಡಿ.ಕುಮಾರಸ್ವಾಮಿ

ನಾರಾಯಣಗೌಡ ವಿರುದ್ಧ ಕಿಡಿಕಾರಿದ ಹೆಚ್​​.ಡಿ.ಕುಮಾರಸ್ವಾಮಿ, ಆ ವ್ಯಕ್ತಿ ಎಲ್ಲಿದ್ದ, ಯಾವ ಪಕ್ಷದಿಂದ ಬೆಳೆದರು. ಸಚಿವ ಕೆ.ಸಿ.ನಾರಾಯಣಗೌಡ ಏಕೆ ಪಕ್ಷ ಬಿಟ್ಟು ಹೋದರು ಎಂದು ಪ್ರಶ್ನಿಸಿದರು. ಆ ವ್ಯಕ್ತಿ ಬಗ್ಗೆ ಚರ್ಚೆ ಮಾಡಲು ಆಗುತ್ತಾ, ಜನ ತೀರ್ಮಾನಿಸುತ್ತಾರೆ. ಪಕ್ಷ ಬಿಟ್ಟು ಹೋಗುವ ಮುನ್ನ ನನಗೆ ಟೋಪಿ ಹಾಕಿ ಹೋದರು. ಎಲ್ಲದಕ್ಕೂ ಮೇ 13ರಂದು ಉತ್ತರ ಸಿಗಲಿದೆ. ಸಿಟಿ ರವಿ, ಚಲುವರಾಯಸ್ವಾಮಿ ಫೋಟೋ ವೈರಲ್​ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಕಳೆದ ಚುನಾವಣೆಯಲ್ಲಿ BJP, ಕಾಂಗ್ರೆಸ್ ಒಟ್ಟಾಗಿ ಕೆಲಸ ಮಾಡಿದರು ಎಂದರು.

ಇದನ್ನೂ ಓದಿ: ನನ್ನ ವಿರುದ್ಧ ಸಿಎಂ, ಪ್ರಧಾನಿ ಮೋದಿ ಬಂದು ನಿಂತರು ನಾನು ಗೆಲ್ಲುವೆ: ಎಸ್​ಎಸ್ ಮಲ್ಲಿಕಾರ್ಜುನ

ಹಾಸನ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ಗಾಗಿ ತೀವ್ರ ಪೈಪೋಟಿ

ಹಾಸನ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ಗಾಗಿ ತೀವ್ರ ಪೈಪೋಟಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಗುರುವಾರ ಅಥವಾ ಶುಕ್ರವಾರ ಹೆಚ್‌ಡಿಡಿರಿಂದ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಜೆಡಿಎಸ್‌ ವರಿಷ್ಠ ಹೆಚ್‌.ಡಿ.ದೇವೇಗೌಡರು ದೆಹಲಿಗೆ ಹೋಗಿದ್ದಾರೆ. ಗುರುವಾರ ವಾಪಸ್​ ಬಂದ ಬಳಿಕ ಕೆಲ ಪ್ರಮುಖರನ್ನು ಕರೆಯಲು ಹೇಳಿದ್ದಾರೆ. ಪ್ರಮುಖರ ಸಭೆಯಲ್ಲಿ ಅಭಿಪ್ರಾಯ ಪಡೆದು ಹೆಚ್‌ಡಿಡಿರಿಂದ ನಿರ್ಧಾರ ಕೈಗೊಳ್ಳಲಾಗುವುದು. ಇಂದು ಜೆಡಿಎಸ್‌ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಬೇಕಿದೆ. ಬೆಂಗಳೂರಿಗೆ ಹೋಗಿ ಎರಡನೇ ಪಟ್ಟಿ ಫೈನಲ್ ಮಾಡುತ್ತೇನೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:37 pm, Mon, 3 April 23